ಉದ್ಯೋಗ ಖಾತ್ರಿ ಉತ್ತಮ ಅವಕಾಶ
Team Udayavani, Jun 4, 2020, 7:10 AM IST
ಕುಷ್ಟಗಿ: ಗುಮಗೇರಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಭಿತ್ತಿಪತ್ರವನ್ನು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಬಿಡುಗಡೆ ಮಾಡಿದರು.
ಕುಷ್ಟಗಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಬದು, ಕೃಷಿ ಹೊಂಡ ನಿರ್ಮಾಣ, ತೋಟಗಾರಿಕೆ, ರೇಷ್ಮೆ ಕೃಷಿ, ಅರಣ್ಯೀಕರಣ, ಎರೆಹುಳ ಗೊಬ್ಬರ, ತೊಟ್ಟಿ ನಿರ್ಮಾಣ ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.
ಗುಮಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್ ವೈರಸ್ ವ್ಯಾಪಕವಾಗಿದ್ದು, ವಲಸೆ ಬಂದವರು, ಪುನಃ ಹೊರರಾಜ್ಯ, ಜಿಲ್ಲೆಗಳಿಗೆ ಪುನಃ ವಲಸೆ ಹೋಗುವುದು ಅಗತ್ಯವಿಲ್ಲ. ಇಲ್ಲಿಯೇ ತಮ್ಮ ಜಮೀನಿನಲ್ಲಿ ಕೆಲಸವಿದೆ. ಕಾಯಕ ಮಿತ್ರ ಆ್ಯಪ್ ಮೂಲಕ ಕೂಲಿ ಬೇಡಿಕೆ ಸಲ್ಲಿಸಲು ಲಾಗಿನ್ ನೋಂದಣಿ ಅಗತ್ಯವಿಲ್ಲ. 15 ದಿನಗಳ ವರೆಗೆ ಕೂಲಿ ಬೇಡಿಕೆ ಸಲ್ಲಿಸಬಹುದಾಗಿದೆ ಎಂದರು.
ತಾಪಂ ಇಒ ಕೆ.ತಿಮ್ಮಪ್ಪ, ರವಿಕುಮಾರ ಜಂಬಲದಿನ್ನಿ, ತನ್ವಿರ್, ಚಂದ್ರಶೇಖರ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು, ಪಿಡಿಒ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.