Gangavathi: ಸಾವಿಗೆ ಆಹ್ವಾನ ನೀಡುತ್ತಿರುವ ಬಸ್ ನಿಲ್ದಾಣದ ವಿದ್ಯುತ್ ಟ್ರಾನ್ಸ್ ಫಾರ್ಮರ್
ಶಾಲಾ-ಕಾಲೇಜು ಮಕ್ಕಳು ಸೇರಿ ಸಾರ್ವಜನಿಕರಿಗೆ ಜೀವಕಂಟಕವಾಗಿರುವ ಬಸ್ ನಿಲ್ದಾಣ ಅಸ್ವಚ್ಛತೆ,ವಿದ್ಯುತ್ ಟ್ರಾನ್ಸ್ ಫಾರ್ಮರ್
Team Udayavani, Jul 23, 2023, 10:04 AM IST
ಗಂಗಾವತಿ: ಶಾಲಾ ಕಾಲೇಜು ಮಕ್ಕಳು ಸೇರಿ ಸಾರ್ವಜನಿಕರಿಗೆ ಕಂಟಕವಾಗಿರುವ ವಿದ್ಯಾನಗರದ ಬಸ್ ನಿಲ್ದಾಣದಲ್ಲಿನ ಅಸ್ವಚ್ಛತೆ ಮತ್ತು ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಾವಿಗೆ ಆಹ್ವಾನ ನೀಡುವಂತಿದೆ.
ಸ್ವಚ್ಚತೆ ಕಾಪಾಡಬೇಕಾದ ನಗರಸಭೆ ಮತ್ತು ವಿದ್ಯುತ್ ಅವಘಡ ಸಂಭವಿಸದಂತೆ ತಡೆಯಬೇಕಾಗಿರುವ ಜೆಸ್ಕಾಂ ಇಲಾಖೆಯ ಅಧಿಕಾರಿಗಳಲ್ಲಿ ನಿರ್ಲಕ್ಷ್ಯ ಕಾಣುತ್ತಿದ್ದು ಹಲವು ಬಾರಿ ಸಾರ್ವಜನಿಕರು ನಗರಸಭೆ ಮತ್ತು ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
ವಿದ್ಯಾನಗರದ ಬಸ್ ನಿಲ್ದಾಣದಲ್ಲಿ ಇಲ್ಲಿರುವ ಶಾರದ ಎಜುಕೇಶನ್ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಇಲ್ಲಿಂದಲೇ ಬಸ್ ನಲ್ಲಿ ಪ್ರಯಾಣ ಮಾಡುತ್ತಾರೆ. ವಿದ್ಯಾರ್ಥಿಗಳು ಮಾತ್ರವಲ್ಲದೇ ವಿದ್ಯಾನಗರದ ನಿವಾಸಿಗಳು ಇಲ್ಲಿಂದಲೇ ಬಸ್ ಹತ್ತುತ್ತಾರೆ ಮತ್ತು ಇದೇ ಬಸ್ ನಿಲ್ದಾಣದಲ್ಲಿ ಇಳಿಯುತ್ತಾರೆ.
ಮಳೆಗಾಲ ಮತ್ತು ಬೇಸಿಗೆ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ನಿಲ್ಲಬೇಕಾಗುತ್ತದೆ. ಬಸ್ ಸ್ಟಾಂಡ್ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಜೋಡಣೆ ಮಾಡಿದ್ದು, ಸುತ್ತಲೂ ತಂತಿ ಬೇಲಿ ಹಾಕದೆ ತೆರೆದ ಸ್ಥಳದಲ್ಲಿ ಹಾಗೆಯೇ ಬಿಡಲಾಗಿದ್ದು, ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿದೆ.
ಈ ಬಗ್ಗೆ ಜೆಸ್ಕಾಂ ಇಲಾಖೆಯವರು ಗಮನ ಹರಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ನಿತ್ಯವೂ ವಿದ್ಯುತ್ ಅವಘಡಗಳು ಸಂಭವಿಸಿ ಸಾವುಗಳು ಸಂಭವಿಸುತ್ತಿರುವ ಸಂದರ್ಭದಲ್ಲಿ ಜೆಸ್ಕಾಂ ಇಲಾಖೆಯವರು ನೂರಾರು ವಿದ್ಯಾರ್ಥಿಗಳು ನಿಂತುಕೊಳ್ಳುವ ವಿದ್ಯಾನಗರದ ಬಸ್ ನಿಲ್ದಾಣದಲ್ಲಿರುವ ಟ್ರಾನ್ಸ್ ಫಾರ್ಮರ್ ಸುತ್ತಲೂ ತಂತಿ ಬೇಲಿ ಹಾಕಬೇಕು ಹಾಗೂ ನಗರ ಸಭೆಯವರು ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.