ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
ಮೇಲಾಧಿಕಾರಿಗಳು ತಾವಿರುವ ಸ್ಥಳದಲ್ಲಿಯೇ ವೀಕ್ಷಿಸಬಹುದು
Team Udayavani, Apr 24, 2024, 4:53 PM IST
ಉದಯವಾಣಿ ಸಮಾಚಾರ
ಗಂಗಾವತಿ: ಕೇಂದ್ರ ಹಾಗೂ ರಾಜ್ಯ ಸರಕಾರ ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಪದ್ಧತಿ ಜಾರಿಗೆ ತರುವ ಮೂಲಕ ನೇಮಕಾತಿಯನ್ನು ಪಾರದರ್ಶಕವಾಗಿಸುವಂತೆ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ, ಕೆಪಿಎಸ್ಸಿ, ಯುಪಿಎಸ್ಸಿ, ರೈಲ್ವೇ, ಬ್ಯಾಂಕಿಂಗ್ ಸೇರಿ ಕೇಂದ್ರ ಹಾಗೂ ರಾಜ್ಯ
ಸರಕಾರದ ನೇಮಕಾತಿ ಮಾಡುವ ಸಂದರ್ಭದಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ನಿರಂತರವಾಗಿ ನಡೆದಿದ್ದು, ಸರಕಾರ ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆದರೆ ಪಾರದರ್ಶಕ ಸಾಧ್ಯವಾಗುತ್ತದೆ.
ಈ ವರ್ಷ ನಡೆದ ಹತ್ತನೇ ತರಗತಿ ಪರೀಕ್ಷೆ ವೆಬ್ ಕಾಸ್ಟಿಂಗ್ ಪದ್ಧತಿ ಜಾರಿಗೆ ತರಲಾಗಿದೆ. ರಾಜ್ಯದ ಯಾವುದೇ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಮೇಲಾಧಿಕಾರಿಗಳು ತಾವಿರುವ ಸ್ಥಳದಲ್ಲಿಯೇ ವೀಕ್ಷಿಸಬಹುದು. ಇಂತಹ ಪದ್ಧತಿಯನ್ನು ನೇಮಕಾತಿಗಳ ಪರೀಕ್ಷೆಗಳಲ್ಲಿ ಅಳವಡಿಸಿದರೆ ಅಕ್ರಮ ತಡೆಯಲಾಗುತ್ತದೆ. ಪ್ರಭಾವಿಗಳು ಅನ್ಯ ಮಾರ್ಗದಿಂದ ಉದ್ಯೋಗ ಪಡೆಯುವುದನ್ನು
ತಪ್ಪಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ನೇಮಕಾತಿಯಲ್ಲಿ ನ್ಯಾಯ ದೊರಕಿಸಿ ಕೊಟ್ಟಂತಾಗುತ್ತದೆ. ಆದ್ದರಿಂದ ಈ ಪದ್ಧತಿಯನ್ನು ಮುಂಬರುವ ಪರೀಕ್ಷೆಗಳಲ್ಲಿ ಅಳವಡಿಸುವುದರ ಮೂಲಕ ಈ ಪದ್ಧತಿ ಜಾರಿಗೆ ತರಬೇಕೆಂದು ಮ್ಯಾಗಳಮನಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಡಿಯಪ್ಪ ಹಂಚಿನಾಳ, ಕೃಷ್ಣ ಮೆಟ್ರಿ ಚಂದ್ರು ನಿಸರ್ಗ, ಪಂಪಾಪತಿ ಕುರಿ, ಮಂಜು ಗುಡಿ ಗೌಡ್ರ, ಮುತ್ತು ಹೊಸಳ್ಳಿ, ಹುಲಗಪ್ಪ ಕೊಜ್ಜಿ, ಪರಮೇಶ್ ಗಾಂಧಿ ನಗರ, ನರಸಪ್ಪ ಭಟ್, ಬಸವರಾಜ ಗಾಂಧಿ ನಗರ, ಚಿದಾನಂದ, ರಾಘು ಕಡೆಬಾಗಿಲು, ರಾಮಣ್ಣ ರುದ್ರಾಕ್ಷಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.