ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Team Udayavani, Sep 13, 2024, 10:40 AM IST
ಉದಯವಾಣಿ ಸಮಾಚಾರ
ಗಂಗಾವತಿ: ಸಮೀಪದ ಸಿದ್ದಿಕೇರಿ, ಕರಿಕಲ್ಲಪ್ಪ ಕ್ಯಾಂಪ್‌ಗೆ ಹೊಂದಿಕೊಂಡಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಕಳೆದ ಹಲವು
ವರ್ಷಗಳಿಂದ ಅಕ್ರಮವಾಗಿ ಫಿಲ್ಟರ್ ಮರಳು ಮಾಫಿಯಾ ದಂಧೆ ವಹಿವಾಟು ಅವ್ಯಾಹತವಾಗಿ ನಡೆಯುತ್ತಿದೆ. ಇದರಿಂದ ತುಂಗಭದ್ರಾ ಎಡದಂಡೆ ಕಾಲುವೆ ರಸ್ತೆ ಮೇಲೆ ಹಗಲು-ರಾತ್ರಿ ಟಿಪ್ಪರ್‌ಗಳ ಸಂಚಾರದಿಂದ ಕಾಲುವೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕೆಲವೆಡೆ ಬ್ರಿàಜ್‌ಗಳು ಬಿರುಕು ಬಿಟ್ಟಿದ್ದು ಎಡದಂಡೆ ಕಾಲುವೆ ಅಪಾಯದಲ್ಲಿದೆ. ಆದರೂ ಜಲಸಂಪನ್ಮೂಲ ಇಲಾಖೆ, ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ವಹಿಸಿವೆ ಎಂದು ರೈತರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಂಗಭದ್ರಾ ಎಡದಂಡೆ ಕಾಲುವೆ ಪಾಪಯ್ಯ ಟನೆಲ್‌ನಿಂದ ಬಸಾಪಟ್ಟಣ, ದಾಸನಾಳ ರಸ್ತೆ ಕಡೆ ಹೋಗುವ ಕಾಲುವೆ ರಸ್ತೆಯ ಮೇಲೆ ಕಳೆದ ಹಲವು ವರ್ಷಗಳಿಂದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇರೆಡೆಯಿಂದ ಕೆಂಪು ಮಣ್ಣು ತಂದು ಫಿಲ್ಟರ್ ಮರಳು ತಯಾರಿಸಿ ಅದನ್ನು ಟಿಪ್ಪರ್‌ಗಳ ಮೂಲಕ ಧಾರವಾಡ, ಬೆಂಗಳೂರು ಸೇರಿದಂತೆ ಇತರೆಡೆ ರವಾನೆ ಮಾಡಲಾಗುತ್ತಿದೆ. ಭಾರಿ ಸಂಚಾರದಿಂದ ಕಾಲುವೆ ರಸ್ತೆ ಹಾಗೂ ಡಿಸ್ಟೂಬ್ಯೂಟರಿ ಮೋರಿಗಳು, ಸೇತುವೆಗಳು ಬಿರುಕು ಬಿಟ್ಟಿವೆ.
ಮತ್ತೂಂದೆಡೆ ಕಾಲುವೆ ಒಡೆಯುವ ಆತಂಕ ಎದುರಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯ: ಮೀಸಲು ಅರಣ್ಯ ಪ್ರದೇಶದಲ್ಲಿ ಯಾವುದೇ ಚಟುವಟಿಕೆ ನಡೆಸಲು ಅವಕಾಶವಿಲ್ಲದಿದ್ದರೂ ಫಿಲ್ಟರ್ ಮರಳು ತಯಾರಿಸುವ ಘಟಕಗಳು ಸಿದ್ದಿಕೇರಿ, ವಾಣಿ ಭದ್ರೇಶ್ವರ ಬೆಟ್ಟದ ಸುತ್ತಲು ಇವೆ. ಇದಕ್ಕೆ ಕಾರಣ ವಲಯ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ಎನ್ನುತ್ತಾರೆ ಜನರು.
ಅಕ್ರಮ ಮರಳು ದಂಧೆ ತಡೆಗೆ ಗ್ರಾಪಂ, ಪಿಡಿಒ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ದೂರು ನೀಡಿದಾಗ ಮಾತ್ರ ಸ್ಥಳ ಪರಿಶೀಲನೆ ನಡೆಸಿ ನೆಪ ಮಾತ್ರದ ಕ್ರಮ ಕೈಗೊಳ್ಳುತ್ತಾರೆ ಎನ್ನುವುದು ಪರಿಸರ ಪ್ರೇಮಿಗಳ ಆರೋಪವಾಗಿದೆ.
ತುಂಗಭದ್ರಾ ಎಡದಂಡೆ ಕಾಲುವೆ ಪಾಪಯ್ಯ ಟನಲ್ ಕಾಲುವೆ ರಸ್ತೆ, ಬಸಾಪಟ್ಟಣ, ಸಿದ್ದಿಕೇರಿ ರಸ್ತೆಯಲ್ಲಿ ಹಗಲು ರಾತ್ರಿ ಲಾರಿಗಳ ಸಂಚಾರದಿಂದ ರಸ್ತೆಗಳು ಹಾಳಾಗಿವೆ. ಎಡದಂಡೆ ಕಾಲುವೆ ಒಡೆಯುವ ಅಪಾಯದಲ್ಲಿದೆ. ಅರಣ್ಯ, ಜಲಸಂಪನ್ಮೂಲ,
ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಯವರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕ್ರಮ ಕೈಗೊಳ್ಳದಿದ್ದರೆ ಈ ಭಾಗದ ರೈತರು ಗ್ರಾಮಸ್ಥರು ಸೇರಿ ಭಾರಿ ಪ್ರತಿಭಟನೆ ನಡೆಸಲಾಗುತ್ತದೆ.
*ಬಿ.ಕೃಷ್ಣಪ್ಪ ನಾಯಕ, ಎಸ್.ರವಿ, ನಾನಿ ಪ್ರಸಾದ, ಗಿರೀಶ ಗಾಯಕವಾಡ,
ಶರಭೋಜಿರಾವ್, ವಿಠಲಾಪೂರ ಯಮನಪ್ಪ, ಸಣ್ಣಕ್ಕಿ ನೀಲಪ್ಪ, ಶರಣೇಗೌಡ, ರಾಮಕೃಷ್ಣ ರೈತರು
■ ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.