ಮೇಲ್ದರ್ಜೆಗೇರದ ಹನುಮಸಾಗರ ಗ್ರಾಮ ಪಂಚಾಯತ್
Team Udayavani, Mar 6, 2020, 4:37 PM IST
ಹನುಮಸಾಗರ: ಜಿಲ್ಲೆಯಲ್ಲೇ ಅತ್ಯಂತ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆ ಹೊಂದಿರುವ ಹನುಮಸಾಗರ ಪಟ್ಟಣವನ್ನು ಈ ಬಾರಿ ಬಜೆಟ್‌ನಲ್ಲಿ ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡುತ್ತಾರೆ ಎಂಬ ಮಹದಾಸೆಗೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತಣ್ಣೀರೆರಚಿದೆ.
ಹನುಮಸಾಗರ ತಾಲೂಕು ಹೋರಾಟ ಸಮಿತಿ 5 ವರ್ಷಗಳಿಂದ ಹನುಮಸಾಗರವನ್ನು ತಾಲೂಕನ್ನಾಗಿ ಮಾಡಬೇಕೆಂದು ಹೋರಾಟ ನಡೆಸುತ್ತಿದೆ. ಈ ಬಾರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬಹುದು ಎನ್ನುವ ಸಾರ್ವಜನಿಕರ ನಿರೀಕ್ಷೆ ಹುಸಿಯಾಗಿದೆ. ಮಾಜಿ ಶಾಸಕರು ಹಾಗೂ ತಾಲೂಕು ಹೋರಾಟ ಸಮಿತಿ ಸದಸ್ಯರು ಹಲವು ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೂ ಬಜೆಟ್‌ನಲ್ಲಿ ಬೇಡಿಕೆ ಈಡೇರದ ಕಾರಣ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
ಮೇಲ್ದರ್ಜೆಗೇರದ ಗ್ರಾಪಂ: ಜಿಲ್ಲೆಯಲ್ಲೇ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆ ಹೊಂದಿದ ಹನುಮಸಾಗರ ಗ್ರಾಪಂ 25 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಗ್ರಾಮದಲ್ಲಿ 14 ವಾರ್ಡ್‌ಗಳಿಂದ 38 ಜನ ಸದಸ್ಯರಿದ್ದಾರೆ. 15 ಸಾವಿರ ಜನಸಂಖ್ಯೆ ಹೊಂದಿದ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ನಿಯಮವಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಲ್ಲಿಯವರೆಗೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಲ್ಲ.
ಹನುಮಸಾಗರವನ್ನು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸುವುದು ಬಜೆಟ್ ಸಂಬಂದವಿಲ್ಲ. ಈಗಲೂ ಸಹ ಮುಖ್ಯಮಂತ್ರಿಯವರು ಮನಸ್ಸು ಮಾಡಿದರೆ ಮೇಲ್ದರ್ಜೆಗೆ ಏರಿಸಲು ಅವಕಾಶವಿದೆ. ನಾವು ಸಹ ಪಪಂ ಆಗಿ ಮೇಲ್ದರ್ಜೆಗೇರಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಆಗ ಆದರೂ ಆಗಬಹುದು, ಆದರೆ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದಿಲ್ಲ. ತಾಲೂಕು ಹೋರಾಟ ಸಮಿತಿಯವರಿಗೆ ಬರಲು ಹೇಳಿದ್ದೇವೆ. –ಅಮರೇಗೌಡ ಬಯ್ನಾಪೂರ, ಶಾಸಕ
ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿಸುವ ಕುರಿತಂತೆ ಈಗಾಗಲೇ ಶಾಸಕರ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಬಜೆಟ್‌ನಲ್ಲಿ ಹನುಮಸಾಗರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದಿರುವುದು ಜನಪ್ರತಿನಿಧಿ ಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ. –ಶ್ರೀನಿವಾಸ ಜಹಗೀರದಾರ, ತಾಲೂಕು ಹೋರಾಟ ಸಮಿತಿ ಅಧ್ಯಕ್ಷ
ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದ್ದರೆ ಹನುಮಸಾಗರವನ್ನು ತಾಲೂಕನ್ನಾಗಿ ಘೋಷಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ತಾಲೂಕು ಘೋಷಣೆಗೆ ಬೇಕಾದ ಎಲ್ಲ ಅರ್ಹತೆಗಳು ಇದ್ದರೂ ತಾಲೂಕನ್ನಾಗಿ ಘೋಷಣೆ ಮಾಡದಿರುವುದು ನಿಜಕ್ಕೂ ದುರ್ದೈವದ ಸಂಗತಿ ಮತ್ತು ಜನಪ್ರತಿನಿಧಿ ಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಬಸವರಾಜ ಹಳ್ಳೂರ, ಬಿಜೆಪಿ ತಾಲೂಕು ಅಧ್ಯಕ್ಷ
-ವಸಂತಕುಮಾರ ವಿ ಸಿನ್ನೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.