ಗಿಣಗೇರಿ ಕೆರೆ ವೀಕ್ಷಿಸಿದ ಗವಿಶ್ರೀ

ಗ್ರಾಮಸ್ಥರೊಂದಿಗೆ‌ ಸಮಾಲೋಚನೆ ! ­ಕೆರೆ ಅಭಿವೃದ್ಧಿಗೆ ಸಂಕಲ್ಪ ! ­ಹೂಳೆತ್ತುವಿಕೆಗೆ ಶೀಘ್ರ ಚಾಲನೆ

Team Udayavani, Feb 6, 2021, 8:13 PM IST

Gavisiddeswar shri

ಕೊಪ್ಪಳ: ಈ ಬಾರಿ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮೂರು ಸಮಾಜಮುಖೀ ಕಾರ್ಯಕ್ಕೆ ಕೈ ಹಾಕಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳು ಜಾತ್ರೆಯ ಬೆನ್ನಲ್ಲೇ ತಾಲೂಕಿನ ಗಿಣಗೇರಿ ಕೆರೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಮುಖಂಡರು, ಯುವ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಫೆ.15ರಂದು ಹೂಳೆತ್ತುವ ಕಾರ್ಯಕ್ಕೆ ಶ್ರೀಗಳು ಚಾಲನೆ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಕೋವಿಡ್‌ ಹಿನ್ನೆಲೆಯಲ್ಲಿ ಜಾತ್ರೆ ಸರಳವಾಗಿ ಆಚರಿಸಿ ಸಮಾಜಮುಖೀ ಸೇವೆ ಮಾಡೋಣವೆಂಬ ಸಂಕಲ್ಪದೊಂದಿಗೆ ಮೂರು ಸಮಾಜಮುಖೀ ಕಾರ್ಯ ಕೈಗೊಳ್ಳುವ ಕುರಿತು ಈಗಾಗಲೇ ಘೋಷಿಸಿದ್ದಾರೆ. ಅದರ ಭಾಗವಾಗಿ ಗಿಣಗೇರಿ ಕೆರೆ ಹೂಳೆತ್ತುವ ಕಾರ್ಯವೂ ಒಂದಾಗಿದೆ.

ಗಿಣಗೇರಿ ಕೆರೆ ಅಭಿವೃದ್ಧಿ ಮಾಡುವ ಮುನ್ನ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಲು ಶ್ರೀಗಳು ಶುಕ್ರವಾರ ಕೆರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ, ಮುಖಂಡರ ಜೊತೆಗೆ ಮಾತನಾಡಿ, ನಿಮ್ಮೆಲ್ಲರ ಸಹಕಾರದಿಂದ ಈ ಕೆರೆ ಅಭಿವೃದ್ಧಿ ಮಾಡೋಣ. ಕೆರೆ ಅಭಿವೃದ್ಧಿಯಿಂದ ಈ ಭಾಗದಲ್ಲಿ ಬತ್ತಿ ಹೋಗಿರುವ ಬೋರ್‌ವೆಲ್‌ ಗಳು ರಿಚಾರ್ಜ್‌ ಆಗಲಿವೆ. ಇದರಿಂದ ಮತ್ತೆ ರೈತರು ಸಸೇರಿ ಎಲ್ಲರ ಬದುಕು ಹಸನಾಗಲಿದೆ. ಸಾವಿರಾರು ಸಕುಟುಂಬಗಳು ನೆಮ್ಮದಿಯಿಂದ ಬದುಕಲಿವೆ ಎನ್ನುವ ಕುರಿತು ತಿಳಿದು ಬಂದಿದೆ.ಸ

