ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ ಚಟುವಟಿಕೆ

ಮಹಿಳೆಯರ, ಮಕ್ಕಳ ಹಕ್ಕುಗಳು, ಕಾನೂನುಗಳ ಕುರಿತು ಜಾಗೃತಿ ಮೂಡಿಸಿ

Team Udayavani, Jan 8, 2022, 5:34 PM IST

ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ ಚಟುವಟಿಕೆ

ಕೊಪ್ಪಳ: ಜಿಲ್ಲಾಡಳಿತ, ಜಿಪಂ, ಕಾನೂನುಗಳ ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಮಹಿಳಾ ಇಲಾಖೆ, ಯುನಿಸೆಫ್‌, ಮಕ್ಕಳ ರಕ್ಷಣಾ ಘಟಕ ಸೇರಿ ವಿವಿಧ ಸಹಯೋಗದಲ್ಲಿ ನಗರದ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಜರುಗಿತು.

ಹಿರಿಯ ಸಿವಿಲ್‌ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯು ಒಂದು ವ್ಯವಸ್ಥಿತ ಅಪರಾಧವಾಗಿದ್ದು, ಜಾಗತಿಕ ಮಟ್ಟದಲ್ಲಿ ಮಾದಕ ದ್ರವ್ಯ, ಕಳ್ಳ ಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಕಳ್ಳ ಸಾಗಾಣಿಕೆ ಬಳಿಕ ಮಾನವ ಕಳ್ಳ ಸಾಗಾಣಿಕೆಯು 3ನೇ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ.

ಭಾರತ ದೇಶವು ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಿದ್ದರೂ ಹಲವಾರು ದುರ್ಬಲ ಮಹಿಳೆಯರು ಮತ್ತು ಮಕ್ಕಳು ಮಾನವ ಕಳ್ಳ ಸಾಗಾಣಿಕೆಯ ಜಾಲದಲ್ಲಿ ಸಿಲುಕಿ ಅಮಾನವೀಯ, ಕರುಣಾಜನಕ ಪರಸ್ಥಿತಿಯಲ್ಲಿ ಇಂದು ಶೋಷಣೆಗೆ ಒಳಗಾಗುತ್ತಿದ್ದಾರೆ.

ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಾಗದೇ ಇರುವ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಟ್ಟುಕೊಂಡಿರುವ ಮಾನವ ಕಳ್ಳ ಸಾಗಾಣಿಕೆಯು ಒಂದು ದೊಡ್ಡ ಪಿಡುಗಾಗಿದೆ. ಮಾನವ ಕಳ್ಳ ಸಾಗಾಣಿಕೆಯಂಥ ಹೀನ ಕೃತ್ಯದಿಂದ ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಈ ಅನೈತಿಕ ಮಾನವ ಸಾಗಾಣಿಕೆ ತಡೆಗೆ ಪ್ರತಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್‌ ಘಟಕ, ಅಲ್ಲದೇ ಸಂತ್ರಸ್ತರ ಪುನರ್ವಸತಿಗೆ ಸರಕಾರವು ಹಲವು ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೊಳಿಸಿದೆ. ಈ ಸೌಲಭ್ಯ ಅನುಷ್ಠಾನಗೊಳಿಸುವ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಅರ್ಹರಿಗೆ ಸೌಲಭ್ಯ ತಲುಪಿಸಿ ಎಂದರು.

ಜಿಪಂ ಸಿಇಒ ಬಿ. ಫೌಜಿಯಾ ತರುನ್ನುಮ್‌ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಸಮಿತಿಯ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿರುವ ಗ್ರಾಪಂ ಮಟ್ಟದ ಮಕ್ಕಳ ಸಾಗಾಣಿಕೆ ತಡೆ ಸಮಿತಿ ಸಕ್ರಿಯಗೊಳಿಸಿ, ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಿ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕುರಿತು ವಿವಿಧ ಇಲಾಖೆಗಳು ಸಹಭಾಗಿತ್ವದಲ್ಲಿ, ಸಮನ್ವಯತೆಯಲ್ಲಿ ಕಾರ್ಯನಿರ್ವಹಿಸುವ ಅವಶ್ಯಕತೆಯಿದೆ. ಸಮುದಾಯದಲ್ಲಿ ಮತ್ತು ನಿಮ್ಮ ವ್ಯಾಪ್ತಿಯಲ್ಲಿ ಮಹಿಳೆಯರ, ಮಕ್ಕಳ ಹಕ್ಕುಗಳು, ಕಾನೂನುಗಳ ಕುರಿತು ಜಾಗೃತಿ ಮೂಡಿಸಿ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಮಾತನಾಡಿ, ಸಾಗಾಣಿಕೆಗೆ ಒಳಗಾದ ಮಹಿಳೆಯರು ಪುನರ್ವಸತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ವಾಧಾರ ಯೋಜನೆ, ಮತ್ತಿತರೆ ಯೋಜನೆಗಳು ಜಾರಿಯಲ್ಲಿವೆ. ಸಾಗಾಣಿಕೆಗೊಳಗಾದ ಮಕ್ಕಳ ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಈ ಕೇಂದ್ರಗಳಲ್ಲಿ ಆಪ್ತ
ಸಮಾಲೋಚನೆ, ಅಗತ್ಯ ವೈದ್ಯಕೀಯ ನೆರವು ಹಾಗೂ ತಾತ್ಕಾಲಿಕ ಆಶ್ರಯ ಕಲ್ಪಿಸುವುದಲ್ಲದೆ, ಉದ್ಯೋಗ ಆಧಾರಿತ ತರಬೇತಿ ನೀಡಿ, ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಯುನಿಸೆಫ್‌ನ ರಾಘವೇಂದ್ರ ಭಟ್‌, ಹರೀಶ ಜೋಗಿ ತರಬೇತಿ ನೀಡಿದರು. ಜಿಲ್ಲೆಯ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಸ್ತರಣಾಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಲೂಕು ಆರೋಗ್ಯಾಧಿಕಾರಿಗಳು, ಕಾರ್ಮಿಕ ನಿರೀಕ್ಷಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.