ಮಾರ್ಗಸೂಚಿ ಪಾಲಿಸಿ: ಡಿಸಿ
Team Udayavani, Aug 22, 2020, 3:54 PM IST
ಕೊಪ್ಪಳ: ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗಣೇಶ ಉತ್ಸವವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಆಚರಿಸಬೇಕೆಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಕೋವಿಡ್ ವೈರಸ್ ಹರಡುವಿಕೆ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ರ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡುವಂತಿಲ್ಲ. ಗಣೇಶ ಚತುರ್ಥಿ ಹಬ್ಬದ ಸಂಬಂಧ ಯಾವುದೇ ಡಿಜೆ ಸೌಂಡ್ ಸಿಸ್ಟಂ ಬಳಸಲು ಅನುಮತಿಯಿಲ್ಲ. ಈ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಸಮೀಪದ ಹೊಂಡ ಅಥವಾ ಮೊಬೈಲ್ ಟ್ಯಾಂಕ್, ಕೃತಕ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀಗಣೇಶ ಮೂರ್ತಿ ವಿಸರ್ಜನೆ ಮಾಡಬಾರದು. ಈ ಆದೇಶಉಲ್ಲಂಘಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಗಣೇಶೋತ್ಸವ ಸಮಿತಿಗಳ ನಿರಾಸಕ್ತಿ : ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೂ ಸರಕಾರ ಕಡಿವಾಣ ಹಾಕಿದ್ದರಿಂದ ಹಬ್ಬದ ಸಡಗರ ಕಾಣುತ್ತಿಲ್ಲ. ಪ್ರತಿವರ್ಷ ಪಟ್ಟಣದಲ್ಲಿ ಮಹಾರಾಷ್ಟ್ರದ ವಿವಿಧೆಡೆಯಿಂದ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬರುತ್ತಿದ್ದವು. ಆದರೆ ಸರಕಾರದ ಕೆಲ ನಿರ್ಬಂಧ ವಿಧಿ ಸಿದ್ದರಿಂದ ಈ ಬಾರಿ ದೊಡ್ಡ ಮೂರ್ತಿಗಳು ಮಾರಾಟಕ್ಕೆ ಲಭ್ಯವಿಲ್ಲ. ಇದರಿಂದ ಗಣೇಶೋತ್ಸವ ಸಮಿತಿಗಳಲ್ಲಿಸಂಭ್ರಮ ಎಂದಿನಂತಿಲ್ಲ. ಒಂದೇ ದಿನ ಗಣೇಶನನ್ನು ಪ್ರತಿಷ್ಠಾಪಿಸಿ ವಿಸರ್ಜನೆ ಮಾಡುವುದು ಸಂಘಟನೆಗಳಿಗೆ ಇಷ್ಟವಿಲ್ಲದ ಕಾರಣ ಈ ಬಾರಿ ಗಣೇಶೋತ್ಸವ ಆಚರಣೆ ಯುವಕರಲ್ಲಿ ನಿರಾಸೆ ಮೂಡಿಸಿದೆ.
ಇನ್ನು ಮಾರುಕಟ್ಟೆಗಳಲ್ಲಿ ಈ ಬಾರಿ ಸಣ್ಣಪುಟ್ಟ ಗಣೇಶ ಮೂರ್ತಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಇಟ್ಟಿದ್ದು, ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡುವವರು ಗಣೇಶನ ಖರೀದಿ ಮಾಡಿದರು. ಹವಾಮಾನ ವೈಪರಿತ್ಯದಿಂದ ತುಂತುರು ಮಳೆಯಿಂದ ಮಾರುಕಟ್ಟೆಯಲ್ಲೂ ಹೂವು, ಹಣ್ಣುಗಳ ಬೆಲೆ ಕೂಡ ಗಗನಕ್ಕೇರಿದ್ದು, ಹಬ್ಬದಾಚರಣೆ ದುಬಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.