![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 19, 2022, 1:20 PM IST
ಕೊಪ್ಪಳ: ಆರ್ ಎಸ್ಎಸ್ ಬಗ್ಗೆ ಮಾತನಾಡದೆ ಹೋದರೆ ಕಾಂಗ್ರೆಸ್ ಗೆ ನಿದ್ದೆಯೇ ಬರುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಮಾತೆತ್ತಿದರೆ ಸಂಘ ಪರಿವಾರದ ಬಗ್ಗೆ ಮಾತಾಡುತ್ತದೆ. ಹೆಡಗೇವಾರ್ ರ ಪಠ್ಯ ಪುಸ್ತಕದಲ್ಲಿ ಸೇರಿಸುವ ವಿಚಾರ, ಅದರಲ್ಲಿ ತಪ್ಪೇನಿದೆ. ಸೇರಿಸಿದರೆ ಏನು ತಪ್ಪು? ಅವರು ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಒಂದು ಪಂಗಡಕ್ಕೆ ಕೆಲಸ ಮಾಡಿಲ್ಲ. ಹಿರಿಯರ ವಿಚಾರ ಪಠ್ಯದಲ್ಲಿ ಸೇರಸಿದರೆ ಏನು ಕಷ್ಟ ಎಂದರು.
ಭಗತ್ ಸಿಂಗ್ ಅವರನ್ನು ಪಠ್ಯದಿಂದ ಕೈ ಬಿಟ್ಟಿಲ್ಲ. ಕಾಂಗ್ರೆಸ್ ನವರಿಗೆ ಆರ್ ಎಸ್ಎಸ್ ಹೆಸರು ತೆಗೆಯದೆ ಹೋದರೆ ನಿದ್ದೆ ಬರಲ್ಲ, ಅದಕ್ಕೆ ನಾವೇನು ಮಾಡೋಕಾಗಲ್ಲ ಎಂದರು.
ಇದನ್ನೂ ಓದಿ:ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತಿಲ್ಲ: ಶೋಭಾ ಕರಂದ್ಲಾಜೆ ಸ್ಪಷ್ಟನೆ
ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ವಿಚಾರ, ಇದೀಗ ಕೋರ್ಟ್ ಆದೇಶದ ಪ್ರಕಾರ ಸರ್ವೆ ಕೆಲಸ ನಡಿತೀದೆ ಎಂದರು.
ಕೊಪ್ಪಳ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಮಳೆಯಾಗಿದೆ. ಯಾವುದೇ ಜೀವಹಾನಿ ಆಗಿಲ್ಲ. ಕೆಲವು ಗ್ರಾಮದಲ್ಲಿ ನೀರು ನುಗ್ಗಿ ಹಾನಿಯಾಗಿದೆ. ಈಗಾಗಲೇ ಅಧಿಕಾರಿಗಳು ಸ್ಥಳಕ್ಕೆ ಹೋಗಿದ್ದಾರೆ. ಹಾನಿಯ ವರದಿ ಕೊಡಲು ಸೂಚಿಸಿದ್ದೇನೆ. ಏಕಾಏಕಿ ಇಷ್ಟೊಂದು ಪ್ರಮಾಣದ ಮಳೆ ಬರುತ್ತದೆ ಎಂದು ಗೊತ್ತಿರಲಿಲ್ಲ. ನಾನು ಈಗಾಗಲೇ ಹಲವಾರು ಪ್ರದೇಶಕ್ಕೆ ಭೇಟಿ ಕೊಟ್ಟಿದ್ದೇನೆ. ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.