Protest: ಸೇವೆ ಖಾಯಂಗೆ ಆಗ್ರಹಿಸಿ ರಕ್ತದಲ್ಲಿ ಪತ್ರ ಬರೆದು ಅತಿಥಿ ಉಪನ್ಯಾಸಕರ ಪ್ರತಿಭಟನೆ
Team Udayavani, Dec 20, 2023, 1:33 PM IST
ಕೊಪ್ಪಳ: ಸೇವೆ ಖಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಧರಣಿ ಮುಂದುವರೆದಿದ್ದು ಇಂದು ಕೊಪ್ಪಳದ ಪ್ರಥಮ ದರ್ಜೆ ಕಾಲೇಜಿನ ಮುಂದೆ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಅತಿಥಿ ಉಪನ್ಯಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಹುದ್ದೆ ಖಾಯಂಗೊಳಿಸುವಂತೆ ಆಗ್ರಹಿಸಿ ರಕ್ತದಲ್ಲಿ ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.
ಕಳೆದ 28 ದಿನಗಳಿಂದ ಅತಿಥಿ ಉಪನ್ಯಾಸಕರು ಹುದ್ದೆ ಖಾಯಂಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದು ಬುಧವಾರ ಅತಿಥಿ ಉಪನ್ಯಾಸಕರು ರಕ್ತದ ಮೂಲಕ ಸರಕಾರಕ್ಕೆ ಪತ್ರ ಬರೆಯುವ ಮೂಲಕ ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಹಲವು ಅತಿಥಿ ಉಪನ್ಯಾಸಕರು ಭಾಗಿಯಾಗಿದ್ದು ಇದರಿಂದ ವಿದ್ಯಾರ್ಥಿಗಳಿಗೆ ನುಂಗಲಾರದ ತುಪ್ಪದಂತಾಗಿದೆ.
ಇದನ್ನೂ ಓದಿ: New Delhi: ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಕರ್ನಾಟಕ ಸಿಎಂ: ಪರಿಹಾರ ಬಿಡುಗಡೆಗೆ ಆಗ್ರಹ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.