ಅಂಜನಾದ್ರಿ ಬೆಟ್ಟ ಹಿಂದೂಗಳ ಸ್ವತ್ತು ಮುಸ್ಲಿಂ, ಕ್ರೈಸ್ತರ ಸ್ವತ್ತಲ್ಲ: ಎಚ್ ಆರ್ ಚನ್ನಕೇಶವ

Team Udayavani, Apr 20, 2022, 7:58 PM IST

Untitled-1

ಗಂಗಾವತಿ: ಅಂಜನಾದ್ರಿ ಬೆಟ್ಟ ಕೇವಲ ಹಿಂದು ಧರ್ಮದ ಸ್ವತ್ತು ಮುಸ್ಲಿಂ ಹಾಗೂ ಕ್ರೈಸ್ತರ ಸ್ವತ್ತಲ್ಲ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಬಿಜೆಪಿ ಹಿರಿಯ ಮುಖಂಡ ಎಚ್ ಆರ್ ಚನ್ನಕೇಶವ ಆಗ್ರಹಿಸಿದ್ದಾರೆ.

ಶ್ರೀ ರಾಮನ ಬಂಟ ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಕೇವಲ ಹಿಂದು ಧರ್ಮದ ಸ್ವತ್ತಾಗಿದೆ.  ಇದರಲ್ಲಿ ಅನ್ಯ ಮತೀಯರಿಗೆ ಯಾವುದೇ ಹಕ್ಕು ಇರಲ್ಲ.  ಕೇವಲ ಅವರು ಆಂಜನೇಯನ ಭಕ್ತರಾಗಿ ದರ್ಶನ ಪಡೆಯಬೇಕು.  ಅಂಜನಾದ್ರಿ ಬೆಟ್ಟ ಮುಸ್ಲಿಂಮರ ಸತ್ತು  ಕ್ರೈಸ್ತರ ಸ್ವತ್ತು ಎಂದು ಮಾಜಿ ಸಚಿವ ಅನ್ಸಾರಿ  ಹೇಳಿಕೆ ಖಂಡನೀಯವಾಗಿದೆ ಎಂದರು.

ಗಂಗಾವತಿ ಕ್ಷೇತ್ರದಲ್ಲಿ ಮುಸ್ಲಿಂರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಲಿದೆ ಎಂಬ ವಿಡಿಯೋ ವೈರಲ್ ನಿಂದಾಗಿ ಕಾಂಗ್ರೆಸ್ ನಲ್ಲಿ ಗೊಂದಲ ಮೂಡಿತು ಅದನ್ನು ಮರೆಮಾಚಲು ಅಂಜನಾದ್ರಿ ಎಲ್ಲರಿಗೆ ಸೇರಿದ್ದು ಎಂದು ಹನುಮ ಮಾಲೆ ಯ ವೇಷ ಹಾಕಿ ಕೊಳ್ಳುವುದು ಸರಿಯಲ್ಲ .  ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಿಂದು ಧರ್ಮದ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ಬಂಟ ಹನುಮಂತನ ಜನ್ಮಸ್ಥಳವಾಗಿದೆ. ಈ ಅಂಜನಾದ್ರಿ ಬೆಟ್ಟವನ್ನು ಭಾರತೀಯ ಜನತಾ ಪಕ್ಷದ ರಾಜ್ಯ ಸರಕಾರ  ಅಭಿವೃದ್ಧಿ ಮಾಡಲು ಮುಂದಾಗಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ರೂ.100 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.  ಮತ್ತು  ಸರಕಾರ ಸರ್ವ ಭಕ್ತರಿಗೆ ಅನುಕೂಲವಾಗುವ ರೀತಿಯ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಮತ್ತು ಅಂಜನಾದ್ರಿ ಬೆಟ್ಟ ರಾಜ್ಯ ಸರಕಾರದ ಹಿಂದು ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ ಎಂಬುದು ಇಕ್ಬಾಲ್ ಅನ್ಸಾರಿ ಅರಿತುಕೊಳ್ಳಬೇಕು.  ಅಂಜನೇಯ ಸಮಸ್ಥ ಹಿಂದುಗಳ ಆರಾಧ್ಯ ದೈವವಾಗಿದ್ದಾನೆ.  ಪ್ರತಿಯೊಂದು ಗ್ರಾಮದಲ್ಲಿ ಹನುಮಂತನ ಸ್ಮರಣೆ ನಿತ್ಯ ನಡೆಯುತ್ತದೆ.  ಇತ್ತೀಚಿಗೆ ಅಂಜನಾದ್ರಿಗೆ ನಿತ್ಯ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ.  ಅಂಜನಾದ್ರಿ ಬೆಟ್ಟ ಅಧಿಕೃತವಾಗಿ ಹಿಂದು ಧರ್ಮದ ಸ್ವತ್ತಾಗಿದೆ.  ಇದು ಯಾವತ್ತು ಅನ್ಯ ಧರ್ಮೀಯರ ಸ್ವತ್ತಾಗಲು ಸಾಧ್ಯವಿಲ್ಲ.  ಅನ್ಯ ಧರ್ಮಿಯರು ದರ್ಶನ ಪಡೆದು, ತಮಗೆ ಇಷ್ಟವಾದ ಪೂಜೆ, ಪುನಸ್ಕಾರಗಳನ್ನು ಕೈಗೊಳ್ಳಬಹುದೇ ಹೊರತು ಅಂಜನಾದ್ರಿಯಲ್ಲಿ ಯಾವುದೇ ಅಧಿಕಾರ ಮತ್ತು ಹಕ್ಕು ಇರುವುದಿಲ್ಲ ಎಂದು ಚನ್ನಕೇಶವ ಸಲಹೆ ನೀಡಿದ್ದಾರೆ.

