Gangavathi: ಪ್ರಭಾರಿ ಪ್ರಾಚಾರ್ಯರ ಹುದ್ದೆಗಾಗಿ ಮಸಲತ್ತು; ಹದಗೆಟ್ಟ ಶೈಕ್ಷಣಿಕ ವ್ಯವಸ್ಥೆ

ಪಾಠ ಪ್ರವಚನಗಳ ಬದಲಿಗೆ ಹುದ್ದೆಗಳ ಚರ್ಚೆಯಲ್ಲಿ ಬಹುತೇಕ ಪ್ರಾಧ್ಯಾಪಕರು

Team Udayavani, Aug 11, 2023, 11:03 AM IST

5-gangavathi

ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣಕ್ಕೆ ಸರಕಾರ ಆದ್ಯತೆ ನೀಡಿ ಸ್ನಾತಕ-ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರೋತ್ಸಾಹಿಸಿ ತಾಲೂಕಿಗೊಂದರಂತೆ ಪದವಿ ಮಹಾವಿದ್ಯಾಲಯಗಳನ್ನು ಆರಂಭಿಸಲಾಗಿದೆ.

ಸರಕಾರದ ಉದ್ದೇಶಕ್ಕೆ ವಿರುದ್ಧವಾಗಿ ಸ್ಥಳೀಯ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದ ಕೆಲ ಪ್ರಾಧ್ಯಾಪಕರು ಪ್ರಭಾರಿ ಪ್ರಾಚಾರ್ಯರ ಹುದ್ದೆ ಪಡೆಯಲು ಮಸಲತ್ತು ನಡೆಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಕೆಡಲು ಕಾರಣವಾಗುತ್ತಿದ್ದು, ವಿದ್ಯಾರ್ಥಿಗಳ, ಪಾಲಕರ ಮತ್ತು ವಿದ್ಯಾರ್ಥಿ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದೆ.

ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಶಾಸಕರು ಕೂಡಲೇ ಕಾಲೇಜಿನಲ್ಲಿ ಸಭೆ ನಡೆಸಿ ಪಾಠ ಪ್ರವಚನಗಳಿಗೆ ಆದ್ಯತೆ ನೀಡದೇ ಹುದ್ದೆಗಳಿಗೆ ಆಸೆ ಪಡುವ ಪ್ರಾಧ್ಯಾಪಕರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

40 ವರ್ಷಗಳ ಇತಿಹಾಸವಿರುವ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದಲ್ಲಿ ಖಾಯಂ ಪ್ರಾಚಾರ್ಯರು ಇಲ್ಲದೇ ಇರುವುದರಿಂದ ಕಳೆದ 20 ವರ್ಷಗಳಿಂದ ಪ್ರಭಾರಿ ಪ್ರಾಚಾರ್ಯರು ಆಡಳಿತ ನಡೆಸುತ್ತಿದ್ದರು.

ಇದರಿಂದ ಕಾಲೇಜಿನಲ್ಲಿ ಗೊಂದಲಗಳು ಸೃಷ್ಠಿಯಾಗಿ ಶೈಕ್ಷಣಿಕ ವಾತಾವರಣ ಕೆಟ್ಟು ಹಣದ ಅವ್ಯವಹಾರ ನಡೆದಿರುವ ದೂರುಗಳಿವೆ. ಇಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಮತ್ತು ಸ್ನಾತಕೋತ್ತರ ಕೋರ್ಸ್ ಗಳಾದ ಎಂಎ, ಎಂಕಾಂ ನಲ್ಲಿ ಹಲವು ವಿಭಾಗಗಳಿದ್ದು, ಒಟ್ಟು 3 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಖಾಯಂ ಪ್ರಾಧ್ಯಾಪಕರು 20 ಜನರಿದ್ದು, ಬಹುತೇಕ ಅತಿಥಿ ಉಪನ್ಯಾಸಕರಿಂದ ಕಾಲೇಜಿನ ಪಾಠ ಪ್ರವಚನಗಳು ನಡೆಯುತ್ತಿವೆ.