ಫೆ.15ಕ್ಕೆ ಚಾಲನೆ ನೀಡುವ ಸಾಧ್ಯತೆ: ತಾಲೂಕಿನ ಗಿಣಗೇರಿ ಕೆರೆ 300 ಎಕರೆಗೂ ಹೆಚ್ಚು ವಿಸ್ತಾರ ಹೊಂದಿದೆ. ಅದನ್ನು ಗವಿಮಠ  ಹಾಗೂ ಸ್ಥಳೀಯ ಕೈಗಾರಿಕೆಗಳ ನೆರವಿನೊಂದಿಗೆ ಫೆ.15ರಂದು ಕೆರೆ ಹೂಳೆತ್ತುವ ಕಾರ್ಯಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಈ ಕುರಿತು ಗವಿಮಠ ಯಾವುದೇ ಪ್ರಕಟಣೆ ಹೊರಡಿಸಿಲ್ಲ. ಗಿಣಗೇರಿ ವ್ಯಾಪ್ತಿಯಲ್ಲಿನ ಜೆಸಿಬಿ,ಬುಲ್ಡೋಜರ್‌, ಟಿಪ್ಪರ್‌,ಟ್ರಾÂಕ್ಟರ್‌ ಸೇರಿ ಇತರೆ ವಾಹನ ಮಾಲೀಕರಿಗೂ ಸಿದ್ಧವಾಗಿರುವಂತೆ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜೊತೆಗೆ ಕೆಲಸದಲ್ಲಿ ತೊಡಗುವ ಚಾಲಕರಿಗೆ ಊಟ, ಉಪಾಹಾರದ ವ್ಯವಸ್ಥೆಗೆ ಸ್ಥಳೀಯ ಯುವಕರ ಪಡೆ ಸಿದ್ಧವಾಗಿರುವಂತೆಯೂ ಸಾಂದರ್ಭಿಕ ಸೂಚನೆ ನೀಡಿದ್ದಾರೆ ಎನ್ನುವುದು ತಿಳಿದು ಬಂದಿದೆ.

 ಇದನ್ನೂ ಓದಿ :ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳ ದರ ಕುಸಿತ: ರೈತ ಕಂಗಾಲು  

ಯಾವ ಹಳ್ಳಿಗಳಿಗೆ ಅನುಕೂಲ?: ಕುಟಗನಹಳ್ಳಿ, ಹನುಮನಹಳ್ಳಿ, ಬಸಾಪುರ, ಗಿಣಗೇರಿ, ಭೀಮನೂರು, ಗಬ್ಬೂರು, ಹಾಲಳ್ಳಿ, ಗುಡದಳ್ಳಿ, ಅಲ್ಲಾನಗರ, ಹಳೇ ಕನಕಾಪುರ, ಕನಕಾಪುರ ತಾಂಡಾ, ಹೊಸ ಕನಕಾಪುರ ತಾಂಡಾ ಸೇರಿದಂತೆ ಇನ್ನೂ ಹತ್ತಾರು ಹಳ್ಳಿಗಳ ವ್ಯಾಪ್ತಿಯಲ್ಲಿ ಬೋರ್‌ವೆಲ್‌ ಗಳ ಅಂತರ್ಜಲ ಹೆಚ್ಚಳವಾಗಿ ರೈತರ ಕೃಷಿ ಬದುಕಿಗೆ ಆಸರೆಯಾಗಲಿದೆ. ಸರ್ಕಾರ ಕೆರೆ ತುಂಬಿಸುವ ಯೋಜನೆಯಡಿ ಈ ಕೆರೆ ಆಯ್ಕೆ ಮಾಡಿಕೊಂಡಿದ್ದು ಕೆರೆಯಲ್ಲಿ ನೀರು ತುಂಬಿದರೆ ಪಕ್ಷಿಗಳ ಸಂಕುಲವೂ ಉಳಿಯಲಿದೆ. ಮಣ್ಣು ಅಕ್ರಮಕ್ಕೆ ಕಡಿವಾಣ: ಗಿಣಗೇರಿ ಕೆರೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಮರಂ ತುಂಬಿ ಬೇರೆ ಕಡೆ ಸಾಗಾಟದ ದಂಧೆ ಸದ್ದಿಲ್ಲದೇ ನಡೆಯುತ್ತಿದೆ. ಈ ಹಿಂದೆಯೇ ಮರಂ ಅಕ್ರಮ ದಂಧೆ ಕುರಿತು ಮಾಧ್ಯಮದಲ್ಲಿ ವರದಿಗಳು ಬಂದಿದ್ದವು. ಪ್ರಸ್ತುತ ಗವಿಸಿದ್ದೇಶ್ವರ ಸ್ವಾಮೀಜಿ ಗಿಣಗೇರಿ ಕೆರೆ ಅಭಿವೃದ್ಧಿ, ಸಸ್ವತ್ಛತೆ, ಸಂವರ್ಧನೆಗೆ ಮುಂದಾಗಿದ್ದಾರೆ. ಹಾಗಾಗಿ ಮರಂ ಅಕ್ರಮ ಸಾಗಾಟಕ್ಕೂ ಕಡಿವಾಣ ಬಿದ್ದಂತಾಗಲಿದೆ. ಈ ಕುರಿತು ಶ್ರೀಗಳು ಜಿಲ್ಲಾಡಳಿತದ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.