ರೈಸ್ ಟೆಕ್ನಾಲಜಿ ಪಾರ್ಕ್ ಅಭಿವೃದ್ಧಿಗೆ ಸರ್ಕಾರ ಬದ್ಧ
Team Udayavani, May 20, 2020, 3:00 PM IST
ಕನಕಗಿರಿ: ರೈಸ್ ಟೆಕ್ನಾಲಜಿ ಪಾರ್ಕ್ ಅಭಿವೃದ್ಧಿಗೆ 120 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬದ್ಧವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಸಮೀಪದ ನವಲಿ ಹತ್ತಿರ ಇರುವ ರೈಸ್ ಟೆಕ್ನಾಲಜಿ ಪಾರ್ಕ್‌ಗೆ ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೇ.40 ಮತ್ತು ರಾಜ್ಯ ಸರ್ಕಾರ ಶೇ.60 ಅನುದಾನ ನೀಡಿದೆ. ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣದಿಂದ ಈ ಭಾಗದ ಜನರಿಗೆ ಉದ್ಯೋಗ ಸೇರಿದಂತೆ ಹಲವಾರು ಅನುಕೂಲವಾಗಲಿದೆ. ಪಾರ್ಕ್‌ನ ಉದ್ದೇಶ ಭತ್ತದ ಎಲ್ಲ ಸಮಸ್ಯೆಗಳಿಗೆ ಏಕಗವಾಕ್ಷಿ ಪರಿಹಾರ ನೀಡುವುದು. ಉಪ ಉತ್ಪನ್ನಗಳ ತಯಾರಿಕೆ ಘಟಕಗಳ ಸ್ಥಾಪನೆ ಮಾಡುವುದು.ರಾಷ್ಟ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆ ಜೋಡಣೆಯಾಗುತ್ತದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದೆ. ರೈಸ್ ಟೆಕ್ನಾಲಜಿ ಪಾರ್ಕ್ ಸ್ಥಾಪನೆಯಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದರು.
ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ವರದಿ ತಯಾರಿಸಲು ಈಗಾಗಲೇ 14 ಕೋಟಿ ರೂ. ಅನುದಾನ ಕೂಡಾ ಬಿಡುಗಡೆ ಮಾಡಲಾಗಿದೆ. ಲಾಕ್‌ಡೌನ್ ಆದ ಮೇಲೆ ಎಲ್ಲ ಚಟುವಟಿಕೆಗಳು ನಿಂತರೂ ಕೂಡ ಕೃಷಿ ಚಟುವಟಿಕೆಗಳು ಮಾತ್ರ ಎಲ್ಲೂ ನಿಂತಿಲ್ಲ. ಎಷ್ಟೇ ಕಷ್ಟವಾಗಲಿ ಏನೇ ತೊಂದರೆಯಾಗಲಿ ನಾವು ಕೃಷಿ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಡಿಪ್ಲೋಮಾ ಇನ್ ಅಗ್ರಿಕಲ್ಚರಲ್ ಮಾಡಿದ 2,326 ವಿದ್ಯಾರ್ಥಿಗಳನ್ನು ರೈತಮಿತ್ರ ಎಂದು ನೇಮಕಾತಿ ಮಾಡಿಕೊಳ್ಳುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಆತ್ಮ ಯೋಜನೆ ಯಾವುದೇ ರೀತಿಯಲ್ಲಿ ನಿಲ್ಲುವುದಿಲ್ಲ ಅದು ಮುಂದುವರಿಯುತ್ತದೆ ಎಂದರು
ಇದೇ ವೇಳೆ ಭತ್ತಕ್ಕೆ ಉತ್ತಮ ಬೆಂಬಲ ನೀಡುವಂತೆ ಸ್ಥಳೀಯ ರೈತರು ಸಚಿವರಿಗೆ ಮನವಿ ಸಲ್ಲಿಸಿದರು. ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮನವಳ್ಳಿ, ಬಸವರಾಜ ದಡೇಸುಗೂರು, ಎಪಿಎಂಸಿ ಅಧ್ಯಕ್ಷ ಶರಣಪ್ಪ ಭಾವಿ, ಪ್ರಮುಖರಾದ ನಾಗರಾಜ ಬಿಲ್ಗಾರ್, ರಮೇಶ ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.