ಅತಿಥಿ ಉಪನ್ಯಾಸಕರ ಅಹೋರಾತ್ರಿ ಧರಣಿಗೆ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಬೆಂಬಲ
Team Udayavani, Jan 4, 2022, 4:33 PM IST
ಗಂಗಾವತಿ: ಸೇವಾ ಭದ್ರತೆ ಹಾಗೂ ಪ್ರತಿ ತಿಂಗಳು ವೇತನ ಬಿಡುಗಡೆಗೆ ಆಗ್ರಹಿಸಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ವಿವಿಧ ಕಾಲೇಜುಗಳ 1000 ಕ್ಕೂ ಅಧಿಕ ವಿದ್ಯಾರ್ಥಿಗಳು ನಗರದ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಸರ್ವಜ್ಞಮೂರ್ತಿ ಮಾತನಾಡಿ, ಕಳೆದ 25 ವರ್ಷಗಳಿಂದ ಅತಿಥಿ ಉಪನ್ಯಾಸಕರು ಕಡಿಮೆ ವೇತನಕ್ಕೆ ಸೇವಾ ಭದ್ರತೆ ಇಲ್ಲದೇ ಕೆಲಸ ಮಾಡಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತಿದ್ದಾರೆ. ಸರಕಾರ ಅತಿಥಿ ಉಪನ್ಯಾಸಕರನ್ನು ಕೂಡಲೇ ಖಾಯಂ ಗೊಳಿಸಬೇಕು. ಕುಟುಂಬ ನಿರ್ವಹಣೆ ಮಾಡಲು ಅನುಕೂಲವಾಗುವಂತೆ ವೇತನ ಪರಿಷ್ಕರಣೆ ಮಾಡಬೇಕು. ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರು ಇಷ್ಟ ಇದ್ದರೆ ಕೆಲಸ ಮಾಡಲಿ ಇಲ್ಲದಿದ್ದರೆ ಬೇರೆ ಕಡೆ ಹೋಗಲಿ ಎನ್ನುವ ಹೇಳಿಕೆ ನೀಡಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮೀಣ ಮಕ್ಕಳು ಇದೀಗ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅವಶ್ಯವಾಗಿದೆ. ಅವರಿಗೆ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕಿ ಲಕ್ಷ್ಮಮ್ಮ ಭೋಸ್ಲೆ, ಲಿಂಗರಾಜ್, ಅಂಬರೀಶ, ಬಸವರಾಜ, ಶರಣಬಸವ,ಪ್ರವೀಣ ಸೇರಿ ಅನೇಕ ವಿದ್ಯಾರ್ಥಿ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.