ಧರ್ಮದ ದೇಶ; ಬಿಜೆಪಿಯವರು ಹಿಂದೂ ದೇಶ ಮಾಡಲು ಹೇಗೆ ಸಾಧ್ಯ, ಸಚಿವ ತಂಗಡಗಿ ಪ್ರಶ್ನೆ?
ಭಾರತವನ್ನಾಳಿದ ಕ್ರೈಸ್ತ, ಮುಸ್ಲಿಂ ಅರಸರಿಗೆ ಅವರವರ ಧರ್ಮದ ದೇಶ ಮಾಡಲು ಆಗಿಲ್ಲ
Team Udayavani, Dec 19, 2023, 3:04 PM IST
ಗಂಗಾವತಿ: ಸಾವಿರಾರು ವರ್ಷ ಭಾರತವನ್ನು ಆಳಿದ ಮುಸ್ಲಿಂ ಹಾಗೂ ಕ್ರೈಸರಿಗೆ ಅವರವರ ಧರ್ಮದ ದೇಶ ಮಾಡಲು ಸಾಧ್ಯವಾಗಿಲ್ಲ. ಹಲವು ಸಂಸ್ಕೃತಿ, ಜಾತಿ, ಭಾಷೆ, ಪ್ರಾಂತ್ಯವುಳ್ಳ ಭಾರತವನ್ನು ಬಿಜೆಪಿಯವರು ಹಿಂದೂ ರಾಷ್ಟ್ರ ಮಾಡುವ ಯತ್ನ ಕಾರ್ಯ ಸಾಧ್ಯವಲ್ಲ ಎಂದು ಕನ್ನಡ ಸಂಸ್ಕೃತಿ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ತಿಳಿಸಿದರು.
ಅವರು ಕಿಷ್ಕಿಂಧಾ ಅಂಜನಾದ್ರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಿರಿಯರ ತ್ಯಾಗ ಬಲಿದಾನದಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ವಿಶ್ವದಲ್ಲಿ ಶ್ರೇಷ್ಠ ಸಂವಿಧಾನದ ಮೂಲಕ ಅಂಬೇಡ್ಕರ್ ದೇಶದ ವಿವಿಧತೆಯಲ್ಲಿ ಏಕತೆ ಸಾರುವ ಪ್ರಜಾಪ್ರಭುತ್ವ ವ್ಯವಸ್ಥೆ ಅನುಷ್ಠಾನ ಮಾಡಿದ್ದಾರೆ ಎಂದರು.
ಬಿಜೆಪಿಯವರು ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಹೇಳಿಕೆಯಿಂದ ಕ್ರೈಸ್ತ, ಮುಸ್ಲಿಂ, ಸಿಖ್ ಸೇರಿ ನೂರಾರು ಜಾತಿಯವರಿಗೆ ನೋವಾಗುತ್ತದೆ. ಓಟ್ ಬ್ಯಾಂಕ್ ರಾಜಕೀಯ ಮಾಡಲು ಬಿಜೆಪಿಯವರು ಹಿಂದೂ ರಾಷ್ಟ್ರದ ಜಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಭುತ್ವದ ದೇಗುಲ ಸಂಸತ್ತಿನ ಮೇಲೆ ಬಿಜೆಪಿ ಆಡಳಿತ ಅವಧಿಯಲ್ಲಿ ದಾಳಿ ನಡೆದರೂ ಪ್ರಧಾನಿ ಮೋದಿ, ಗೃಹ ಸಚಿವರು, ರಕ್ಷಣಾ ಸಚಿವರು ಪಾರ್ಲಿಮೆಂಟ್ ನಲ್ಲಿ ಮಾತನಾಡಿಲ್ಲ ಎಂದರು.
ದೇಶದೊಳಗೆ ನೂರಾರು ಕೆಜಿ ಆರ್ ಡಿ ಎಕ್ಸ್ ಪೂರೈಕೆ ಮಾಡಿದರೂ ಸೈನಿಕರು ಹುತಾತ್ಮರಾದರೂ ಪ್ರಧಾನಿ ಘಟನೆ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಹಾಗೂ ಪತ್ರಿಕಾ ಮಾಧ್ಯಮವರ ಜತೆ ಮಾತನಾಡಿಲ್ಲ. ಇಂತಹ ಬಿಜೆಪಿಯವರಿಗೆ ದೇಶ ಜನತೆಯ ಬಗ್ಗೆ ಗೌರವವಿಲ್ಲ ಎಂದು ಹೇಳಿದರು.
ಅಧಿಕಾರದ ಆಸೆಯಿಂದ ಧರ್ಮ, ಜಾತಿ, ಶ್ರೀ ರಾಮ, ಆಂಜನೇಯ ಎಂದು ಸುಳ್ಳು ಭಾಷಣ ಮಾಡುತ್ತಿದ್ದಾರೆ. ಬಿಜೆಪಿಯವರ ಕನಸು ನನಸಾಗುವುದಿಲ್ಲ. ದೇಶದ ಜನರ ಬಡತನ,ನಿರುದ್ಯೋಗ, ಮನೆ,ಶಿಕ್ಷಣ, ಆರೋಗ್ಯ, ಒಕ್ಕೂಟ ವ್ಯವಸ್ಥೆ ಮಾಡುವ ಬಗ್ಗೆ ಬಿಜೆಪಿಯವರು ಎಂದಿಗೂ ಮಾತನಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.