ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ
Team Udayavani, Sep 26, 2020, 9:02 AM IST
ಗಂಗಾವತಿ: ಕಳೆದ ರಾತ್ರಿ ಸುರಿದ ಮಳೆಗಾಳಿಗೆ ಆನೆಗೊಂದಿ ಹಳೆ ಮಂಡಲ ವ್ಯಾಪ್ತಿಯ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ನೆಲಕ್ಕುರುಳಿ ಲಕ್ಷಾಂತರ ರೂ.ನಷ್ಟವಾಗಿದೆ.
ಶುಕ್ರವಾರ ಮಧ್ಯರಾತ್ರಿಯಿಂದ ಆರಂಭವಾಗಿರುವ ಮಳೆ ಬಿಟ್ಟು ಬಿಡದೇ ಸುರಿಯುತ್ತಿದೆ. ಆನೆಗೊಂದಿ, ಸಂಗಾಪೂರ, ಸಾಣಾಪೂರ,ಹನುಮನಹಳ್ಳಿ, ಜಂಗ್ಲಿ ರಂಗಾಪೂರ, ವಿರುಪಾಪೂರಗಡ್ಡಿ ಮತ್ತು ತಿರುಮಲಾಪೂರ ಗ್ರಾಮಗಳ ವ್ಯಾಪ್ತಿಯಲ್ಲಿ ಮುಂಗಡವಾಗಿ ನಾಟಿ ಮಾಡಲಾಗಿದ್ದ ಸೋನಾ ಮಸೂರಿ ಭತ್ತದ ಬೆಳೆ ಕಾಳುಕಟ್ಟುವ ಹಂತದಲ್ಲಿದ್ದು ಶುಕ್ರವಾರದ ಮಳೆ ನೂರಾರು ಎಕರೆಯ ಭತ್ತ ಸಂಪೂರ್ಣವಾಗಿ ನೆಲಕ್ಕುರುಳಿದ್ದು ರೈತರಿಗೆ ಲಕ್ಷಾಂತರ ರೂ.ನಷ್ಟವಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?
ಕಳೆದ ವರ್ಷದ ಭತ್ತದ ಬೆಳೆಗೆ ಸರಿಯಾದ ದರ ಸಿಗದೇ ಬಹುತೇಕ ಭತ್ತವನ್ನು ಮಾರಾಟ ಮಾಡದೇ ಸಂಗ್ರಹ ಮಾಡಿದ್ದು ಪುನಹ ಪ್ರಕೃತಿ ವಿಕೋಪದ ಕಾರಣಕ್ಕಾಗಿ ಮಳೆಗಾಳಿಗೆ ಭತ್ತ ನೆಲಕ್ಕುರುಳಿ ನಷ್ಟವುಂಟಾಗಿದೆ.
ರೈತರ ನೆರವಿಗೆ ಮನವಿ: ಮಳೆಗಾಳಿಗೆ ನೆಲಕ್ಕೆ ಬಿದ್ದಿರುವ ಭತ್ತದ ಬೆಳೆಗೆ ಸಾವಿರಾರು ರೂ. ಖರ್ಚು ಮಾಡಿದ್ದು ಮಳೆಯಿಂದ ನಷ್ಟವಾಗಿದೆ. ಕೂಡಲೇ ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೇ ನಡೆಸಿ ನಷ್ಟಪರಿಹಾರ ದೊರಕಿಸಬೇಕು. ಸರಕಾರ ರೈತರ ನೆರವಿಗೆ ಬರಬೇಕೆಂದು ನಷ್ಟಗೊಂಡಿರುವ ರೈತರ ಪರವಾಗಿ ಶರೀಪ್ ಪಟವಾರಿ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.