ಕನ್ನಡದ ಚಟುವಟಿಕೆಗೆ ನೆರವು ನೀಡಿ
Team Udayavani, May 15, 2020, 4:57 AM IST
ಕೊಪ್ಪಳ: ಸರಕಾರವು ಕನ್ನಡದ ಚಟುವಟಿಕೆಗೆ ಹಣಕಾಸಿನ ನೆರವು ನೀಡಬೇಕು ಎಂದು ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದಲ್ಲಿ ಎಡಿಸಿ ಮಾರುತಿ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಸರಕಾರದ ಒಂದು ಸ್ವಾಯತ್ತ ಸಂಸ್ಥೆಯಾಗಿ ಶಾಸನಬದ್ಧ ಅಧಿಕಾರ ಹೊಂದಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಯಿಂದಾಗಿ ಕನ್ನಡ ಚಟುವಟಿಕೆಗಳನ್ನು ನಿಲ್ಲಿಸುವ ಹಂತಕ್ಕೆ ಬಂದಿದೆ. ಸರಕಾರ ನೀಡುವ ಅಲ್ಪ ಹಣದಲ್ಲಿಯೇ ವಾರ್ಷಿಕ ಚಟುವಟಿಕೆಗಳನ್ನು ನಡೆಸಿಕೊಂಡು ಗಡಿನಾಡು, ಹೊರನಾಡು, ಒಳನಾಡಿನಲ್ಲಿ ಕನ್ನಡ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಹಿಂದಿನಿಂದಲೂ ಮಾಡುತ್ತಲಿದೆ. ಪ್ರಾಧಿಕಾರದ ಹಿಂದಿನ ಅಧ್ಯಕ್ಷರು ಕನ್ನಡದ ಅಭಿವೃದ್ಧಿಗಾಗಿ ಕೊಟ್ಟ ಎಷ್ಟೋ ವರದಿಗಳು ವಿಧಾನಸೌಧದ ಮೂಲೆಯಲ್ಲಿ ಧೂಳು ತಿನ್ನುತ್ತಿವೆ. ಕಡ್ಡಾಯ ಕನ್ನಡ ಅನುಷ್ಠಾನ ಗಡಿನಾಡ ಕನ್ನಡಿಗರ ಸ್ಥಿತಿ ಗತಿ ಕನ್ನಡ ಮಾಧ್ಯಮ ಶಾಲೆಗಳ ಸುಧಾರಣೆ ಕನ್ನಡ ಭಾಷೆಯ ಸಾಂಸ್ಕೃತಿಕ ತಾಯಿ ಬೇರು ಗಟ್ಟಿಗೊಳಿಸುವ ಸಲಹೆಗಳು ಸೇರಿದಂತೆ ಎಲ್ಲವೂ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೊಳೆಯುತ್ತಾ ಬಿದ್ದಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಕೋವಿಡ್ ಸಂಕಷ್ಟದ ನೆಪದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ನೀಡುವಲ್ಲಿ ಸರಕಾರ ಯಾವುದೇ ಕಾರಣ ನೀಡಬಾರದು, ಪ್ರಾಧಿಕಾರದ ಕ್ರಿಯಾ ಯೋಜನೆಗಳಿಗೆ ಅಗತ್ಯವಿರುವ ಐದು ಕೋಟಿ ರೂ. ತಕ್ಷಣ ಬಿಡುಗಡೆ ಮಾಡಿ ಕನ್ನಡ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಸಂಚಾಲಕ ವಿಜಯಕುಮಾರ ಕವಲೂರು, ಮರಿಯಪ್ಪ ಮಂಗಳೂರು, ಡಿ. ಚೇತನ ಕುಮಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.