ಯಲ್ಲಾಲಿಂಗ ಪ್ರಕರಣ ಸಿಬಿಐಗೆ ವಹಿಸಿ
•2005, ಜ. 11ರಂದು ಅನುಮಾನಾಸ್ಪದ ಸಾವು•ಸದ್ಯ ಸಿಐಡಿಯಿಂದ ತನಿಖೆ
Team Udayavani, Sep 15, 2019, 11:48 AM IST
ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಕನಕಾಪೂರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಯಲ್ಲಾಲಿಂಗನ ತಾಯಿ ಕೆಂಚಮ್ಮಾ ಅಗಸಿಮಂದಿನ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಕೊಪ್ಪಳದ ರೈಲ್ವೆ ಸ್ಟೇಷನ್ ಸಮೀಪ 2005, ಜ. 11ರಂದು ಯಲ್ಲಾಲಿಂಗ ದೇಹ ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಉದ್ದೇಶ ಪೂರ್ವಕ ಕೊಲೆ ಮಾಡಿರುವುದಾಗಿ ಆರೋಪಿಸಿ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆಗ ತಾವು ನಮ್ಮ ಮನೆಗೆ ಭೇಟಿ ನೀಡಿ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ತನಿಖೆಗೆ ಒತ್ತಾಯಿಸಿದ್ದೀರಿ. ಈ ಹಿನ್ನೆಲೆಯಲ್ಲಿ ಅಂದಿನ ಸರ್ಕಾರವನ್ನು ಪ್ರಕರಣ ಸಿಐಡಿಗೆ ವಹಿಸಿತ್ತು. ಪ್ರಕರಣದಲ್ಲಿ ಒಂಬತ್ತು ಆರೋಪಿಗಳನ್ನು ಸಿಐಡಿ ತಂಡ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅದರಲ್ಲಿ ಮೊದಲ ಆರೋಪಿ ಹನುಮೇಶ್ ನಾಯಕ್ ಜಾಮೀನು ಪಡೆದು ಹೊರ ಬಂದಿದ್ದು, ನಮ್ಮ ಕುಟುಂಬ ಮೇಲೆ ಮತ್ತೆ ದೌರ್ಜನ್ಯ ಎಸಗುತ್ತಿದ್ದಾನೆ. ಅವರ ಸಹೋದರ ರಮೇಶ ನಾಯಕ್ ಎಲ್ಲ ಸಾಕ್ಷಿಗಳಿಗೆ ಹಣದ ಆಮಿಷ ತೋರಿಸಿ, ಹೆದರಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಸಿದ್ದಾರೆ. ಇದರಿಂದ ನಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತಿಲ್ಲವೆಂದು ತಾಯಿ ಕೆಂಚಮ್ಮ ಸಿಎಂ ಮುಂದೆ ಅಳಲು ತೋಡಿಕೊಂಡಿದ್ದಾಳೆ.
ರಮೇಶ ಮಾನಪ್ಪ ನಾಯಕ್ ಅಂದಿನ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರ ಪ್ರಭಾವ ಬಳಸಿ ಪ್ರಕರಣದಿಂದ ಹೆಸರು ತೆಗೆಸಲಾಗಿದೆ. ಉಳಿದವರು ಬೇಲ್ ಪಡೆದು ಹೊರ ಬಂದಿದ್ದಾರೆ. ಕೂಡಲೇ ಈತನನ್ನು ವಿಚಾರಣೆ ಮಾಡಬೇಕು. ಇದರಲ್ಲಿ ಈತನ ಪಾತ್ರವೂ ಇದೆ ಎಂದು ಆರೋಪಿಸಿದ ಅವರು, ಈ ಪ್ರಕರಣ ನಡೆದು ಐದು ವರ್ಷ ಗತಿಸಿದ್ದು, ಸರ್ಕಾರ ಯಾವುದೇ ಪರಿಹಾರ ಕೊಟ್ಟಿಲ್ಲ. ಹೀಗಾಗಿ ನಮ್ಮ ಕುಟುಂಬ ಬೀದಿ ಪಾಲಾಗಿದ್ದು, ಸರ್ಕಾರವು ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.