ಗಂಗಾವತಿ: ಐದು ದಿನಗಳ ಲಾಕ್ ಡೌನ್ ಘೋಷಣೆ ಹಿನ್ನೆಲೆ, ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ
Team Udayavani, May 16, 2021, 8:41 AM IST
ಗಂಗಾವತಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಐದು ದಿನಗಳ ಕಠಿಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಗಂಗಾವತಿಯಲ್ಲಿ ರವಿವಾರ ಅಗತ್ಯವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದಾರೆ.
ತರಕಾರಿ, ಮಾಂಸ ಹಾಗೂ ಬಟ್ಟೆ ಕಿರಾಣಿ ಸಾಮಾನುಗಳನ್ನು ಖರೀದಿಸಲು ನಗರ ಹಾಗೂ ಗ್ರಾಮೀಣ ಭಾಗದಿಂದ ಜನರು ಬೈಕ್ ಟ್ರ್ಯಾಕ್ಟರ್ ಹಾಗೂ ಆಟೋಗಳಲ್ಲಿ ಆಗಮಿಸಿದ್ದರು. ಪೊಲೀಸರು ಸಾಮಾಜಿಕ ಅಂತರ ಕಾಪಾಡುವಂತೆ ಮತ್ತು ಮಾಸ್ಕ್ ಧರಿಸುವಂತೆ ಮನವಿ ಮಾಡಿದರೂ ಜನರು ಕೇಳಿಸಿಕೊಳ್ಳುವ ವ್ಯವದಾನದಲ್ಲಿರಲಿಲ್ಲ ಎಂದು ವರದಿಯಾಗಿದೆ.
ತರಕಾರಿ, ಮಾಂಸದಂಗಡಿ, ಕಿರಾಣಿ ಮತ್ತು ಬಟ್ಟೆ ಅಂಗಡಿಗಳ ಮುಂದೆ ಜನಸ್ತೋಮವೇ ಕಂಡುಬಂದಿದೆ. ಡೇಲಿ ಮಾರ್ಕೆಟ್, ಮಹಾವೀರ ವೃತ್ತ ಹಾಗೂ ಓಎಸ್ ಬಿ ರೋಡ್ ನಲ್ಲಿರುವ ಬಟ್ಟೆ ಅಂಗಡಿಗಳಲ್ಲೂ ಜನರು ಮುಗಿಬಿದ್ದಿದ್ದರು.
ಇದನ್ನೂ ಓದಿ: ಸರ್ಕಾರ, ಜನರ ನಿರ್ಲಕ್ಷ್ಯವೇ ಇಂದಿನ ಕೋವಿಡ್ ಪರಿಸ್ಥಿತಿಗೆ ಕಾರಣ : ಮೋಹನ್ ಭಾಗವತ್
ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡಲು ಜಿಲ್ಲಾಡಳಿತ ಹಗಲು ರಾತ್ರಿ ಕೋವಿಡ್ ಜನಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದರೂ ಜನರು ಮಾತ್ರ ‘ಸೋಂಕು ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಕೆಲ ಬಟ್ಟೆ ಅಂಗಡಿ ಕಿರಾಣಿ ಸ್ಟೋರ್ ನವರು ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ವ್ಯಾಪಾರ ಮಾಡುತ್ತಿರುವುದು ಕಂಡು ಬರುತ್ತಿದೆ.
ಇದನ್ನೂ ಓದಿ: ತೌಖ್ತೆಗೆ ನಲುಗಿದ ಕರಾವಳಿ : ಮೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ, ಇಂದು ರೆಡ್ ಅಲರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.