Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ


Team Udayavani, Sep 5, 2024, 3:04 PM IST

5

ಗಂಗಾವತಿ: ದೇಶ ವಿದೇಶದಲ್ಲಿ ಖ್ಯಾತಿ ಪಡೆದಿರುವ ಐತಿಹಾಸಿಕ ಪಂಪಾ ಸರೋವರಕ್ಕೆ ನಿತ್ಯ ಸಹಸ್ರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ ಮೂಲಸೌಕರ್ಯಗಳ ಕೊರತೆಯಿಂದ ಭಕ್ತರು ನಿಡುಸುಯ್ಯುವಂತಾಗಿದೆ. ಹೆಸರಿಗೆ ಮಾತ್ರ ಸರ್ಕಾರದ ಸುಪರ್ದಿಯಲ್ಲಿದೆ.

ಉತ್ತರ ಭಾರತದಿಂದ ಪ್ರತಿ ದಿನ 50ಕ್ಕೂ ಹೆಚ್ಚು ಬಸ್‌ಗಳಲ್ಲಿ ಪ್ರವಾಸಿಗರು ಚಾರಧಾಮ್‌ ಯಾತ್ರೆ ವೇಳೆ ಇಲ್ಲಿಗೆ ಬಂದು ಶ್ರೀ ಆಂಜನೇಯ, ಋಷಿ ಮುಖ ಪರ್ವತದಲ್ಲಿ ವಾಲೀ, ಸುಗ್ರೀವ್‌, ಪಂಪಾ ಸರೋವರದ ವಿಜಯಲಕ್ಷ್ಮಿ ದೇವರ ದರ್ಶನ ಪಡೆಯುತ್ತಾರೆ. ಆದರೆ ಇಲ್ಲಿ ಕುಡಿವ ನೀರು, ಶೌಚಾಲಯ ಹಾಗೂ ಸ್ನಾನಗೃಹ ಮತ್ತು ಅಡುಗೆ ಕೋಣೆಯಿಲ್ಲದೇ ಪ್ರವಾಸಿಗರು ಪರದಾಡುತ್ತಾರೆ.

ಪಂಪಾ ಸರೋವರ ರಾಮಾಯಣ, ಮಹಾಭಾರತ ಕಾವ್ಯಗಳಲ್ಲಿ ಉಲ್ಲೇಖೀತವಾದ ಸರೋವರವಾಗಿದೆ. ಇಲ್ಲಿನ ನೀರನ್ನು ಸೇವಿಸಿದರೆ ಪಾಪ ವಿಮೋಚನೆಯಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್‌, ಹರಿಯಾಣ, ಬಿಹಾರ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಂದ ಪ್ರತಿ ನಿತ್ಯ ಪ್ರವಾಸಿಗರು ಬರುತ್ತಾರೆ.
ಭಕ್ತರಿಗೆ ಪಂಪಾ ಸರೋವರ ದೇವಾಲಯ ಕಮೀಟಿಯವರು ಯಾವುದೇ ಸೌಕರ್ಯ ಕಲ್ಪಿಸಿಲ್ಲ. ಈ ಹಿಂದೆ ನಿರ್ಮಿಸಿದ್ದ ಶೌಚಾಲಯ ಸಣ್ಣದ್ದಾಗಿದ್ದು ನಿರ್ವಹಣೆ ಇಲ್ಲದೇ ಹಾಳಾಗಿದೆ. ನೀರಿನ ಟ್ಯಾಂಕ್‌ ನಿರ್ಮಿಸಿದ್ದರೂ ಕುಡಿಯುವ ನೀರಿಲ್ಲ. ಪಂಪಾ ಸರೋವರದ ಹೂಳು ಎತ್ತಿ ಬಯಲು ಪ್ರದೇಶದಲ್ಲಿ ಹಾಕಿರುವುದರಿಂದ ಗಿಡ ಗಂಟಿ ಬೆಳೆದು ಬಯಲು ಬಹಿರ್ದೆಸೆಗೆ ಬಳಕೆಯಾಗುತ್ತಿದೆ. ಮಳೆ ಬಂದರೆ ನಿಲ್ಲಲು ಜಾಗವಿಲ್ಲದೆ ಗಿಡದ ಬುಡದಲ್ಲಿ ಅಥವಾ ಗುಡ್ಡದ ಕಲ್ಲಿನ ಕೆಳಗೆ ನಿಲ್ಲಬೇಕಾಗಿದೆ. ಅಡುಗೆ ಸಿದ್ಧತೆ ಮತ್ತು ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ದೇವಾಲಯ ಕಮೀಟಿ, ತಾಲೂಕು ಆಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವಿಫಲವಾಗಿವೆ.

