12ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ
Team Udayavani, Mar 31, 2022, 6:15 PM IST
ಕೊಪ್ಪಳ: ಸರ್ಕಾರಿ ನೌಕರರ ಸಂಘದ ಜಿಲ್ಲಾಮಟ್ಟದ ವಾರ್ಷಿಕ ಕ್ರೀಡಾಕೂಟ ಏ. 12 ಮತ್ತು 13ರಂದು ಎರಡು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಕ್ರೀಡಾಂಗಣ ಸಮಿತಿ ಪ್ರಧಾನ ವ್ಯವಸ್ಥಾಪಕ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏ. 12 ಮತ್ತು 13ರಂದು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಕ್ರೀಡಾಕೂಟಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಸಕಲ ನೆರವು ಒದಗಿಸಬೇಕು. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೂ ಜವಾಬ್ದಾರಿ ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ವಹಿಸಿದ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕ್ರೀಡಾಕೂಟ ಯಶಸ್ವಿಗೊಳಿಸಬೇಕು. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕುಸ್ತಿ, ಪವರ್ ಲಿಫ್ಟಿಂಗ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಬಾರಿ ಈಜು ಸ್ಪರ್ಧೆಯನ್ನು ಸಹ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಎಡಿಸಿಎಂ.ಪಿ. ಮಾರುತಿ ಮಾತನಾಡಿ, 2021-22ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಸರ್ಕಾರಿ ನೌಕರರು ಆಗಮಿಸಿ, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತಾಗಬೇಕು. ನೌಕರರಿಗೆ ಒಒಡಿ ಸೌಲಭ್ಯ ಒದಗಿಸುವುದು ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ನಾಗರಾಜ ಜುಮ್ಮನ್ನವರ್ ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರ ಬಂಧುಗಳು ವೆಬ್‌ಸೈಟ್ https://bit.ly/koppalksgea ಲಿಂಕ್ ಮೂಲಕ ಏ. 5ರೊಳಗೆ ಕಡ್ಡಾಯವಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ತಿಳಿಸಿದರು. ಸಭೆಯಲ್ಲಿ ಅಧಿಕಾರಿಗಳಾದ ಅಮೃತ್ ಅಸ್ಟಗಿ, ಸದಾಶಿವ, ಡಾ| ಎಚ್. ನಾಗರಾಜ್, ಜಿ. ಸುರೇಶ, ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಮುಸ್ತಫಾ ಕುದರಿಮೋತಿ, ಕೋಶಾಧ್ಯಕ್ಷ ಸುಶಿಲೇಂದ್ರರಾವ್ ದೇಶಪಾಂಡೆ, ಕಾರ್ಯದರ್ಶಿ ಶಿವಪ್ಪ ಜೋಗಿ, ಸಹ ಕಾರ್ಯದರ್ಶಿ ವೆಂಕಟೇಶ ಕುಲಕರ್ಣಿ, ಬೀರಪ್ಪ ಅಂಡಗಿ ಚಿಲವಾಡಗಿ, ಯಶವಂತ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು, ಜಿಲ್ಲಾ ಕ್ರೀಡಾಂಗಣ ಸಮಿತಿ ಪದಾಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.