ಇಕ್ಬಾಲ್ ಅನ್ಸಾರಿ ತಮ್ಮ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಲ್ಲಿ ಅಂಜನಾದ್ರಿಯನ್ನು ಎಳೆದು ತರಬಾರದು.  ಈಗಾಗಲೇ ರಾಜ್ಯದಲ್ಲಿ ದೇವಸ್ಥಾನ, ಪೂಜೆ ಮತ್ತು ಹಿಂದು ಧಾರ್ಮಿಕ ಕ್ಷೇತ್ರಗಳಲ್ಲಿ ಅನ್ಯ ಧರ್ಮಿಯರಿಗೆ ಯಾವುದೇ ಅವಕಾಶ ನೀಡಬಾರದು ಎಂದು ವಾದ ಜೋರಾಗಿದೆ.  ಇಂತಹ ಸಂದರ್ಭದಲ್ಲಿ ಸರ್ವ ಧರ್ಮಗಳ ನಡುವೆ ಸಾಮರಸ್ಯ ಮೂಡಿಸುವ ಕೆಲಸ ಎಲ್ಲರು ಸೇರಿ ಮಾಡಬೇಕು.  ಆದರೆ ಅನ್ಸಾರಿ ಅವರು ಅಂಜನಾದ್ರಿ ಬೆಟ್ಟ ಮುಸ್ಲಿಂರ ಸ್ವತ್ತು ಎಂದು ಹೇಳಿಕೆ ನೀಡಿ ಕ್ಷೇತ್ರದ ಸಮಸ್ಥ ಹಿಂದುಗಳ ಭಾಗವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.  ಅಂಜನಾದ್ರಿ ಬೆಟ್ಟ ಎಲ್ಲರ ಎಲ್ಲರ ಸ್ವತ್ತು ಎಂದು ಹೇಳುವ ಇಕ್ಬಾಲ್ ಅನ್ಸಾರಿ ಅವರು ಮುಸ್ಲಿಂ ಧರ್ಮಗಳ ಪ್ರಾಥನಾ ಮಂದಿರಗಳು ಕೂಡಾ ಹಿಂದುಗಳ ಸ್ವತ್ತಾಗಿವೆ ಎಂದು ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿರುವ ಹೆಚ್.ಆರ್.ಚನ್ನಕೇಶವ ಅವರು ರಾಜಕಾರಣ ಮಾಡುವ ಸಂದರ್ಭದಲ್ಲಿ ಅನವಶ್ಯಕವಾಗಿ ಮಸೀದಿ, ಮಂದಿರ ಸೇರಿದಂತೆ ಯಾವುದೇ ಧರ್ಮದ ಭಾವನೆಗೆ ಮುಜುಗರ ಮೂಡಿಸುವುದು ಮತ್ತು ಧಕ್ಕೆ ತರುವಂತಹ ಹೇಳಿಕೆ ನೀಡಬಾರದು.  ಅನ್ಸಾರಿ ಅವರ ಹೇಳಿಕೆ ಗಂಗಾವತಿ ಕ್ಷೇತ್ರದಲ್ಲಷ್ಟೆ ಅಲ್ಲ ರಾಜ್ಯದಲ್ಲಿ ಗಮನ ಸೇಳೆಯುವಂತಾಗಿದೆ.  ತಕ್ಷಣ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು.  ತಮ್ಮ ಕಾಂಗ್ರೆಸ್ ಪಕ್ಷದ ರಾಜಕೀಯ ತಿಕ್ಕಾಟವನ್ನು ಹಿಂದುಗಳ ಭಾವನೆಗೆ ಬಳಸಿಕೊಳ್ಳಲು ಮುಂದಾಗಿರುವುದು ಖಂಡನೀಯವಾಗಿದೆ ಎಂದು  ಅನ್ಸಾರಿ ವಿರುದ್ಧ ಬಿಜೆಪಿ ಮುಖಂಡ ಚನ್ನಕೇಶವ ಟೀಕಿಸಿದ್ದಾರೆ .

ಟಾಪ್ ನ್ಯೂಸ್

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.