ಪ್ರಭಾರದ ಗೊಂದಲ: ಎಲ್ಲಿ ಖಾಯಂ ಪ್ರಾಚಾರ್ಯರು ಇರುವುದಿಲ್ಲವೋ ಅಲ್ಲಿ ಸ್ಥಳೀಯರ ಶಾಸಕರು ಹೇಳುವ ಅರ್ಹ ಪ್ರಾಧ್ಯಾಪಕರು ಪ್ರಭಾರಿ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಾರೆ.

ಇಲ್ಲಿಗೆ ವರ್ಗಾವಾಗಿ ಬೆಂಗಳೂರು ಭಾಗದ ಪ್ರಾಚಾರ್ಯರು ಆಗಮಿಸಿ ಎರಡು ಮೂರು ತಿಂಗಳಲ್ಲಿ ವಾಪಸ್ ಹೋಗುವುದರಿಂದ ಪ್ರಾಚಾರ್ಯರ ಹುದ್ದೆ ಖಾಲಿ ಇರುತ್ತದೆ. ಕಾಲೇಜಿನಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿ ಪೂರಕ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಸರಕಾರ ಸ್ಥಳೀಯ ಶಾಸಕರನ್ನೊಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ) ರಚನೆ ಮಾಡುತ್ತದೆ.

ಸರಕಾರದ ನಿಯಮಗಳಂತೆ ಪಠ್ಯ ಪ್ರವಚನಗಳು ನಡೆಯುತ್ತವೆ. ಸಿಡಿಸಿ ಸೂಚನೆಯಂತೆ ಸರಕಾರದ ನಿಯಮಗಳಿಗೆ ಅನುಗುಣವಾಗಿ ಕಾಲೇಜಿನಲ್ಲಿ ಮೂಲಸೌಕರ್ಯಗಳು, ವಿದ್ಯಾರ್ಥಿಗಳ ಬೇಕು ಬೇಡಿಕೆಗಳಿಗೆ ಸ್ಪಂದಿಸಲಾಗುತ್ತದೆ.

ಕಳೆದ 20 ವರ್ಷಗಳಿಂದ ಈ ಕಾಲೇಜಿನಲ್ಲಿ ಖಾಯಂ ಪ್ರಾಚಾರ್ಯರು ಇಲ್ಲದಿರುವುದರಿಂದ ಪ್ರಾಧ್ಯಾಪಕರಲ್ಲಿ ಹಲವು ಗುಂಪುಗಳಾಗಿ ಇಡೀ ಕಾಲೇಜಿನ ಶೈಕ್ಷಣಿಕ ವಾತಾವರಣ ಕೆಟ್ಟುಹೋಗಿದೆ ಎಂಬ ಆರೋಪ ವ್ಯಾಪಕವಾಗಿದೆ.

ಸದ್ಯ ಹಿರಿಯ ಪ್ರಾಧ್ಯಾಪಕರಾಗಿದ್ದ ಜಗದೇವಿ ಕಲಶೆಟ್ಟಿ ಆರೋಗ್ಯ ಮತ್ತಿತರ ಕಾರಣ ನೀಡಿ ಡಾ.ಜಾಜಿ ದೇವೆಂದ್ರಪ್ಪ ಎನ್ನುವ ಕನ್ನಡ ಪ್ರಾಧ್ಯಾಪಕರಿಗೆ ಪ್ರಾಚಾರ್ಯರ ಪ್ರಭಾರಿ ನೀಡಿದ್ದು,  ಗೊಂದಲಕ್ಕೆ ಕಾರಣವಾಗಿದೆ.

