ಜ್ವರಬಾಧೆಗೆ ಮೆತ್ತಗಾದ “ಗಬ್ಬೂರು’
Team Udayavani, Nov 15, 2019, 2:15 PM IST
ಕೊಪ್ಪಳ: ತಾಲೂಕಿನ ಗಬ್ಬೂರು ಗ್ರಾಮದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ಜ್ವರ ಬಾಧೆಯಿಂದ ಬಳಲುತ್ತಿದ್ದು, ಜಿಲ್ಲಾಸ್ಪತ್ರೆ ಸೇರಿದಂತೆ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಿಂಗಳಿಂದಲೂ ಜ್ವರ ಬಾಧೆಯಿಂದ ಬಳಲುತ್ತಿರುವ ಇಲ್ಲಿಯ ಜನರು ಕೈ, ಕಾಲು, ಕೀಲು ನೋವು, ಮೈ ಕೈನೋವು, ಜ್ವರ ಸೇರಿದಂತೆ ಒಂದಿಲ್ಲೊಂದು ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಗ್ರಾಮದ ಪ್ರತಿ ಮನೆಯಲ್ಲೂ ಒಬ್ಬರು ಅಥವಾ ಇಬ್ಬರು ಜ್ವರದಿಂದ ಬಳಲುತ್ತಿದ್ದಾರೆ. ಜ್ವರದಿಂದ ಬಳಲುವ ಜನರನ್ನು ಏನಾಗಿದೆ ಎಂದು ಯಾರೂ ಕೇಳುತ್ತಿಲ್ಲ. ಇಲ್ಲಿ ಚಿಕಿತ್ಸೆ ನೀಡುತ್ತಿಲ್ಲ. ಜನಪ್ರತಿನಿಧಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ. ಜನರ ನರಳಾಟ ಹೇಳ ತೀರದಂತಾಗಿದೆ. ಸರ್ಕಾರಿ ವೈದ್ಯರು ಮಾತ್ರ ಇತ್ತ ಗಮನ ಹರಿಸಿಲ್ಲ ಎನ್ನುವುದು ಗ್ರಾಮಸ್ಥರ ಆಪಾದನೆ. ಕೆಲ ದಿನಗಳ ಹಿಂದೆ ತಾಲೂಕಿನ ದನಕನದೊಡ್ಡಿ ಗ್ರಾಮದಲ್ಲಿ ಶಂಕಿತ ಡೆಂಘೀ ಜ್ವರ ಬಾಧೆ ಹೆಚ್ಚಾಗಿತ್ತು. ಇಲ್ಲಿಯ ಜನರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಈಗ ತಾಲೂಕಿನ ಗಬ್ಬೂರು ಗ್ರಾಮದಲ್ಲೂ ಅದೇ ಪರಿಸ್ಥಿತಿ ಎದುರಾಗಿದೆ. ಸಮೀಪದ ಗಿಣಗೇರಿಯಲ್ಲೂ ಜ್ವರದಿಂದ ಜನ ಭಯಗೊಂಡಿದ್ದು, ಜ್ವರಕ್ಕೆ ಇಡೀ ಊರಿನ ಜನರೆ ಬೆಚ್ಚಿ ಬಿದ್ದಿದ್ದಾರೆ. ಸರ್ಕಾರಿ ಆಸ್ಪತ್ರೆಯಿದ್ದರೂ ಗ್ರಾಮಸ್ಥರಿಗೆ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ. ಜನರು ಭಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ನಾಲ್ಕಾರು ದಿನಗಳ ಕಾಲ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರು ಇಷ್ಟೆಲ್ಲಾ ನರಳುತ್ತಿದ್ದರೂ ಯಾವ ಅಧಿಕಾರಿಯೂ ಇತ್ತ ತಿರುಗಿ ನೋಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಿಣಗೇರಿ, ದನಕನದೊಡ್ಡಿ, ಚಾಮಲಾಪೂರ ಸೇರಿದಂತೆ ನೀರಾವರಿ ಪ್ರದೇಶದಲ್ಲಿ ಹೆಚ್ಚು ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಸರ್ಕಾರಿ ಆಸ್ಪತ್ರೆಗಳು ಎಂದರೆ ಜನರೇ ಮೂಗು ಮುರಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿ ಗ್ರಾಮದಲ್ಲೂ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ. 10 ಮನೆಗಳ ಪೈಕಿ 2 ಮನೆಯಲ್ಲಿ ಲಾರ್ವಾ ಇರುವುದು ಪತ್ತೆಯಾಗುತ್ತಿದೆ. ಆ ಲಾರ್ವಾ ನಾಶ ಮಾಡುವ ಕುರಿತು ಆಶಾಗಳು ಸೇರಿದಂತೆ ಆರೋಗ್ಯ ಇಲಾಖೆ ತಂಡವು ಜಾಗೃತಿ ಕೈಗೊಳ್ಳುತ್ತಿದೆ ಎಂದು ಆರೋಗ್ಯ ಇಲಾಖೆ ಹೇಳುತ್ತಿದೆ. ಆದರೆ ಜ್ವರಬಾಧೆ ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ.
ನಮ್ಮ ಗ್ರಾಮದಲ್ಲಿ ಕಳೆದೊಂದು ತಿಂಗಳಿಂದ ಡೆಂಘೀ ಜ್ವರ ಹೆಚ್ಚಾಗಿ ಕಾಣಿಸಿಕೊಂಡಿದೆ. 120ಕ್ಕೂ ಹೆಚ್ಚು ಜನರು ಜ್ವರದಿಂದ ಬಳಲಿ ಗಿಣಗೇರಿ, ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಹತ್ತಾರುಸಾವಿರ ವೆಚ್ಚವಾಗುತ್ತಿದೆ. ಇಲ್ಲಿವರೆಗೂ ಯಾರೂಸರ್ಕಾರಿ ವೈದ್ಯರು ನಮ್ಮೂರಿಗೆ ಬಂದಿಲ್ಲ. ಇನ್ನಾದರೂ ಕೂಡಲೇ ಇತ್ತ ಗಮನ ನೀಡಲಿ.–ಶಿವರಾಮಪ್ಪ ಕುರಿ, ಗ್ರಾಪಂ ಮಾಜಿ ಅಧ್ಯಕ್ಷ, ಗಬ್ಬೂರು.
-ದತ್ತು ಕಮ್ಮಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.