ಕೋವಿಡ್ ವಾರಿಯರ್ಸ್‌ಗೆ ನೆರವಾಗಿ
Team Udayavani, Aug 11, 2020, 10:06 AM IST
ಸಾಂದರ್ಭಿಕ ಚಿತ್ರ
ಕಾರಟಗಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಭಾರತ ವಿದ್ಯಾರ್ಥಿ ಫೆಡರೇಷನ್, ಅಖೀಲ ಭಾರತ ಕೃಷಿ ಫೆಡರೇಷನ್ ಸಂಘಟನೆ ಸದಸ್ಯರು ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ವಿವಿಧ ಸಂಘಟನೆಗಳ ಪ್ರಮುಖರು ಮಾತನಾಡಿ, ಕೋವಿಡ್-19 ಪಿಡುಗು ದೇಶದಲ್ಲಿನ ಹಲವಾರು ರೈತರು, ಕೃಷಿಕೂಲಿಕಾರ್ಮಿಕರು ಸೇರಿದಂತೆ ಎಲ್ಲ ವ್ಯಾಪಾರ ಉದ್ಯೋಗದ ಮೇಲು ಬಿರುಗಾಳಿ ಬೀಸಿದಂತಾಗಿ ಜನಜೀವನ ದುಸ್ತರಗೊಳಿಸಿದೆ. ಅಲ್ಲದೆ ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಠಿಣ ಲಾಕ್‌ಡೌನ್ ಹೇರಿದ್ದರಿಂದ ದುಡಿಯುವ ಜನರನ್ನು ಕೂಡ ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಿಸಿದೆ. ಇದರಿಂದಾಗಿ ದೇಶದ ವಿವಿಧ ಕೆಲಸ ಕಾರ್ಯ ನಿರ್ವಹಿಸುವ ಕೂಲಿಕಾರರು, ಕಾರ್ಮಿಕರು, ಹಲವಾರು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸರಕಾರ ಕೂಡ ಜನತೆ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿಲ್ಲ. ಕೂಲಿಕಾರ ಕುಟುಂಬಗಳಿಗೆ, ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿಯೂ ನೀರ್ಲಕ್ಷ್ಯ ತೋರಿದೆ.
ಅಲ್ಲದೆ ಹಲವಾರಿ ರೀತಿಯ ಕಾನೂನು ಬದಲಾವಣೆ ಮಾಡುವ ಮೂಲಕ ತಿದ್ದುಪಡಿ ಜಾರಿಗೆ ತಂದು ತೀವ್ರ ಸಂಕಷ್ಟಕ್ಕೆ ದೂಡಿದೆ. ಆ. 10ರಂದು ಚಾರಿತ್ರಿಕ ಕ್ವಿಟ್ ಇಂಡಿಯಾ ದಿನಾಚರಣೆ ಸಂಸ್ಮರಣೆ ಅಂಗವಾಗಿ ಆ. 10ರಂದು ಭಾರತ ರಕ್ಷಿಸಿ ಎಂಬ ಘೋಷಣೆಯೊಂದಿಗೆ ಬೇಡಿಕೆಗಳಿಗೆ ಒತ್ತಾಯಿಸಿ ಹೋರಾಟ ನಡೆಸಿದ್ದೇವೆ. ನಮ್ಮ ಹೋರಾಟ ಬೇಡಿಕೆಗಳ ಬಗ್ಗೆ ಕೇಂದ್ರ ಸರಕಾರ ಪಾರ್ಲಿಮೆಂಟ್ ಅಧಿವೇಶನ ಹಾಗೂ ರಾಜ್ಯ ಸರಕಾರ ವಿಧಾನಸಭೆ ಅಧಿವೇಶನ ಕರೆದು ಚರ್ಚಿಸಿ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿ ಶಿರಸ್ತೇದಾರ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಗಳ ಪ್ರಮುಖರು, ಕೂಲಿಕಾರ ಸಂಘದ ಅಧ್ಯಕ್ಷ ಹನುಮಂತಪ್ಪ, ಸಿಐಟಿಯು ಅಧ್ಯಕ್ಷೆ ಅಮರಮ್ಮ, ಅಂಗನವಾಡಿ ಶಿಕ್ಷಕಿಯರಾದ ಗಂಗಮ್ಮ, ಲಕ್ಷ್ಮೀ ಸಜ್ಜನ, ಸುರೇಖಾ, ದುರ್ಗಾಬಾಯಿ, ಕಾಸೀಮ್ ಸಾಬ್, ಹೇಮಣ್ಣ, ಯಲ್ಲಪ್ಪ, ಶರಣಮ್ಮ, ಭಾಗ್ಯಲಕ್ಷ್ಮೀ, ಕನಕರಾಯ, ಹುಲಿಗೆಮ್ಮ, ತಾಯಮ್ಮ, ಜ್ಯೋತಿ, ಶೋಭಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.