ಬಡವರಿಗೆ ಉತ್ತಮ ಚಿಕಿತ್ಸೆ ನೀಡಿದರೆ ಪುಣ್ಯ ಪ್ರಾಪ್ತಿ  

ಎಲ್ಲಾ ಸರಕಾರಿ ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ

Team Udayavani, Apr 26, 2022, 3:05 PM IST

koppala

ಗಂಗಾವತಿ: ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಅಚ್ಚುಕಟ್ಟಾಗಿ ಅನುಷ್ಠಾನ ಮಾಡಿದ್ದರಿಂದ ಜನರಿಗೆ ಎಲ್ಲ ಆರೋಗ್ಯ ಸೇವೆಗಳು ಲಭ್ಯವಾಗಿವೆ. ಆದ್ದರಿಂದ ಸತತ ಮೂರನೇ ಬಾರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಕಾಯಕ ಆಸ್ಪತ್ರೆ ಪ್ರಶಸ್ತಿ ಲಭಿಸಿದೆ. ಇದರಂತೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭಿಸಬೇಕೆಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಹೇಳಿದರು.

ಅವರು ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಜಾಗೃತಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಗಂಗಾವತಿ ಸರಕಾರಿ ಆಸ್ಪತ್ರೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆ ಇರದಂತೆ ಸ್ವಚ್ಛತೆ ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಕಡಿಮೆ ಇಲ್ಲ. ನಿತ್ಯವೂ ಗಂಗಾವತಿ ಹಾಗೂ ಬೇರೆ ಊರುಗಳಿಂದ ರೋಗಿಗಳು ಇಲ್ಲಿಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿರುವುದು ಇಲ್ಲಿಯ ವೈದ್ಯರು ಮತ್ತು ಸಿಬ್ಬಂದಿ ವರ್ಗದ ಕಾರ್ಯ ಮೆಚ್ಚುವಂತಹದ್ದು. ಈ ಬಾರಿಯ ಕಾಯಕ ಪ್ರಶಸ್ತಿ ಜತೆ 15 ಲಕ್ಷ ರೂ. ನಗದು ಹಣ ಬಂದಿದ್ದು, ತಾವು ಸಹ ವೈಯಕ್ತಿಕವಾಗಿ 5 ಲಕ್ಷ ರೂ. ವಿತರಿಸುತ್ತಿದ್ದು, ಆಸ್ಪತ್ರೆಯ ಮೂಲಸೌಕರ್ಯ ಕಲ್ಪಿಸುವ ಜತೆ ಇಲ್ಲಿಯ ವೈದ್ಯರು ಸಿಬ್ಬಂದಿ ವರ್ಗದವರಿಗೂ ಶೇ. 30ರಷ್ಟು ಹಣ ವಿತರಣೆ ಮಾಡಬೇಕು. ಜನಪ್ರತಿನಿಧಿಗಳನ್ನು ಮೆಚ್ಚಿಸಲು ಕೆಲವೊಮ್ಮೆ ಅವರು ಆಗಮಿಸಿದ ಸಂದರ್ಭದಲ್ಲಿ ಮಾತ್ರ ಶಿಸ್ತು ಸ್ವಚ್ಛತೆಯಿಂದ ಕಾರ್ಯಕ್ರಮ ನಡೆಸಲಾಗುತ್ತದೆ. ತಾವೂ ಈ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವುದಾಗಿ ಹೇಳಿದರು.

ಇದೇ ಮಾದರಿಯಲ್ಲಿ ನೂತನ ವಿಜಯನಗರ(ಹೊಸಪೇಟೆ) ಜಿಲ್ಲೆಯಲ್ಲೂ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಶೀಘ್ರವೇ ಅಲ್ಲಿಯ ವೈದ್ಯರು ಮತ್ತು ಆರೋಗ್ಯ ಇಲಾಖೆ ಅಧಿ ಕಾರಿಗಳನ್ನು ಗಂಗಾವತಿಗೆ ಆಸ್ಪತ್ರೆಗೆ ಕಳುಹಿಸಿ ಮಾಹಿತಿ ಪಡೆಯುವಂತೆ ಸೂಚನೆ ನೀಡಲಾಗುತ್ತದೆ ಎಂದರು.

ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ನಗರಸಭೆ ಸದಸ್ಯ ವಾಸುದೇವ ನವಲಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅರಿಕೇರಿ ಶಿವಕುಮಾರ, ಟಿ.ಆರ್‌. ರಾಯಬಾಗಿ, ಜಿಲ್ಲಾಧಿಕಾರಿ ಸುರಳ್ಕರ್‌ ವಿಕಾಸ ಕಿಶೋರ್‌, ಸಿಇಒ ಫೌಜೀಯಾ ತರನ್ನುಮ್‌, ಬಿಇಒ ಸೋಮಶೇಖರಗೌಡ, ಟಿಎಚ್‌ಒ ಡಾ|ರಾಘವೇಂದ್ರ, ವೈದ್ಯಾಧಿಕಾರಿ ಡಾ| ಈಶ್ವರ ಸವಡಿ, ಡಾ| ಗೌರಿಶಂಕರ್‌, ಡಾ| ಮಹೇಶ, ಆಶಾಬೇಗಂ, ಶಿವಾನಂದ, ಕಿರಣ್‌, ಪಲ್ಲವಿ, ವಿಜಯಪ್ರಸಾದ ಸೇರಿ ಅನೇಕರಿದ್ದರು.

