ನಗೆಸುತ್ತ ಮತದಾನದ ಜಾಗೃತಿಮೂಡಿಸಿದ ಗಂಗಾವತಿ ಪ್ರಾಣೇಶ
Team Udayavani, Apr 11, 2019, 5:49 PM IST
ಕೊಪ್ಪಳ: ಮತದಾನ ಜಾಗೃತಿ ಮೂಡಿಸುವಲ್ಲಿ ಜಿಲ್ಲಾ ಐಕಾನ್ ಆಗಿ ಆಯ್ಕೆಯಾದ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಅವರು ಹಾಸ್ಯದ ಮೂಲಕವೇ ಮತದಾನದ ಜಾಗೃತಿ ಮೂಡಿಸಿ ಎಲ್ಲರ ಗಮನ ಸೆಳೆದರು.
ಜಿಲ್ಲಾ ಸ್ವೀಪ್ ಸಮಿತಿ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಹಮ್ಮಿಕೊಂಡ ಬೃಹತ್ ಮತದಾನ ಜಾಗೃತಿ ಮಹಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮತದಾನ ಏಕೆ ಮಾಡಬೇಕು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತಕ್ಕೂ ಎಷ್ಟು ಮಹತ್ವವಿದೆ ? ಎಂಬ ವಿಷಯವನ್ನು ತಮ್ಮದೇ ಆದ ಉತ್ತರ ಕರ್ನಾಟಕ ಶೈಲಿಯ ಪಂಚಿಂಗ್ ಡೈಲಾಗ್‌ಗಳ ಮೂಲಕ ತಿಳಿಸಿ, ಜನರನ್ನು ನಕ್ಕು, ನಗಿಸಿದರು.
ಕಡ್ಡಾಯ ಮತದಾನ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ತಾಪಂ ಇಒ ವೆಂಕೋಬಪ್ಪ, ಡಾ| ಮೋಹನ್, ಬಿಇಒ ಉಮದೇವಿ ಸೊನ್ನದ, ತಾಪಂ ಯೋಜನಾಧಿಕಾರಿ ಶರಣಯ್ಯ ಸಸಿಮಠ, ಜಿಲ್ಲಾ ಸ್ವೀಪ್ ಸಂಯೋಜಕ ಶ್ರೀನಿವಾಸ್ ಚಿತ್ರಗಾರ, ಕಿನ್ನಾಳ ಪಿಡಿಒ ವಿರನಗೌಡ ಸೇರಿದಂತೆ ವಾಗೇಶ, ಮಹೇಶ ಸಜ್ಜನ್ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ವೋಟರ್‌ಗ್ರಾಂ ಫೋಟೋ ಸ್ಪಾಟ್ ಫ್ರೇಂನಲ್ಲಿ ಗಂಗಾವತಿ ಪ್ರಾಣೇಶ್ ಸೇರಿದಂತೆ ಹಲವು ಅಧಿಕಾರಿಗಳು, ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.