Hampi-ಆನೆಗೊಂದಿ:ಅನಧಿಕೃತ ಹೋಟೆಲ್, ರೆಸಾರ್ಟ್ ಗಳ ತೆರವಿಗೆ ಸಿದ್ಧತೆ

ನಿಯಮ ಮೀರಿ ವಾಣಿಜ್ಯ ಚಟುವಟಿಕೆ; ಪ್ರವಾಸೋದ್ಯಮಕ್ಕೆ ಹಿನ್ನಡೆ ಸಾಧ್ಯತೆ?

Team Udayavani, Jun 18, 2023, 8:00 PM IST

1-asdas-ds

ಗಂಗಾವತಿ: ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ವಾಣಿಜ್ಯ ವ್ಯವಹಾರ ನಡೆಸುತ್ತಿರುವ ರೆಸಾರ್ಟ್, ಹೋಟೆಲ್ ತೆರವು ಮಾಡಲು ಹಂಪಿ ಅಭಿವೃದ್ಧಿ ಪ್ರಾಧಿಕಾರ ಸಿದ್ಧತೆ ನಡೆಸಿದ್ದು, ಜೂ19 ಅಥವಾ 20 ರಂದು ನ್ಯಾಯಾಲಯದಲ್ಲಿ ಸ್ಟೇ ಪಡೆದವರನ್ನು ಬಿಟ್ಟು ಅನಧಿಕೃತ ರೆಸಾರ್ಟ್, ಹೋಟೆಲ್ ಗಳನ್ನು ತೆರವು ಕಾರ್ಯಚರಣೆ ಮೂಲಕ ನೆಲ ಸಮ ಮಾಡಲು ಅಗತ್ಯ ಭದ್ರತೆ ಮತ್ತು ಜೆಬಿಸಿಗಳನ್ನು ಸಿದ್ಧವಾಗಿರಿಸುವಂತೆ ಪ್ರಾಧಿಕಾರದ ಅಧಿಕಾರಿಗಳು ಹಂಪಿ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಕಂದಾಯ, ಪೊಲೀಸ್, ಅರಣ್ಯ, ಲೋಕೋಪಯೋಗಿ ಮತ್ತು ಜಿ.ಪಂ.ಇಂಜಿನಿಯರಿಂಗ್ ಇಲಾಖೆ ಮತ್ತು ಜೆಸ್ಕಾಂ ಇಲಾಖೆಯವರಿಗೆ ಈಗಾಗಲೇ ಸಭೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಂಪಿ ಭಾಗದ 13 ಗ್ರಾಮಗಳು ಆನೆಗೊಂದಿ ಭಾಗದ 15 ಗ್ರಾಮಗಳು ಬರುತ್ತಿದ್ದು ಆನೆಗೊಂದಿ ಭಾಗದಲ್ಲಿ ಪ್ರಾಧಿಕಾರದ ಪರವಾನಿಗೆ ಪಡೆದಿರುವ ನಾಲ್ಕು ರೆಸಾರ್ಟ್ ಗಳನ್ನು ಹೊರತುಪಡಿಸಿ ಕೋರ್ಟ್ ನಲ್ಲಿ ಸ್ಟೇ ಪಡೆದಿರುವ ಕೆಲವು ರೆಸಾರ್ಟ್, ಹೋಟೆಲ್ ಗಳನ್ನು ಸೀಜ್ ಮಾಡುವುದು ಹಾಗೂ ಇನ್ನುಳಿದ ರೆಸಾರ್ಟ್, ಹೊಟೇಲ್‌ಗಳ ವಿದ್ಯುತ್ ಸಂಪರ್ಕ ಕಡಿತ ಮಾಡಿ ಜೆಸಿಬಿ ಮೂಲಕ ತೆರವು ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ.

ಹಂಪಿ ವಿಶ್ವ ಪರಂಪರಾ ಪಟ್ಟಿಗೆ ಸೇರಿದ ನಂತರ ಪುರಾತನ ಸ್ಮಾರಕಗಳ ಸಂರಕ್ಷಣೆ ಮತ್ತು ನಿರ್ವಾಹಣೆಯ ಸಲುವಾಗಿ 2002-03 ರಲ್ಲಿ ಹಂಪಿ ಅಭಿವೃದ್ದಿ ಪ್ರಾಧಿಕಾರವನ್ನು ರಚನೆ ಮಾಡಿ ಇದರ ವ್ಯಾಪ್ತಿಯಲ್ಲಿ ಹಂಪಿ-ಆನೆಗೊಂದಿ ಭಾಗದ ಸುಮಾರು 29 ಗ್ರಾಮಗಳನ್ನು ಸೇರ್ಪಡೆ ಮಾಡಿ ವಲಯವಾರು ನಿಯಮಗಳನ್ನು ರೂಪಿಸಿ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ವಲಯವಾರು ನಿಯಮಗಳನ್ನು ಅನುಸರಿಸಿ ಅಭಿವೃದ್ಧಿ ಕಾರ್ಯ ಹಾಗೂ ವಾಣಿಜ್ಯ ವ್ಯವಹಾರ ಮಾಡಲು ಪ್ರಾಧಿಕಾರದ ಪರವಾನಿಗೆಯನ್ನು ಕಡ್ಡಾಯಗೊಳಿಸಲಾಯಿತು.