ಗಂಗಾವತಿ ನಗರ ವಾಣಿಜ್ಯವಾಗಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿದ್ದು, ಬೈಪಾಸ್‌ ಟುವೇ ರಸ್ತೆ ನಿರ್ಮಾಣ ಹಾಗೂ ಆನೆಗೊಂದಿ-ಮುನಿರಾಬಾದ್‌ ರಸ್ತೆ ಅಗಲೀಕರಣ ಮಾಡಬೇಕಿದ್ದು, ಪ್ರಭಾವಿ ಸಚಿವರೆನ್ನಿಸಿಕೊಂಡಿರುವ ಆನಂದ ಸಿಂಗ್‌ ಶಾಸಕರಿಂದ ಪ್ರಸ್ತಾವನೆ ಪಡೆದು ಯೋಜನೆ ರೂಪಿಸಬೇಕಿದೆ. ಗಂಗಾವತಿ ಭಾಗದಲ್ಲಿ ಎನ್.ಎಚ್. ರಸ್ತೆಗಳಿಲ್ಲ. ಆದ್ದರಿಂದ ಕೇಂದ್ರ ಸರಕಾರ ರಸ್ತೆ ನಿರ್ಮಾಣದ ಯೋಜನೆ ಅನುಷ್ಠಾನ ಮಾಡಲು ಬರುವುದಿಲ್ಲ. ಆದ್ದರಿಂದ ರಾಜ್ಯ ಸರಕಾರದ ಯೋಜನೆಯಲ್ಲಿ ಗಂಗಾವತಿ ಭಾಗದ ರಸ್ತೆಗಳ ಅಭಿವೃದ್ಧಿಯಾಗಬೇಕಿದೆ. ರಸ್ತೆಗಳ ಅಭಿವೃದ್ಧಿಯಿಂದ ಈ ಭಾಗದ ಪ್ರಗತಿ ಸಾಧ್ಯ. ಜನತೆ ಆರೋಗ್ಯ ಸೇವೆಗಾಗಿ ಸಾವಿರಾರು ರೂ. ಖರ್ಚು ಮಾಡದೇ ಸರಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಸೌಕರ್ಯಗಳ ಚಿಕಿತ್ಸೆ ಲಭ್ಯತೆ ಸದ್ಬಳಕೆ ಮಾಡಿಕೊಳ್ಳಬೇಕು. ಸಂಗಣ್ಣ ಕರಡಿ, ಸಂಸದರು

ಇಲ್ಲಿಯ ಸರಕಾರಿ ಆಸ್ಪತ್ರೆ ರಾಜ್ಯ ಮತ್ತು ಕೇಂದ್ರಕ್ಕೆ ಮಾದರಿಯಾಗಿದೆ. ವೈದ್ಯರು ಮತ್ತು ಸಿಬ್ಬಂದಿ ವರ್ಗದವರ ಪರಿಶ್ರಮದ ಫಲ ಇದಾಗಿದ್ದು ಆರೋಗ್ಯ ಲ್ಯಾಬ್‌ ಮತ್ತು ವೈದ್ಯ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಉಸ್ತುವಾರಿ ಮೂಲಕ ಸಲ್ಲಿಸಲಾಗುತ್ತದೆ. 5 ಲಕ್ಷ ರೂ. ವರೆಗೆ ಆರೋಗ್ಯ ಸೇವೆಗಳನ್ನು ಆಯುಷ್‌ ಭಾರತ ಕರ್ನಾಟಕ ಕಾರ್ಡ್‌ ಹೊಂದುವ ಮೂಲಕ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜನರು ಚಿಕಿತ್ಸೆ ಪಡೆಯಬಹುದಾಗಿದೆ. ಆರೋಗ್ಯ ಇಲಾಖೆ ಸೇರಿದಂತೆ ಗಂಗಾವತಿ ಕ್ಷೇತ್ರದಲ್ಲಿ ಪ್ರವಾಸೋದ್ಯಮ, ಶಿಕ್ಷಣ, ವಸತಿ ಹೀಗೆ ಅನೇಕ ಜನಪರವಾದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ. ಕ್ಷೇತ್ರಕ್ಕೆ ಕೋಟ್ಯಂತರ ರೂ. ತಂದು ನೀರಾವರಿ ಕೆರೆ ಅಭಿವೃದ್ಧಿ ಪಡಿಸಲಾಗಿದೆ. ಪರಣ್ಣ ಮುನವಳ್ಳಿ, ಶಾಸಕ

ಟಾಪ್ ನ್ಯೂಸ್

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.