ಎರಡೇ ಕೊಠಡಿಗಳಲ್ಲಿ ನಾಲ್ಕು ತರಗತಿ ಮಕ್ಕಳಿಗೆ ಪಾಠ
Team Udayavani, Dec 22, 2019, 3:02 PM IST
ಕನಕಗಿರಿ: ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಆದರೆ ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ಒದಗಿಸದೇ ಇರುವುದರಿಂದ ಎರಡು ಕೊಠಡಿಗಳಲ್ಲಿ ನಾಲ್ಕು ತರಗತಿಗಳನ್ನು ನಡೆಸಬೇಕಾದ ಪರಿಸ್ಥಿತಿ ಸಮೀಪದ ಗೋಡಿನಾಳ ಗ್ರಾಮದ ಸ.ಕಿ.ಪ್ರಾ. ಶಾಲೆಯಲ್ಲಿ ನಿರ್ಮಾಣವಾಗಿದೆ.
ಶಾಲೆಯಲ್ಲಿ 1ರಿಂದ 5 ತರಗತಿಯವರೆಗೆ ಒಟ್ಟು 130 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಶಾಲೆಯಲ್ಲಿ ಮೂರು ಕೊಠಡಿಗಳು ಮಾತ್ರ ಇದ್ದು, ಎರಡು ಕಟ್ಟಡದಲ್ಲಿ ನಾಲ್ಕು ತರಗತಿಗಳನ್ನು ನಡೆಲಾಗುತ್ತಿದೆ. ಇನ್ನೂಳಿದ ಒಂದು ತರಗತಿಯನ್ನು ಕಾರ್ಯಾಲಯಕ್ಕೆ ಬಳಸುತ್ತಿದ್ದು, ಇದೇ ಕಾರ್ಯಾಲಯದಲ್ಲಿ 5ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಇದು ಕೂಡ ಶಿಥಿಲಾವಸ್ಥೆ ತಲುಪಿದೆ. ಕೊಠಡಿಗಳ ಕೊರತೆಯಿಂದ ಮಕ್ಕಳ ತಾವು ಯಾವ ತರಗತಿ ಕಲಿಯುತ್ತಿವೆ ಎಂಬ ಗೊಂದಲದಲ್ಲಿದ್ದಾರೆ. ಮೂರು ಕೊಠಡಿಗಳ ಅವಶ್ಯಕತೆ ಇದ್ದು, ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಶಾಲಾ ಆವರಣದಲ್ಲಿ ಪಾಠ ಬೋಧನೆ ಮಾಡಲಾಗುತ್ತಿದೆ.
ಮನವಿಗೆ ಸ್ಪಂದನೆ ಇಲ್ಲ: ಶಾಲೆಯಲ್ಲಿ ಕೊಠಡಿ ಕೊರತೆ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮುಖ್ಯ ಶಿಕ್ಷಕರು ಹಾಗೂ ಗ್ರಾಮಸ್ಥರು ಮನವಿ ಮಾಡಿದರೂ ಯಾವುದೇ ಸ್ಪಂದನೆ ಇಲ್ಲದಂತಾಗಿದೆ. ಕೊಠಡಿಗಳ ನಿರ್ಮಾಣಕ್ಕಾಗಿ ಗ್ರಾಮಸ್ಥರು ದೇಣಿಗೆ ಸಂಗ್ರಹಿಸಿ ಜಾಗೆ ಖರೀದಿಸಿದ್ದಾರೆ. ಆದರೆ ಕೊಠಡಿ ಕೊರತೆ ಬಗ್ಗೆ ಪ್ರತಿ ವರ್ಷ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಶಾಸಕ ಬಸವರಾಜ ದಢೇಸುಗೂರು ಅವರು ಇತ್ತೀಚೆಗೆ ನವಲಿ ಗ್ರಾಮದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕ್ಷೇತ್ರದ ವ್ಯಾಪ್ತಿಯ ಶಾಲೆಗಳಲ್ಲಿ ಕೊಠಡಿ ಕೊರತೆ ಕಂಡುಬಂದರೆ ಮಾಹಿತಿ ಒದಗಿಸಿದರೆ ಸಮಸ್ಯೆ ನಿವಾರಿಸಲಾಗುವುದು ಎಂಬ ಭರವಸೆ ನೀಡಿದ್ದರು. ಆದರೆ ಶಾಸಕರು ನೀಡಿದ ಭರವಸೆ ಕಾರ್ಯ ರೂಪಕ್ಕೆ ಬಂದಿಲ್ಲ. ಶಾಸಕರ ಮಾತಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಶಾಲೆಯಲ್ಲಿರುವ ಕೊಠಡಿಗಳ ಕೊರತೆಯ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಕೊಠಡಿಗಳ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಹಾಗೂ ಶಾಸಕರು ಇತ್ತ ಗಮನ ಹರಿಸಿ ಕೊಠಡಿಗಳು ಸಮಸ್ಯೆ ಪರಿಹರಿಸಬೇಕಾಗಿದೆ. -ವೀರೇಶ, ವಿದ್ಯಾರ್ಥಿಗಳು ಪಾಲಕರು
-ಶರಣಪ್ಪ ಗೋಡಿನಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.