ಆಹಾರ ಧಾನ್ಯ-ವೈದ್ಯಕೀಯ ಸೌಕರ್ಯಕ್ಕೆ ಸೂಚನೆ
ಶಾಸಕರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷರ ವಿಡಿಯೋ ಕಾನ್ಫರೆನ್ಸ್ ಭತ್ತದ ಬೆಳೆ ಹಾನಿ ಪರಿಹಾರಕ್ಕೆ ಮನವಿ
Team Udayavani, Apr 12, 2020, 5:16 PM IST
ಗಂಗಾವತಿ: ನಳೀನಕುಮಾರ ಕಟೀಲ್ ಜೊತೆ ಶಾಸಕ ಪರಣ್ಣ ಮುನವಳ್ಳಿ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದರು.
ಗಂಗಾವತಿ: ಕೊವೀಡ್-19 ರೋಗದ ಹಿನ್ನೆಲೆಯಲ್ಲಿ ಜನರು ಕೆಲಸವಿಲ್ಲದೇ ಹಲವು ದಿನಗಳಿಂದ ಮನೆಯಲ್ಲಿದ್ದು, ಜನರಿಗೆ ಆಹಾರ ಮತ್ತು ವೈದ್ಯಕೀಯ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ ಕಟೀಲ್ ಸೂಚಿಸಿದ್ದಾರೆ.
ಅವರು ಶನಿವಾರ ಶಾಸಕರ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ಕೋವಿಡ್ ವೈರಸ್ ಹರಡದಂತೆ ಕರ್ಫ್ಯೂ ವಿಧಿಸಲಾಗಿದೆ. ದೇಶದಲ್ಲಿ ಅಗತ್ಯ ವೈದ್ಯಕೀಯ ಸೇವೆ ಮಾಡಲಾಗುತ್ತಿದೆ. ಪ್ರತಿದಿನ ದುಡಿದು ತಿನ್ನುವ ಬಡವರಿಗೆ ಬಿಜೆಪಿ ಕಾರ್ಯಕರ್ತರು ಅಗತ್ಯ ಸೌಕರ್ಯ ನೀಡಬೇಕು. ದಾನಿಗಳು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಹೇರಳ ದೇಣಿಗೆ ನೀಡಿ ಜನರ ಸಂಕಷ್ಟದಲ್ಲಿ ಪ್ರಧಾನಿ ಮೋದಿಯವರಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಕೊರೊನಾ ವಿರುದ್ಧ ಜಿಲ್ಲೆಯ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಯವರು ಮುನ್ನೆಚ್ಚರಿಕೆ ಕ್ರಮದ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚಿಗೆ ಅಕಾಲಿಕ ಮಳೆಗೆ ತಾಲೂಕಿನ 75 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ಸಂಪೂರ್ಣ ನಷ್ಟವಾಗಿದೆ. ಕೂಡಲೇ ಪರಿಹಾರ ನೀಡಲು ಸಹಕರಿಸುವಂತೆ ಕೋರಿದರು. ಬಿಜೆಪಿ ಮುಖಂಡರಾದ ಕಾಶಿನಾಥ ಚಿತ್ರ, ಮಳಗಿ ಚನ್ನಪ್ಪ, ಅಕ್ಕಿ ಪ್ರಕಾಶ, ಯಂಕಪ್ಪ ಕಟ್ಟಿಮನಿ, ಸಂತೋಷ ಕೆಲೋಜಿ, ಟಿ.ಆರ್. ರಾಯಬಾಗಿ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.