ಸರಕಾರದ ನಿಯಮ ಹಾಗೂ ಪ್ರೋಟೋಕಾಲ್ ಉಲ್ಲಂಘನೆಯಾಗಿದ್ದು, ಶಾಸಕರು ಮಧ್ಯೆ ಪ್ರವೇಶ ಮಾಡುವಂತೆ ಕೆಲ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ. ಖಾಯಂ ಪ್ರಾಚಾರ್ಯರು ಇಲ್ಲದ ಸಂದರ್ಭದಲ್ಲಿ ನಿಯಮದಂತೆ ಸ್ಥಳೀಯ ಶಾಸಕರು ಕಾಲೇಜಿನ ಅಧ್ಯಕ್ಷರಾಗಿದ್ದು ಅರ್ಹರಿಗೆ ನಿಯಮದಂತೆ ಪ್ರಾಚಾರ್ಯರ ಹುದ್ದೆ  ಪ್ರಭಾರ ವಹಿಸಬೇಕು.

ಪ್ರೋಟೋಕಾಲ್ ಮತ್ತು ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಪ್ರಾಚಾರ್ಯರ ಹುದ್ದೆ ಪ್ರಭಾರವನ್ನು ವಹಿಸಲಾಗಿದೆ. ತಾವು ಬೆಂಗಳೂರು ಪ್ರವಾಸದಲ್ಲಿದ್ದು ಗಂಗಾವತಿಗೆ ಆಗಮಿಸಿದ ತಕ್ಷಣ ಕಾಲೇಜಿನಲ್ಲಿ ಸಭೆ ನಡೆಸಿ ಅರ್ಹರಿಗೆ ಪ್ರಭಾರ ವಹಿಸಲಾಗುತ್ತದೆ ಎಂದು ದೂರವಾಣಿ ಕರೆಯ ಮೂಲಕ ಹೇಳಿದರೂ ಈ ಹಿಂದೆ ಇದ್ದ ಪ್ರಭಾರ ಪ್ರಾಚಾರ್ಯರು ನಿರ್ಲಕ್ಷಿಸಿ ಡಾ.ಜಾಜಿ ದೇವೆಂದ್ರಪ್ಪ ಎನ್ನುವವರಿಗೆ ಪ್ರಾಚಾರ್ಯರ ಹುದ್ದೆ ಪ್ರಭಾರ ವಹಿಸಲಾಗಿದ್ದು, ಅವಸರದಲ್ಲಿ ಖಜಾನೆ ಮತ್ತು ಬ್ಯಾಂಕುಗಳಲ್ಲಿ ಸಹಿ ಬದಲಾವಣೆಯೂ ಆಗಿದ್ದು ಇದು  ಶಾಸಕರ ಆದೇಶ ಉಲ್ಲಂಘನೆ ಮತ್ತು ಅಧಿಕಾರದ ಹಕ್ಕು ಚ್ಯುತಿಯಾಗಿದ್ದು, ಈ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗುತ್ತದೆ. ಪುನಃ ಸಭೆ ನಡೆಸಿ ಕಾಲೇಜು ಶೈಕ್ಷಣಿಕ ವಾತಾವರಣ ಕೆಡದಂತೆ ಕ್ರಮ ವಹಿಸಲಾಗುತ್ತದೆ. ಕಾಲೇಜಿಗೆ ಕೋಟ್ಯಾಂತರ ರೂ.ಗಳ ಅನುದಾನ ಬರುತ್ತಿದ್ದು ಎಲ್ಲರ ವಿಶ್ವಾಸದೊಂದಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕಾಲೇಜಿನಲ್ಲಿ ನಡೆದಿರುವ ಘಟನೆಗಳ ಕುರಿತು ಉನ್ನತ ಶಿಕ್ಷಣ ಸಚಿವರು ಹಾಗೂ ಸರಕಾರ ಗಮನಕ್ಕೆ ತರಲಾಗುತ್ತದೆ. -ಗಾಲಿ ಜನಾರ್ದನರೆಡ್ಡಿ ಶಾಸಕರು ಹಾಗೂ ಅಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ

ಕೆ.ನಿಂಗಜ್ಜ

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.