ಸಾಮಾಜಿಕ ಅಂತರ ಮರೆತು ಬಟ್ಟೆ ಅಂಗಡಿಗಳಲ್ಲಿ ಜನದಟ್ಟಣೆ 40ಸಾವಿರ ರೂ.ದಂಡ
Team Udayavani, May 8, 2020, 10:07 PM IST
ಗಂಗಾವತಿ: ಕೊವಿಡ್-19 ಸಂಬಂಧಿತ ಸಾಮಾಜಿಕ ಅಂತರದ ಮುನ್ನೆಚ್ಚರಿಕೆಯನ್ನು ಮರೆತ ಇಲ್ಲಿಯ ಬಟ್ಟೆ ಅಂಗಡಿ ಮಾಲಿಕರು ತುಂಬು ಗ್ರಾಹಕರ ನಡುವೆ ಭರ್ಜರಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದಾರೆ.
ಕೊಪ್ಪಳ ಜಿಲ್ಲೆಯನ್ನು ಗ್ರೀನ್ ಝೋನ್ ಗೆ ಸೇರ್ಪಡೆ ಮಾಡಿದ ನಂತರ ಗಂಗಾವತಿಯಲ್ಲಿ ವ್ಯಾಪಾರ ವಹಿವಾಟು ನಡಸಲು ಲಾಕ್ ಡೌನ್ ಸಡಿಲಿಸಲಾಗಿದೆ. ಸಾಮಾಜಿಕ ಅಂತರ ಮತ್ತು ಕೋವಿಡ್ ಸುರಕ್ಷತಾ ಕ್ರಮಗಳ ಮುನ್ನೆಚ್ಚರಿಕೆ ಮಧ್ಯ ನಗರದಲ್ಲಿ ಬಟ್ಟೆ ಅಂಗಡಿಗಳನ್ನು ಆರಂಭಿಸಲು ಪರವಾನಿಗೆ ನೀಡಲಾಗಿದೆ.
ಆದರೆ ಈ ನಿಯಮಗಳನ್ನೆಲ್ಲಾ ಗಾಳಿಗೆ ತೂರಿರುವ ಇಲ್ಲಿನ ಬಟ್ಟೆ ಅಂಗಡಿ ಮಾಲಿಕರು ಕಳೆದ ಒಂದು ವಾರದಿಂದ ಅಂಗಡಿ ಆರಂಭಿಸಿದ್ದು, ಮಾಸ್ಕ್ ಸ್ಯಾನಿಟೈಜರ್ ಸೇರಿ ಗ್ರಾಹಕರ ಮತ್ತು ಉದ್ಯೋಗಿಗಳ ಆರೋಗ್ಯದ ದೃಷ್ಟಿಯಿಂದ ಯಾವುದೆ ಸುರಕ್ಷತಾ ಕ್ರಮ ಅನುಸರಿಸುತ್ತಿಲ್ಲ.
ಇನ್ನೊಂದೆಡೆ ಬಟ್ಟೆ ಅಂಗಡಿಗಳಲ್ಲಿ ಗ್ರಾಹಕರ ದಟ್ಟಣೆಯೂ ಹೆಚ್ಚಾಗಿದೆ. ನಗರ ಮತ್ತು ಗ್ರಾಮೀಣ ಭಾಗದಿಂದ ಜನರು ಬಟ್ಟೆ ಖರೀದಿಗೆ ಆಗಮಿಸುತ್ತಿದ್ದಾರೆ ಮತ್ತು ಇವರಲ್ಲಿ ಯಾರಾದರೂ ಸೋಂಕು ಪೀಡಿತರಿದ್ದರೆ ಅಥವಾ ಸೋಂಕುಪೀಡಿತರೊಂದಿಗೆ ಸಂಪರ್ಕ ಹೊಂದಿದವರಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಆದರೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಇಲ್ಲಿನ ಬಟ್ಟೆ ವ್ಯಾಪಾರಿಗಳು ಕೇವಲ ಲಾಭದ ದೃಷ್ಟಿಯಿಂದ ವ್ಯಾಪಾರ ಮಾಡುತ್ತಿರುವುದು ಕಳವಳಕಾರಿ ವಿಷಯವಾಗಿದೆ.
ಬಟ್ಟೆ ಅಂಗಡಿ ಬಂದ್ ಗೆ ಆಗ್ರಹ: ನಗರದಲ್ಲಿ ಬಟ್ಟೆ ಅಂಗಡಿಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಮಾಸ್ಕ್ ಇಲ್ಲದೆ ಅಂಗಡಿಗಳಲ್ಲಿ ನೂರಾರು ಜನರು ಸೇರುತ್ತಿದ್ದು ಮುಂದೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕಿರಾಣಿ ಮತ್ತು ಅಗತ್ಯ ವಸ್ತುಗಳ ಅಂಗಡಿಗಳ ಹೊರತು ಬಟ್ಟೆ ಅಂಗಡಿ ಸೇರಿ ಇತರೆ ಅಂಗಡಿ ಬಂದ್ ಮಾಡಿಸುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ.
40ಸಾವಿರ ರೂ.ದಂಡ
ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ಲಕ್ಷ್ಯ ಮಾಡಿ ಜನದಟ್ಟಣೆಯಿಂದ ಬಟ್ಟೆ ಅಂಗಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದ ನಗರದ ಸುಮಾರು ಹತ್ತು ಬಟ್ಟೆ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಈ ಅಂಗಡಿಗಳ ಮಾಲಿಕರಿಂದ 40 ಸಾವಿರ ರೂ.ದಂಡ ಪಡೆದುಕೊಂಡಿದ್ದಾರೆ. ಈತನ್ಮಧ್ಯೆ ಬಟ್ಟೆ ಅಂಗಡಿಗಳನ್ನು ಬಂದ್ ಮಾಡುವಂತೆ ವಿವಿಧ ಸಂಘಟನೆಯ ಮುಖಂಡರು ಒತ್ತಾಯಿಸಿರುವುದು ಹೌದು ಎಂದು ಪೌರಾಯುಕ್ತ ಗಂಗಾಧರ ಅವರು ಉದಯವಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.