ಸುತ್ತಲಿನ ಐತಿಹಾಸಿಕ ಸ್ಥಳ ತೋರಿಸಲು ನೂರಾರು ಪ್ರವಾಸಿ ಗೈಡ್‌ಗಳು, ಆಟೋ ಚಾಲಕರು ಇದ್ದಾರೆ. ಆದರೆ ಇವರಿಗೂ ಸೂಕ್ತ ಸವಲತ್ತು ಕಲ್ಪಿಸಿಲ್ಲ. ವಿಜಯನಗರದ ಮೂಲ ರಾಜಧಾನಿ ಆನೆಗೊಂದಿ, ನವ ವೃಂದಾವನಗಡ್ಡಿ, ಚಂಚಲಕೋಟಿ, ವಾಲೀ ಕಿಲ್ಲಾ ಆದಿಶಕ್ತಿ ದೇಗುಲ, ಶ್ರೀಕೃಷ್ಣ ದೇವರಾಯನ ಸಮಾಧಿ, ಕಿಷ್ಕಿಂಧಾ ಅಂಜನಾದ್ರಿ, ಪಂಪಾಪತಿ ಬಂಡೆ ಮೇಲಿನ ಪುರಾತನ ಕಾಲದ ಪಂಪಾಪತಿ ಬೃಹತ್‌ ಲಿಂಗು, ಹನುಮನಹಳ್ಳಿ ಹತ್ತಿರದ ಋಷಿ ಮುಖ ಪರ್ವತ ಸುಗ್ರೀವನ ಗುಹೆ, ವಾಲೀ ಭಂಡಾರ, ಜಂಗ್ಲಿ ರಂಗಾಪೂರ ಪ್ರಕೃತಿ ಸೌಂದರ್ಯದ ಬೆಟ್ಟಗುಡ್ಡ, ಗುಹಾಂತರ ಚಿತ್ರ, ಹಿರೇಬೆಣಕಲ್‌ ಮೋರ್ಯರ ಬೆಟ್ಟದ ಶಿಲಾಯುಗದ ಮನೆ, ವಿರೂಪಾಪೂರಗಡ್ಡಿಯ ಸೂರ್ಯನಾರಾಯಣ ದೇವಾಲಯ, ರಾಮನ ಬೀಳು, ಶಿಲಾರೋಹಣದ ಪರ್ವತ ಬಂಡೆಗಳ ಸ್ಥಳ, ಸಾಣಾಪೂರ ವಾಟರ್‌ ಫಾಲ್ಸ್‌, ಸಾಣಾಪೂರ ಬಾಲಾಂಜನೇಯನ ಬೆಟ್ಟಕ್ಕೂ ಪ್ರವಾಸೋದ್ಯಮ ಇಲಾಖೆ ನಾಮಫಲಕ ಹಾಕಿಲ್ಲ. ಇದರಿಂದ ಪ್ರವಾಸಿಗರು ಮಾಹಿತಿ ಕೊರತೆಯಿಂದ ಸಮಸ್ಯೆ ಎದುರಿಸುವಂತಾಗಿದೆ.

ಮೂಲಸೌಕರ್ಯ ಕಲ್ಪಿಸಲು ಜನಪ್ರತಿನಿಧಿ ಮತ್ತು ಅಧಿಕಾರಿಗಳು ಇಚ್ಛಾಶಕ್ತಿ ತೋರುತ್ತಿಲ್ಲ. ಕರಾವಳಿ ಸೇರಿದಂತೆ ಮೈಸೂರು ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿ ಮಾದರಿಯಲ್ಲಿ ಸರಕಾರ ಆನೆಗೊಂದಿ-ಕಿಷ್ಕಿಂಧಾ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಂದಾಗಬೇಕು.
ಮಂಜುನಾಥ ಕಂದಾರಿ, ಆಟೊ ಚಾಲಕ

ದೇಶದ ನಾಲ್ಕು ಪವಿತ್ರ ಚಾರಧಾಮ್‌ದಲ್ಲಿ ಪಂಪಾ ಸರೋವರ ಕಿಷ್ಕಿಂಧಾ ಅಂಜನಾದ್ರಿ ಕ್ಷೇತ್ರವೂ ಒಂದಾಗಿದೆ. ಇಲ್ಲಿ ಕುಡಿವ ನೀರು, ಶೌಚಾಲಯ ಹಾಗೂ ಅಡುಗೆ ಮಾಡಿಕೊಳ್ಳಲು ನೆರಳಿಲ್ಲ. ಬಯಲು ಬಹಿರ್ದೆಸೆಗೆ ಹೋಗಬೇಕಾಗಿದೆ. ಸರಕಾರ ಕೂಡಲೇ ಮೂಲಸೌಕರ್ಯ ಕಲ್ಪಿಸಬೇಕು.
-ರಾಮಲಾಲ್‌ ಉತ್ತರ ಪ್ರದೇಶದ ಪ್ರವಾಸಿಗ

-ಕೆ.ನಿಂಗಜ್ಜ

ಟಾಪ್ ನ್ಯೂಸ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.