ಸರಕಾರಿ ಆಸ್ಪತ್ರೆ ಮತ್ತು ವೈದ್ಯಾಧಿಕಾರಿಗಳ ವಿರುದ್ಧದ ದೂರು ಕೈ ಬಿಡಲು ಆಗ್ರಹ
Team Udayavani, Dec 19, 2022, 7:53 PM IST
ಗಂಗಾವತಿ: ಇಡೀ ರಾಜ್ಯದಲ್ಲೇ ಅತ್ಯುತ್ತಮ ಸೇವೆ ಮತ್ತು ಆಡಳಿತಕ್ಕೆ ಹೆಸರಾಗಿರುವ ಗಂಗಾವತಿ ಸರಕಾರಿ ಆಸ್ಪತ್ರೆ ಮತ್ತು ಇಲ್ಲಿಯ ವೈದ್ಯಾಧಿಕಾರಿಗಳು, ವೈದ್ಯರು ಸಿಬ್ಬಂದಿ ವರ್ಗದ ವಿರುದ್ಧ ಕೆಲ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳು ಸಲ್ಲಿಸಿರುವ ದೂರನ್ನು ಕೂಡಲೇ ಕೈ ಬಿಡುವಂತೆ ಬಹುಜನ ಸಮಾಜ ಪಾರ್ಟಿ ಮುಖಂಡರು ಆಗ್ರಹಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಇಲ್ಲಿ ಸರಕಾರ ಆಸ್ಪತ್ರೆಯಲ್ಲಿ ಪ್ರತಿಯೊಂದಕ್ಕೂ ಹಣ ಪಡೆಯಲಾಗುತ್ತಿದೆ ಎಂದು ಷಡ್ಯಂತ್ರ ರೂಪಿಸಿ ಕೆಲ ಖಾಸಗಿ ಆಸ್ಪತ್ರೆಗಳ ಕುಮ್ಮಕ್ಕಿನಿಂದ ದೂರು ಸಲ್ಲಿಸಲಾಗಿದ್ದು ಇದರಿಂದ ವೈದ್ಯಾಧಿಕಾರಿ ಮತ್ತು ವೈದ್ಯರು ಸಿಬ್ಬಂದಿಗಳ ನೈತಿಕತೆ ಕುಸಿಯುವಂತೆ ಮಾಡುವ ಕುತಂತ್ರ ಅಡಗಿದೆ. ಇಡೀ ರಾಜ್ಯದಲ್ಲಿಯೇ ಅತ್ಯುತ್ತಮ ಸೇವೆ ಹಾಗೂ ಹೆರಿಗೆ ಮಾಡಿಸಿಕೊಳ್ಳುವ ಆಸ್ಪತ್ರೆ ಇದಾಗಿದೆ. ಬಡವರು ದಲಿತ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಇಲ್ಲಿಯ ಆಸ್ಪತ್ರೆ ಆರೋಗ್ಯ ಸೇವೆ ಅಮೂಲ್ಯವಾಗಿದ್ದು ಇದರ ವಿರುದ್ಧ ಷಡ್ಯಂತ್ರ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿ ಪತ್ರದಲ್ಲಿ ಕೋರಲಾಗಿದೆ.
ಈ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿ ಮುಖಂಡರಾದ ಶಂಕರ ಸಿದ್ದಾಪೂರ, ಬಿ. ಲಕ್ಷ್ಮೀಪತಿ ಹಾಗೂ ಗಂಗಣ್ಣ ಸಿದ್ದಾಪೂರ, ಆದೆಪ್ಪ ಸಿಂಗನಾಳ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.