2017 ರಲ್ಲಿ ಹೈಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ
ಹಂಪಿ ಸುತ್ತಮುತ್ತಲು ಪ್ರಾಧಿಕಾರದ ನಿಯಮ ಉಲ್ಲಂಘಿಸಿ ಅನಧಿಕೃತ ರೆಸಾರ್ಟ್,ಹೋಟೆಲ್ ತಲೆ ಎತ್ತಿರುವ ಕುರಿತು ಕೊಟ್ಟೂರು ಸ್ವಾಮಿ ಕಲ್ಯಾಣ ಕೇಂದ್ರದ ಮಠಾಧೀಶರು ಬೆಂಗಳೂರಿನ ಹೈಕೋರ್ಟಿನಲ್ಲಿ ದಾವೆ ಹೂಡಿದ್ದರು. ಜತೆ 2017 ರಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಕೂಡ ಸಲ್ಲಿಕೆಯಾಗಿದ್ದು ಈ ಪ್ರಕರಣದ ವಿಚಾರಣೆ ಕೂಡ ಜೂ. 26 ರಂದು ನಡೆಯಲಿದೆ. ಎಚ್ಚೆತ್ತುಕೊಂಡ ಪ್ರಾಧಿಕಾರದ ಅಧಿಕಾರಿಗಳು ಸ್ಟೇ ಇರುವ ರಸಾರ್ಟ್, ಹೊಟೇಲ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸೀಜ್ ಮಾಡಿಸುತ್ತಿದ್ದಾರೆ. ಉಳಿದವನ್ನು ತೆರವು ಮಾಡಲು ನಿರ್ಧರಿಸಿದ್ದಾರೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯ ಆರೋಪ
ಎಎಸ್‌ಐ ವ್ಯಾಪ್ತಿಯಲ್ಲಿ ಆನೆಗೊಂದಿ, ವಿರೂಪಾಪೂರಗಡ್ಡಿ ಹೊರತುಪಡಿಸಿ ಸ್ಮಾರಕಗಳಿಲ್ಲದ ಉಳಿದ ಗ್ರಾಮಗಳನ್ನು ಸೇರ್ಪಡೆ ಮಾಡಲಾಗಿದ್ದು ಶಾಸಕರು, ಸಂಸದರು ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪ ಸ್ಥಳೀಯರದ್ದಾಗಿದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ಸ್ಥಳೀಯರ ಅಭಿಪ್ರಾಯ ಪಡೆದು ಮಹಾಯೋಜನೆ(ಮಾಸ್ಟರ್ ಪ್ಲಾನ್ ) ರೂಪಿಸಬೇಕೆನ್ನುವ ನಿಯಮವಿದೆ. ಪ್ರಾಧಿಕಾರ ರಚನೆಯಾದಾಗಿನಿಂದ 2011 ರಲ್ಲಿ ಸ್ಥಳೀಯರನ್ನು ನಿರ್ಲಕ್ಷ್ಯ ಮಾಡಿ ಮಾಸ್ಟರ್ ಪ್ಲಾನ್ ತಯಾರಿಸಲಾಗಿದೆ ಎಂಬ ಆರೋಪವಿದೆ. ಈ ಮಧ್ಯೆ ಅಂದಿನ ಶಾಸಕ ಪರಣ್ಣ ಮುನವಳ್ಳಿ ಒತ್ತಡದ ಪರಿಣಾಮ2021 ರಲ್ಲಿ ಸ್ಥಳೀಯರ (ಸ್ಟೇಕ್ ಹೋಲ್ರ‍್ಸ್)ಅಭಿಪ್ರಾಯ ಪಡೆದು ಮಾಸ್ಟರ್ ಪ್ಲಾನ್ ರೂಪಿಸಿ ವಲಯವಾರು ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಿ ರೈತರ ಗದ್ದೆಗಳಲ್ಲಿ ಶೇ,5 ರಷ್ಟು ಭೂಮಿಯನ್ನು ಪ್ರವಾಸೋದ್ಯಮ ಉತ್ತೇಜಿಸಲು ಅವಕಾಶ ಕಲ್ಪಿಸಲಾಗಿದೆ. ನೂತನ ನಿಯಮಗಳ ಅನುಷ್ಠಾನಕ್ಕೆ ಕಳೆದ ವರ್ಷ ರಾಜ್ಯ ಸರಕಾರ ಸ್ಥಳೀಯರಿಂದ ಗೆಜೆಟ್ ಮೂಲಕ ಆಕ್ಷೇಪ ಕರೆದಿತ್ತು. ಪ್ರಾಧಿಕಾರ ಹಂಪಿ ಪ್ರದೇಶದ ಸ್ಮಾರಕಗಳ ಸಂರಕ್ಷಣೆಯ ನೋಡೆಲ್ ಉಸ್ತುವಾರಿ ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ) ಅಭಿಪ್ರಾಯ ಪಡೆದು ರಾಜ್ಯ ಪ್ರಾಧಿಕಾರದ ವಲಯವಾರು ನಿಯಮ ಬದಲಾವಣೆ ಮಾಡಲು ನಗರಾಭಿವೃದ್ಧಿ ಇಲಾಖೆಗೆ ರವಾನಿಸಿ ವರ್ಷ ಕಳೆದರೂ ಪ್ರಾಧಿಕಾರದ ವಲಯವಾರು ನಿಯಮಗಳ ಬದಲಾವಣೆಗಳನ್ನು ಸರಕಾರ ಗೆಜೆಟ್ ಮೂಲಕ ಅನುಷ್ಠಾನ ಮಾಡದೇ ಇರುವುದಿಂದ ಸ್ಥಳೀಯರು ಅನಧಿಕೃತವಾಗಿ ವ್ಯಾಪಾರ ವಹಿವಾಟು ನಡೆಸುವಂತಾಗಿದೆ.

ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕೋರ್ ಝೋನ್‌ನಲ್ಲಿದ್ದ ಕಮಲಾಪೂರವನ್ನು ಶೇ.100 ರಿಂದ 40ಕ್ಕೆ ಇಳಿಸಿ ಆನೆಗೊಂದಿಯನ್ನು ಶೇ.40 ರಿಂದ ಶೇ.100 ರಷ್ಟು ಕೋರ್ ಝೋನ್ ಮಾಡಲಾಗಿದೆ. ಪ್ರಾಧಿಕಾರದ ವ್ಯಾಪ್ತಿಯಲ್ಲಿದ್ದ ಕಾರಿಗನೂರನ್ನು ಸಾರ್ವಜನಿಕರ ಆಕ್ಷೇಪವನ್ನು ಕರೆಯದೇ ಕೈ ಬಿಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಸರಕಾರ ಉತ್ತೇಜನ ನೀಡುತ್ತಲೇ ಸ್ಥಳೀಯರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಅಭಿಪ್ರಾಯ ವ್ಯಾಪಕವಾಗಿದೆ.

ಹಂಪಿ ಅಭಿವೃದ್ಧಿ ಪ್ರಾಧಿಕಾರದ ಸೂಚನೆಯಂತೆ ಅನಧಿಕೃತ ರೆಸಾರ್ಟ್ ಗಳು ಹಾಗೂ ವಾಣಿಜ್ಯ ಕಟ್ಟಡಗಳನ್ನು ಶೀಘ್ರವೇ ತೆರವುಗೊಳಿಸಲಾಗುತ್ತದೆ. ಮಾನ್ಯ ಆಯುಕ್ತರ ಸೂಚನೆಯಂತೆ ತಾಲೂಕು ಆಡಳಿತ ಜೆಸಿಬಿ , ಅಗತ್ಯ ಪೊಲೀಸ್ ಭದ್ರತೆ, ಕಂದಾಯ, ಜೆಸ್ಕಾಂ, ಅರಣ್ಯ ಇಲಾಖೆ ಸಂಬಂಧ ಪಟ್ಟ ಗ್ರಾ.ಪಂ. ಅಧಿಕಾರಿಗಳ ಜತೆ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜೂ.19 ರಂದು ಗಂಗಾವತಿ ತಾಲೂಕು ಗ್ರಾ.ಪಂ.ಅಧ್ಯಕ್ಷ-ಉಪಾಧ್ಯಕ್ಷರ ಮೀಸಲು ಆಯ್ಕೆಯ ಸಭೆ ನಂತರ ಯಾವಾಗಬೇಕಾದರೂ ತೆರವು ಕಾರ್ಯಾಚರಣೆ ನಡೆಯಬಹುದಾಗಿದೆ.
-ಮಂಜುನಾಥ ಸ್ವಾಮಿ ಹಿರೇಮಠ ತಹಶೀಲ್ದಾರ್

-ಕೆ.ನಿಂಗಜ್ಜ

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.