ಲಾಕ್‌ಡೌನ್ ಪಾಲಿಸಲು ಡಿಸಿಎಂ ಸವದಿ ಸಲಹೆ
Team Udayavani, Apr 8, 2020, 2:46 PM IST
ಕುಷ್ಟಗಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕುಷ್ಟಗಿ ನಿರಾಶ್ರಿತರ ಕೇಂದ್ರದಲ್ಲಿ ಆಹಾರ ಗುಣಮಟ್ಟ ಪರಿಶೀಲಿಸಿದರು.
ಕುಷ್ಟಗಿ: ಎಲ್ಲಿಯವರೆಗೆ ಲಾಕ್‌ಡೌನ್ ಆಗುವುದಿಲ್ಲವೋ ಅಲ್ಲಿಯವರೆಗೂ ಕೊರೊನಾ ವೈರಸ್ ತಡೆಯುವುದು ಕಷ್ಟ. ಹೀಗಾಗಿ ಜನತೆ ಸ್ವಯಂ ಪ್ರೇರಿತರಾಗಿ ಕಟ್ಟುನಿಟ್ಟಿನಿಂದ ಲಾಕ್‌ಡೌನ್ ಪಾಲಿಸಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಉತ್ತರ ಭಾರತದ ಕಾರ್ಮಿಕರಿಗೆ ವಸತಿ ಕಲ್ಪಿಸಿರುವ ಎಸ್‌ಸಿ ಮೆಟ್ರಿಕ್ ಪೂರ್ವ ವಸತಿ ನಿಲಯಕ್ಕೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್‌ಡೌನ್‌ನಿಂದ ಜನರಿಗೆ ತೊಂದರೆಯಾಗುತ್ತಿದೆ ನಿಜ, ಆದರೆ ಏ.14ರವರೆಗೆ ಲಾಕ್‌ಡೌನ್ ಡೆಡ್‌ಲೈನ್ ನೀಡಲಾಗಿತ್ತು. ನಮ್ಮ ದೇಶ ಹಾಗೂ ರಾಜ್ಯದಲ್ಲಿ ವೈರಸ್ ಅವನತಿ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ಮುಂದುವರಿಸುವ ಸಂದರ್ಭ ಬಂದರೂ ಬರಬಹುದು ಎಂದರು.
ರಾಷ್ಟ್ರಮಟ್ಟದ ತನಿಖೆ: ದೆಹಲಿಯ ನಿಜಾಮುದ್ದೀನ್ ಧರ್ಮಸಭೆಯಲ್ಲಿ ಭಾಗವಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದ ತನಿಖೆ ನಡೆಸುವ ಆಲೋಚನೆ ಇದ್ದು, ಇದರ ಬಗ್ಗೆ ಉನ್ನತ ತನಿಖೆಯಾಗುವ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚಿಂತನೆ ನಡೆದಿದೆ. ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರು, ಕೊರೊನಾ ತಪಾಸಣೆಗೆ ಹಿಂದೇಟು ಹಾಕುತ್ತಿರುವ ಬಗ್ಗೆ ನಿಖರವಾಗಿ ಹೇಳಲು ಅಸಾಧ್ಯವಾಗಿದೆ. ಜಮಾತ್‌ಗೆ ಹೋಗಿರುವವರು ಅಲ್ಲಿನ ಮೊಬೈಲ್ ಟಾವರ್ ಆಧರಿಸಿ, ಪತ್ತೆ ಹಚ್ಚಿ ಅವರನ್ನು ತಪಾಸಣೆಗೊಳಿಸುವ ಪ್ರಕ್ರಿಯೆ ರಾಜ್ಯಾದ್ಯಂತ ನಡೆದಿದೆ. ಈ ವಿಚಾರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ವೈಯಕ್ತಿಕ ಎಂದರು. ಅಭಿನಂದನಾರ್ಹರು: ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ, ಪೊಲೀಸರು ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ಉಳಿಸಲು ಶ್ರಮಿಸುತ್ತಿದ್ದಾರೆ. ಅವರಿಗೆ ಎಷ್ಟು ಅಭಿನಂದನೆ ಹೇಳಿದರೂ ಕಡಿಮೆಯೇ ಎಂದರು.
ಸುದೈವ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಪ್ರಕರಣವಿಲ್ಲ ಎನ್ನುವುದು ಜಿಲ್ಲೆಯ ಸುದೈವ. ಕೊಪ್ಪಳ, ವಿಜಯಪುರದಲ್ಲಿ ಒಂದೂ ಪ್ರಕರಣಗಳು ಕಂಡು ಬಂದಿಲ್ಲ.
ಕೊರೊನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಪ್ರಮುಖವಾಗಿದೆ ಎಂದರು. ಇದಕ್ಕೂ ಮುನ್ನ ನಿರಾಶ್ರಿತರು ತಮ್ಮನ್ನು ಇಲ್ಲಿಂದ ಬಿಡುಗಡೆಗೊಳಿಸಿ ಎಂದಿದ್ದಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಏ. 14ರವರೆಗೆ ಇಲ್ಲೆ ಆರಾಮವಾಗಿರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
MUST WATCH
ಹೊಸ ಸೇರ್ಪಡೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.