ಗಂಗಾವತಿ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಕೋವಿಡ್ ದೃಢ: ಸಂಪೂರ್ಣ ಕಚೇರಿ ಸೀಲ್ ಡೌನ್
Team Udayavani, May 3, 2021, 1:25 PM IST
ಗಂಗಾವತಿ: ಇಲ್ಲಿಯ ತಹಸೀಲ್ದಾರ್ ಕಚೇರಿ ಸಿಬ್ಬಂದಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಇಡೀ ತಹಸೀಲ್ದಾರ್ ಕಚೇರಿಗೆ ಬೀಗ ಹಾಕಿ ಸೀಲ್ ಡೌನ್ ಮಾಡಲಾಗಿದೆ. ಇದರಿಂದ ನೋಂದಣಿ ಕಚೇರಿ, ಆಹಾರ ಇಲಾಖೆ, ಚುನಾವಣಾ ಕಚೇರಿ, ಸರ್ವೇ ಇಲಾಖೆಯ ಕಚೇರಿಯನ್ನು ಸೋಮವಾರ ಒಂದು ದಿನದ ಮಟ್ಟಿಗೆ ಮುಚ್ಚಲಾಗಿದೆ.
ಸಾರ್ವಜನಿಕ ಪರವಾನಿಗೆ ಕೊಡುವ ಪ್ರಥಮ ದರ್ಜೆ ಸಹಾಯಕನೋರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕು ಸಂದರ್ಭದಲ್ಲಿ ಪರವಾನಿಗೆ ಕೊಡುವ ವಿಭಾಗದಲ್ಲಿ ನಿತ್ಯವೂ ಹಲವು ಜನರು ಬಂದು ಹೋಗಿದ್ದು ಯಾರಿಂದ ಅಥವಾ ಯಾವಾಗ ಸೋಂಕು ತಗುಲಿದೆ ಎಂದು ತಿಳಿದಿಲ್ಲ. ಸೋಂಕಿತನಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ:ಕೆಕೆಆರ್ ತಂಡದ ಇಬ್ಬರಿಗೆ ಕೋವಿಡ್ ಪಾಸಿಟಿವ್: ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆ
ಕಚೇರಿಗೆ ಸೋಂಕು ನಿವಾರಣೆ ಸಿಂಪರಣೆ: ಪ್ರಥಮದರ್ಜೆ ಸಹಾಯಕ ನೊರ್ವನಿಗೆ ಸೋಂಕು ದೃಢವಾಗಿದ್ದು, ಮನೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರದ ಮಟ್ಟಿಗೆ ತಹಸೀಲ್ದಾರ್ ಕಚೇರಿ ಸೇರಿ ಇಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಕಚೇರಿಗಳನ್ನು ಬಂದ್ ಮಾಡಿ ಸೋಂಕು ನಿವಾರಕವನ್ನು ಸಿಂಪಡಣೆ ಮಾಡಲಾಗುತ್ತದೆ ಮಂಗಳವಾರದಿಂದ ಪುನಃ ಯಥಾ ಪ್ರಕಾರ ತಹಸೀಲ್ದಾರ್ ಕಚೇರಿ ಕಾರ್ಯ ನಿರ್ವಹಿಸಲಿದೆ ಎಂದು ತಹಸೀಲ್ದಾರ್ ಯು.ನಾಗರಾಜ ಉದಯವಾಣಿ ಗೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.