ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಉಚಿತ ವಾಹನ ಸೇವೆ
Team Udayavani, May 6, 2021, 6:25 PM IST
ಕೊಪ್ಪಳ: ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯು ಕೋವಿಡ್ ಸೋಂಕಿತರನ್ನ ಆಸ್ಪತ್ರೆಗೆ ಕರೆ ತರಲು ತಾಲೂಕಿಗೆ ಎರಡರಂತೆ ರಾಜ್ಯದಲ್ಲಿ 350 ಉಚಿತ ವಾಹನ ಸೇವೆ ಕಲ್ಪಿಸುವ ಮೂಲಕ ಸಮಾಜಿಕ ಕಳಕಳಿ ಮೆರೆದಿದೆ. ನಗರದ ಕುಷ್ಟಗಿ ರಸ್ತೆಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಚೇರಿ ಆವರಣದಲ್ಲಿ ವಾಹನಗಳಿಗೆ ಚಾಲನೆ ನೀಡಲಾಯಿತು.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿವೆ. ಸರ್ಕಾರವು ಕರ್ಪ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಸರಿಯಾದ ಸಾರಿಗೆ, ವಾಹನದ ವ್ಯವಸ್ಥೆ ಇಲ್ಲದಂತಾಗಿದೆ. ಕೋವಿಡ್ ಪರೀಕ್ಷೆ ಮಾಡಿಸಿ ಸೋಂಕು ದೃಢಪಟ್ಟ ವ್ಯಕ್ತಿಗಳನ್ನ ಹಾಗೂ ತೀರ್ವ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ಆಸ್ಪತ್ರೆಗೆ ಕರೆ ತರಲು ಎರಡು ಉಚಿತ ವಾಹನಗಳ ವ್ಯವಸ್ಥೆ ಮಾಡಿದೆ. ಇದರ ಸೌಲಭ್ಯ ಪಡೆಯುವಂತೆ ಕೊಪ್ಪಳ ಜಿಲ್ಲಾ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಿರ್ದೇಶಕ ಸದಾನಂದ ಬಗೇರಾ ತಿಳಿಸಿದ್ದಾರೆ.
ಈ ವೇಳೆ ಶ್ರೀಕ್ಷೇತ್ರ ಧರ್ಮಸ್ಥಳ ತಾಲೂಕು ಯೋಜನಾ ಅಧಿಕಾರಿ ಅಜೀತ ಹೆಗಡೆ, ಸಿಬ್ಬಂದಿಗಳಾದ ರಮೇಶ ಜಿ, ಮಹಾದೇವ, ಪ್ರಶಾಂತ, ಮಂಜುನಾಥ, ಹೇಮವತಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.