ಜುಮಲಾಪೂರ ಸುತ್ತಮುತ್ತ ಭಾರಿ ಮಳೆ
•ಮಂದಹಾಸ ತಂದ ವರುಣ•ತುಂಬಿ ಹರಿದ ಹಳ್ಳ-ಕೊಳ್ಳ•ಹಳ್ಳದಲ್ಲಿ ಕೊಚ್ಚಿ ಹೋಗಿ ಹಸು ಸಾವು
Team Udayavani, Jun 24, 2019, 10:27 AM IST
ದೋಟಿಹಾಳ: ಜುಮಲಾಪುರ ಗ್ರಾಮ ರವಿವಾರ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದೆ.
ದೋಟಿಹಾಳ: ಜುಮಲಾಪೂರ ಗ್ರಾಮದ ಸುತ್ತಮುತ್ತ ರವಿವಾರ ಮಳೆ ಉತ್ತಮವಾಗಿದ್ದು, ರೈತರ ಸಂತಸವನ್ನು ಇಮ್ಮಡಿಗೊಳಿಸಿದೆ. ಬೀತನೆ ಮಾಡಿದ ರೈತರು ಈ ಮಳೆ ಸುರಿದ ಕಾರಣ ಹರ್ಷಗೊಂಡಿದ್ದಾರೆ. ಮಳೆಯಿಂದ ಗ್ರಾಮದ ಪಕ್ಕದಲ್ಲಿರುವ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಮಳೆಯಿಂದ ಕೆಲವು ಕಡೆಗಳಲ್ಲಿ ಆರ್ಭಟಿಸಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದರು. ಜುಮಲಾಪೂರ ಗ್ರಾಮದ ಅಂಬಣ್ಣ ದಂಡಿನ ಎನ್ನುವವರ ಆಕಳು ಹಳ್ಳದಲ್ಲಿ ಕೊಚ್ಚಿಕೊಂಡು ಹೊಗಿ ಮೃತಪಟ್ಟಿದೆ. ಆಕಳನ್ನು ರಕ್ಷಿಸಲು ಗ್ರಾಮದ ಯುವಕರ ಪ್ರಯತ್ನ ಪಟ್ಟರೂ ಪ್ರಯೋಜನವಾಗಲಿಲ್ಲ.
ಜುಮಲಾಪೂರ ಗ್ರಾಮದ ಸುತ್ತ ಹಳ್ಳ ಇದೆ. ಗ್ರಾಮದಲ್ಲಿ ಹಳ್ಳಗಳಿಗೆ ಸೂಕ್ತ ಮೇಲ್ಸೆತುವೆ ಹಾಗೂ ಸಾರ್ವಜನಿಕರು ಸುಗಮ ಸಂಚಾರಕ್ಕೆ ರಸ್ತೆಗಳಿಲ್ಲ. ಹೀಗಾಗಿ ಇಲ್ಲಿಯ ಜನರು ಮಳೆಯ ಆರ್ಭಟದಿಂದ ಕೆಲವು ಗಂಟೆಗಳ ಕಾಲ ಜಲ ದಿಗ್ಬಂಧನ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಮೇಲ್ಸೆತುವೆ ಹಾಗೂ ಉತ್ತಮ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಹಲವು ಭಾರಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲಿಸಿದ್ದು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ಬಂದಾಗ ಗ್ರಾಮಕ್ಕೆ ಆಗಮಿಸುವ ಮಹಿಳೆಯರು ಮತ್ತು ವೃದ್ಧರ ಪಾಡು ಹೇಳತೀರದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.