Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ
Team Udayavani, Sep 24, 2024, 10:07 AM IST
ಗಂಗಾವತಿ: ವೈಯಕ್ತಿಕ ದ್ವೇಷದ ಕಾರಣ ಒಂದೇ ಕೋಮಿನ ಯುವಕರ ಗುಂಪುಗಳ ಮಧ್ಯೆ ಗಣಪತಿಯ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಘರ್ಷಣೆ ನಡೆದು ಓರ್ವನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಯುವಕನಿಗೆ ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಇನ್ನುಳಿದ ಮೂರು ಯುವಕರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ತಡರಾತ್ರಿ ಗಂಗಾವತಿ ನಗರದ ಭಗೀರಥ ವೃತ್ತದ ಹತ್ತಿರ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಪೊಲೀಸ್ ಇಲಾಖೆ ನಿಷೇಧದ ಮಧ್ಯೆ ಡಿಜೆ ಹಾಕಿಕೊಂಡು ನೃತ್ಯ ಮಾಡುತ್ತಿದ್ದ ಒಂದೇ ಕೋಮಿನ ಯುವಕರ ನಡುವೆ ಮಾತಿಗೆ ಮಾತು ಬೆಳೆದು ಮಚ್ಚು ಲಾಂಗು ಹಿಡಿದು ಸಂಘರ್ಷ ನಡೆಸಿದ್ದಾರೆ. ಮೆರವಣಿಗೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸರು ಮಧ್ಯೆ ಪ್ರವೇಶದಿಂದಾಗಿ ಹೆಚ್ಚಿನ ಅನಾವುತ ಸಂಭವಿಸಿಲ್ಲ.
ಘಟನೆಯಲ್ಲಿ ಅಂಬೇಡ್ಕರ್ ನಗರದ 38 ವರ್ಷ ಶಿವಕುಮಾರ ಅಂಬೇಡ್ಕರ್ ಇವರ ಹೊಟ್ಟೆಯ ಬಲಭಾಗಕ್ಕೆ ಚಾಕು ಇರಿಯಲಾಗಿದೆ.ಇನ್ನುಳಿದ ಗುಂಡಮ್ಮ ಕ್ಯಾಂಪಿನ ಗಣೇಶ , ಮಂಜು ಮತ್ತು ಸಾಗರ್ ಇವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಗೆ ಸಂಬಂಧಿಸಿದಂತೆ ಮುತ್ತಣ್ಣ, ಧರ್ಮಣ್ಣ, ಬಾಬು, ವೆಂಕಟೇಶ, ಜಂಭ, ಹಾಗೂ ಇತರೆ 20 ಯುವಕರ ವಿರುದ್ದ ಹಲ್ಲೆ, ಕೊಲೆಗೆ ಯತ್ನ ಹಾಗೂ ಗಲಭೆ, ದೊಂಬಿ ಆರೋಪದಡಿಯಲ್ಲಿ ನಗರಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.