ಅದ್ಧೂರಿ ಕೆರೆ ಬಸವೇಶ್ವರ ರಥೋತ್ಸವ
ವಾದ್ಯಮೇಳದೊಂದಿಗೆ ಪಲ್ಲಕ್ಕಿ ಉತ್ಸವ •ಹಣ್ಣು-ಕಾಯಿ ಸಮರ್ಪಣೆ
Team Udayavani, May 8, 2019, 1:46 PM IST
ಕಾರಟಗಿ: ಪಟ್ಟಣದ ಕೆರೆ ಬಸವೇಶ್ವರ ರಥೋತ್ಸವ ಮಂಗಳವಾರ ಅದ್ಧೂರಿಯಾಗಿ ನಡೆಯಿತು.
ಕಾರಟಗಿ: ಪಟ್ಟಣದ ಕೆರೆ ಬಸವೇಶ್ವರ ರಥೋತ್ಸವ ಅಪಾರ ಭಕ್ತ ಸಮೂಹದ ಜಯಘೋಷಗಳೊಂದಿಗೆ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ಶಾಸಕ ಬಸವರಾಜ ದಢೇಸುಗೂರು ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ದೇವಸ್ಥಾನದ ಎದುರಿನ ಮುಖ್ಯ ರಸ್ತೆಯ ಮೂಲಕ ಸಾಗಿದ ರಥೋತ್ಸವ ಚಳ್ಳೂರ ಕ್ರಾಸ್‌ನ ಪಾದಗಟ್ಟೆ ತಲುಪಿ ಮರಳಿ ದೇವಸ್ಥಾನ ಬಂತು. ಬೆಳಗ್ಗೆ ದೇವಸ್ಥಾನದಲ್ಲಿ ಬಸವಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಇದಕ್ಕೂ ಮುನ್ನ ಉತ್ಸವಕ್ಕೆ ಕಳಸಧಾರಣೆ, ಧ್ವಜಾರೋಹಣ, ರಥೋತ್ಸವ ನಂದಿಕೋಲು, ತಾಷ್ಯ, 501 ರುದ್ರಾಕ್ಷಿಧಾರಣೆ ನಡೆಸಲಾಯಿತು. ಸಂಜೆ ಶರಣ ಬಸವೇಶ್ವರ ದೇವಸ್ಥಾನದಿಂದ ವಾದ್ಯ ಮೇಳದೊಂದಿಗೆ ಬಸವೇಶ್ವರರ ಪಲ್ಲಕ್ಕಿ ಉತ್ಸವದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಬೆಳಗ್ಗೆಯಿಂದಲೇ ಮಹಿಳೆಯರು, ಮಕ್ಕಳು ಸಾರ್ವಜನಿಕರು ದೇವಸ್ಥಾನಕ್ಕೆ ಬಂದು ಹಣ್ಣು-ಕಾಯಿ ನೈವೇದ್ಯ ಅರ್ಪಿಸಿದರು. ಸಂಜೆ ರಥೋತ್ಸವದಲ್ಲಿ ಪಾಲ್ಗೊಳ್ಳಲು ಪಟ್ಟಣದ ಸೇರಿದಂತೆ ವಿವಿಧ ಗ್ರಾಮಗಳ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನದ ಬಳಿ ಜಮಾವಣೆಗೊಂಡಿದ್ದರು.
ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಮರುಳ ಸಿದ್ಧಯ್ಯಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಉದ್ಯಮಿಗಳು, ವರ್ತಕರು ಸಾರ್ವಜನಿಕರು ಪ್ರಮುಖರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.