ಮರಂ ಮಣ್ಣು ಅಕ್ರಮ ಸಾಗಾಟ
Team Udayavani, Aug 5, 2019, 10:43 AM IST
ಕುಷ್ಟಗಿ: ತಾಲೂಕಿನ ಕೆ. ಬೋದೂರು ಗ್ರಾಮ ವ್ಯಾಪ್ತಿಯ ಪಟ್ಟಾ ಜಮೀನಿನಲ್ಲಿ ಮರಂ ಮಣ್ಣು ಅಕ್ರಮ ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಆದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಾಲೂಕಾಡಳಿತ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದೆ.
ತಾಲೂಕಿನ ವ್ಯಾಪ್ತಿಯಲ್ಲಿ ಮರಂ ಮಣ್ಣಿಗೆ ಬೇಡಿಕೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ತಾಲೂಕು ಆಡಳಿತದ ಪರವಾನಗಿ ಇಲ್ಲದೇ ರಾಜಕೀಯ ಪ್ರಭಾವ ಬಳಸಿ ಮರಂ ಮಣ್ಣನ್ನು ಸಾಗಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದು ಸವಾಲಾಗಿದೆ.
ಕುಷ್ಟಗಿ-ಇಲಕಲ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕೆ. ಬೋದೂರು ವ್ಯಾಪ್ತಿಯ ರೈತರೊಬ್ಬರ ಜಮೀನಿನಲ್ಲಿ ಮರಂ ಮಣ್ಣು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಪಟ್ಟಾ ಜಮೀನಿನಲ್ಲಿ ಮರಂ ಮಣ್ಣು ಸಾಗಿಸಲು ತಾಲೂಕಾಡಳಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪರವಾನಗಿ ಇಲ್ಲ, ಸಾಗಿಸುವಂತಿಲ್ಲ. ಆದರೆ ಈ ಪ್ರದೇಶದಲ್ಲಿ ಹಿಟಾಟಿ, ಜೆಸಿಬಿ ಟಿಪ್ಪರ್‌ಗಳು ಸದ್ದು ಮಾಡುತ್ತಿವೆ.
ನಿತ್ಯ ಮೂರ್‍ನಾಲ್ಕು ಟಿಪ್ಪರ್ ಮಣ್ಣು ಸಾಗಿಸಲಾಗುತ್ತಿದೆ. ತಾಲೂಕಾಡಳಿತ, ಪೊಲೀಸ್ ಇಲಾಖೆ ಮೌನವಹಿಸಿರುವುದು ಅಚ್ಚರಿ ಹುಟ್ಟಿಸಿದೆ. ಮರಂ ಮಣ್ಣನ್ನು ಸಾಗಿಸುವ ಟಿಪ್ಪರ್‌ಗಳಿಗೆ ನಂಬರ್ ಪ್ಲೇಟ್ ಇಲ್ಲದಿರುವುದು ಮಣ್ಣನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎನ್ನುವುದು ಪುಷ್ಟೀಕರಿಸಿದೆ. ತಾಲೂಕಿನ ವ್ಯಾಪ್ತಿಯಲ್ಲಿ ಹೆದ್ದಾರಿ ಫ್ಲೈಓವರ್, ಗದಗ-ವಾಡಿ ರೈಲು ಮಾರ್ಗದ ಕಾಮಗಾರಿಗೆ ಮರಂ ಮಣ್ಣನ್ನು ಪರವಾನಿಗಿ ಪಡೆದು ಸಾಗಿಸಲಾಗುತ್ತಿದೆ. ಆದರೆ ಈ ಪ್ರದೇಶದಲ್ಲಿ ಸದ್ಯ ಐದಾರು ಎಕರೆ ಪ್ರದೇಶದಲ್ಲಿ ಮರಂ ಮಣ್ಣು ಖಾಲಿಯಾಗಿದ್ದರೂ, ತಾಲೂಕಾಡಳಿತ ಗಮನ ಹರಿಸಿಲ್ಲ.
ಮರಂ ಮಣ್ಣು ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿಲ್ಲ. ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿ ಕಳುಹಿಸಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ಸದರಿ ಪ್ರದೇಶದಲ್ಲಿ ಮರಂ ಮಣ್ಣು ಸಾಗಾಣಿಕೆ ಸಾಗಿಸಲು ಅಧಿಕೃತ ಪರವಾನಗಿ ಪಡೆದಿಲ್ಲ. ಅಕ್ರಮವಾಗಿ ಸಾಗಿಸುತ್ತಿರುವ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗುವುದು. ಒಂದು ವೇಳೆ ಕ್ರಮ ಕೈಗೊಳ್ಳಲು ವಿಳಂಬವಾದರೆ ಕೋರ್ಟ್ ಮೂಲಕ ನೋಟಿಸ್ ಜಾರಿ ಮಾಡಲಾಗುವುದು.•ಕೆ.ಎಂ. ಗುರುಬಸವರಾಜ್, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.