Hanumasagara: ಮೀಸಲಾತಿ ಹೋರಾಟ ಚುರುಕು: ಕೂಡಲಸಂಗಮ ಶ್ರೀ
ಶಾಸಕರು ಪಕ್ಷಾತೀತವಾಗಿ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ತಿಳಿಸಲಾಗಿದೆ
Team Udayavani, Nov 16, 2023, 6:09 PM IST
ಹನುಮಸಾಗರ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೆದ್ದಾರಿ ಬಂದ್ ಮಾಡಿ ಲಿಂಗಪೂಜೆ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಾಗುವುದು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಕೂಡಲಸಂಗಮ ಗುರುಪೀಠದ ಶ್ರೀಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಚಳವಳಿಯ ಆರನೇ ಹಂತದ ಹೋರಾಟ ಪ್ರಾರಂಭಿಸಬೇಕಾಗಿದೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಮತ್ತು ಲಿಂಗಾಯತ ಸಮಾಜದ ಒಳಪಂಗಡಗಳಿಗೆ ಒಬಿಸಿ ಮೀಸಲಾತಿ ನೀಡಲು ರಾಜ್ಯ ಸರಕಾರ ಕ್ರಮ ಕೈಕೊಳ್ಳಬೇಕೆಂದು ಮತ್ತೂಮ್ಮೆ ಹೋರಾಟ ಶುರು ಮಾಡಲಾಗಿದೆ.
ಹಿಂದಿನ ಬಿಜೆಪಿ ಸರಕಾರದವರು ಕೊನೆ ಗಳಿಗೆಯಲ್ಲಿ ಪ್ರಧಾನಿ ಮೋದಿ ಅವರ ಮಧ್ಯಸ್ಥಿಕೆಯಲ್ಲಿ 2ಡಿ ಎಂದು ಮೀಸಲಾತಿ ಘೋಷಣೆ ಮಾಡಿತ್ತು. ಅದನ್ನು ಸ್ವಾಗತ ಮಾಡಿ ಅಲ್ಪ ತೃಪ್ತರಾಗಿದ್ದೇವೆ. ಆದರೆ ಇಲ್ಲಿಯವರೆಗೂ 2ಡಿ ಅನುಷ್ಠಾನಕ್ಕೆ ಬರಲಿಲ್ಲ. ಆದ್ದರಿಂದ ನಮ್ಮ ಸಮುದಾಯದ ಎಲ್ಲ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು 2ಎ ಗೆ ಸೇರಿಸಲು ಹಕ್ಕು ಮಂಡಿಸಬೇಕೆಂದು ಒತ್ತಾಯ ಮಾಡಿದ್ದೇವೆ.
ಮುಖ್ಯಮಂತ್ರಿಗಳು ಬಜೆಟ್ ಅಧಿವೇಶನದ ನಂತರ ಕ್ರಮ ಕೈಕೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಬಜೆಟ್ ಅಧಿವೇಶನ ಮುಗಿದು ನಾಲ್ಕು ತಿಂಗಳಾದರೂ ಆ ಬಗ್ಗೆ ಗಮನಹರಿಸದೇ ಇರುವುದರಿಂದ ಹೋರಾಟ ಚುರುಕುಗೊಳಿಸಲು ನಿರ್ಧರಿಸಿದ್ದೇವೆ ಎಂದರು.
ಸರಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ. ಡಿ. 4ರಿಂದ ಪ್ರಾರಂಭವಾಗಲಿರುವ ಅಧಿವೇಶನಕ್ಕೂ ಮುಂಚೆಯೇ ಇದಕ್ಕೆ ಸಂಬಂಧಪಟ್ಟಂತೆ ಸಮಾಜದ ಶಾಸಕರ ಸಭೆ ಕರೆದು ಕಾನೂನು ಅಡೆತಡೆಗಳನ್ನು ನಿವಾರಿಸಿ ಮೀಸಲಾತಿ ನೀಡುವಂತೆ ಒತ್ತಾಯಿಸಲು ತಿಳಿಸಲಾಗುವುದು. ಇಲ್ಲದಿದ್ದಲ್ಲಿ ಸುವರ್ಣ ವಿಧಾನಸೌಧದ ಅಂಗಳದಲ್ಲಿಯೂ ಪ್ರತಿಭಟನೆ, ಹೋರಾಟ ನಡೆಸಲಾಗುವುದು ಎಂದರು.
ಲೋಕಸಭೆ ಚುನಾವಣೆಯೊಳಗೆ ಸರಕಾರ ಮೀಸಲಾತಿ ನೀಡಿದರೆ ತಮ್ಮ ಪಕ್ಷಕ್ಕೇ ಒಳ್ಳೆಯದು. ಇಲ್ಲದಿದ್ದರೆ ನಮ್ಮ ಜನಾಂಗದವರು
ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. ನಮ್ಮ ಜನಾಂಗದ ಎಲ್ಲ ಶಾಸಕರು, ಮುಖಂಡರು, ಸಚಿವರು, ಮಾಜಿ ಶಾಸಕರು, ಸಚಿವರು ಪಕ್ಷ ಬೇಧ ಮರೆತು ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಇದರಲ್ಲಿ ಯಾವುದೇ ಮನಸ್ತಾಪಗಳಿಲ್ಲ. ನಮ್ಮ ಸಮಾಜದ ಎಲ್ಲ ಶಾಸಕರು ಪಕ್ಷಾತೀತವಾಗಿ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಮುಖಂಡರಾದ ಮಹಾಂತೇಶ ಅಗಸಿಮುಂದಿನ, ಬಸವರಾಜ ಹಳ್ಳೂರ, ದೇವೇಂದ್ರಪ್ಪ ಬಳೂಟಗಿ, ವೀರೇಶ ಯರಿಗೋನಾಳ, ಶೇಖಪ್ಪ ದೋಟಿಹಾಳ, ವಿಶ್ವನಾಥ ಕನ್ನೂರ, ಕರಿಸಿದ್ದಪ್ಪ ಕುಷ್ಟಗಿ, ಕರಿಸಿದ್ದಪ್ಪ ಅಗಸಿಮುಂದಿನ, ಜಿಪಂ ಮಾಜಿ ಸದಸ್ಯ ಭೀಮಣ್ಣ ಅಗಸಿಮುಂದಿನ, ಚಂದಪ್ಪ ಅಗಸಿಮುಂದಿನ, ಮಹಾಂತಯ್ಯ ಕೋಮಾರಿ, ವೀರಣ್ಣ ಹುನಗುಂಡಿ, ಉಮೇಶ ಬಾಚಲಾಪುರ, ಕರಿಸಿದ್ಧಪ್ಪ ನಿಡಗುಂದಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.