ಗಂಗಾವತಿ : ಪೋಲೀಸ್ ಅಧಿಕಾರಿ ಉದಯ ರವಿ ಮನೆಗಳ ಮೇಲೆ ಎಸಿಬಿ ದಾಳಿ
Team Udayavani, Jun 17, 2022, 7:59 AM IST
ಗಂಗಾವತಿ : ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಅಧಿಕಾರಿಯಾಗಿದ್ದ ಪ್ರಸ್ತುತ ಪೊಲೀಸ್ ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಗಂಗಾವತಿ ಮನೆ ಸೇರಿದಂತೆ ವಿವಿಧೆಡೆ ಇರುವ 4 ಮನೆಗಳ ಮೇಲೆ ಎಸಿಬಿ ಡಿವೈಎಸ್ಪಿ ಶಿವಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಆಂಜನೇಯ ನೇತೃತ್ವದ ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ .
ಉದಯರವಿ ಅವರು ಗಂಗಾವತಿ ನಗರ ಠಾಣೆ ಗ್ರಾಮೀಣ ಠಾಣೆಗಳಲ್ಲಿ ಪಿ ಐ ಆಗಿ ಕಾರ್ಯ ನಿರ್ವಹಿಸಿದ್ದರು.ಇತ್ತೀಚೆಗಷ್ಟೇ ಬೆಂಗಳೂರಿಗೆ ಪೊಲೀಸ್ ಗುಪ್ತಚರ ಇಲಾಖೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದರು .ಕೆಲ ಜನಪ್ರತಿನಿಧಿಗಳು ಮತ್ತು ಉದಯ ರವಿ ಅವರ ಮಧ್ಯೆ ಶೀತಲ ಸಮರದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೊಪ್ಪಳಕ್ಕೆ ಭೇಟಿ ನೀಡಿದ್ದ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿಯ ಕೆಲ ಮುಖಂಡರು ದೂರು ಸಲ್ಲಿಸಿ ತನಿಖೆ ನಡೆಸಿ ಮತ್ತು ವರ್ಗಾವಣೆಗೊಳಿಸುವಂತೆ ಒತ್ತಾಯಿಸಿದ್ದರು.
ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಕನಕಗಿರಿ ಭಾಗದಲ್ಲಿ ಮಟ್ಕಾ ಇಸ್ಪೀಟ್ ದಂಧೆ, ಮರಳು ಮಾಫಿಯದ ಹಿಂದೆ ಪೋಲಿಸ್ ಇಲಾಖೆಯ ನೇರವಾಗಿ ಕೈವಾಡವಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.
ನಾಲ್ಕು ಎಸಿಬಿ ದಾಳಿ :ಪೋಲೀಸ್ ಅಧಿಕಾರಿ ಉದಯ ರವಿ ಅವರ ಗಂಗಾವತಿ, ಮುದಗಲ್, ಗಂಗಾವತಿಯ ಬೊಂಬು ಬಜಾರ್ ಮತ್ತು ಆಪ್ತನ ಮನೆ ಸೇರಿ ಒಟ್ಟು 4 ಕಡೆ ಎಸಿಬಿ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ .
ದಾಳಿಯಲ್ಲಿ ಎಸಿಬಿ ಡಿವೈಎಸ್ಪಿ ಶಿವಕುಮಾರ್, ಇನ್ಸ್ಪೆಕ್ಟರ್ ಆಂಜನೇಯ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದು ಎಸಿಬಿ ದಾಳಿ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಪೊಲೀಸ್ ಬಿಗಿ ಭದ್ರತೆ ಒದಗಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
Tawargera: ಪತ್ನಿಯನ್ನೇ ಕೊಲೆ ಮಾಡಿದ ಪತಿ; ಶಂಕೆ
MUST WATCH
ಹೊಸ ಸೇರ್ಪಡೆ
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.