Ram Mandir ಉದ್ಘಾಟನೆ;ಮನೆ ಮನೆಗೆ ತೆರಳಿ ಆಹ್ವಾನ ನೀಡುತ್ತಿರುವ ಮೋದಿ ಖ್ಯಾತಿಯ ವೆಂಕಾರೆಡ್ಡಿ
ನಿತ್ಯವೂ ಸ್ಕೂಟರ್ ನಲ್ಲಿ ಗ್ರಾಮಗಳಿಗೆ ತೆರಳಿ ರಾಮಮಂದಿರ ಉದ್ಘಾಟನೆಗೆ ರಾಮಭಕ್ತರನ್ನು ಕರೆಯುತ್ತಿರುವ ರಾಮಭಂಟ
Team Udayavani, Jan 1, 2024, 1:13 PM IST
ಗಂಗಾವತಿ: ಸಾವಿರಾರು ವರ್ಷಗಳ ದೇಶದ ಜನರ ಕನಸಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಇದೀಗ ಮುಕ್ತಾಯ ಹಂತದಲ್ಲಿದ್ದು, ಜನವರಿ 22ರಂದು ದೇವಸ್ಥಾನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ದೇಶದಾದ್ಯಂತ ಈಗಾಗಲೇ ರಾಮಮಂದಿರ ಉದ್ಘಾಟನೆಗಾಗಿ ಭಕ್ತರನ್ನು ಆಹ್ವಾನಿಸುವ ಕಾರ್ಯವನ್ನು ಶ್ರೀರಾಮ ಮಂದಿರ ಟ್ರಸ್ಟ್ ಹಾಗೂ ಹಿಂದುಪರ ಸಂಘಟನೆಗಳ ಮುಖಂಡರು, ಸಂಘ ಸಂಸ್ಥೆಯವರು ಮಾಡುತ್ತಿದ್ದಾರೆ.
ತಾಲೂಕಿನ ಹೇರೂರು ಗ್ರಾಮದ ನರೇಂದ್ರ ಮೋದಿ ಎಂದೇ ಖ್ಯಾತರಾಗಿರುವ ಬಿಜೆಪಿ ಕಾರ್ಯಕರ್ತ ವೆಂಕಾರೆಡ್ಡಿ ವಗರನಾಳ ಗಂಗಾವತಿ ಪ್ರತಿ ಗ್ರಾಮಕ್ಕೂ ತಮ್ಮ ಸ್ಕೂಟರ್ ನಲ್ಲೇ ತೆರಳಿ ರಾಮಭಕ್ತರನ್ನು ರಾಮಮಂದಿರ ಉದ್ಘಾಟನೆಗಾಗಿ ಆಹ್ವಾನಿಸುವುದರೊಂದಿಗೆ ಅಂದು ಮನೆ-ಮನೆಗಳಲ್ಲಿ ದೀಪ ಹಚ್ಚಿ ಶ್ರೀ ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರುತ್ತಿದ್ದಾರೆ.
ಅಪ್ಪಟ ಮೋದಿಭಕ್ತರಾಗಿರುವ ವೆಂಕಾರೆಡ್ಡಿ ವಗರನಾಳ, ಶ್ರೀ ರಾಮಚಂದ್ರ ದೇವರ ಭಾವಚಿತ್ರದ ಕೇಸರಿ ಧ್ವಜ ಕಟ್ಟಿಕೊಂಡು ಗ್ರಾಮಾಂತರ ಪ್ರದೇಶದಲ್ಲಿ ಸುತ್ತಾಡುತ್ತ ಜ.22ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ರಾಮಭಕ್ತರು, ಹಿಂದುಗಳು ಮನೆ ಮತ್ತು ದೇಗುಲಗಳಲ್ಲಿ ದೀಪ ಹಚ್ಚಿ ಸಂಭ್ರಮಿಸಬೇಕೆಂದು ಈ ರಾಮಭಕ್ತ ಸಾರುತ್ತಿದ್ದಾರೆ. ಸಾಧ್ಯವಾದವರು ಅಯೋಧ್ಯೆಗೆ ತೆರಳಿ ರಾಮಮಂದಿರ ಉದ್ಘಾಟನೆಗೆ ಶಕ್ತಿ ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ.
ಪ್ರತಿ ಹಬ್ಬ-ಹರಿದಿನಗಳಲ್ಲಿ ಹಿಂದೂ ಸಂಪ್ರದಾಯಗಳ ಮಾಹಿತಿ ಹೇಳುವ ಇವರು, ಶ್ರೀರಾಮ, ಜೈ ಹನುಮಾನ ಎಂಬ ಭಿತ್ತಿಪತ್ರವನ್ನು ನೀಡುತ್ತಾರೆ. ಶ್ರೀ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ತಮ್ಮ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಹಾಗೂ ಜೈ ಶ್ರೀರಾಮ್, ಜೈ ಹನುಮಾನ್ ಎಂಬ ಬರಹಗಳನ್ನು ಬರೆಯಿಸಿದ್ದಾರೆ. ಶ್ರೀರಾಮಚಂದ್ರ, ದಿನನಿತ್ಯ ಆಂಜನೇಯ ಸ್ತೋತ್ರಗಳನ್ನು ಪಠಿಸುತ್ತಾರೆ.
ಸಾವಿರಾರು ವರ್ಷದ ಹಿಂದೂಗಳ ಕನಸು ಶ್ರೀ ರಾಮಮಂದಿರ ನಿರ್ಮಿಸಬೇಕೆನ್ನುವುದನ್ನು ಪ್ರಧಾನಿ ಮೋದಿ ನೆರವೇರಿಸಿ ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮಮಂದಿರ ಉದ್ಘಾಟನೆಗೊಳ್ಳುತ್ತಿದ್ದು, ರಾಮಭಕ್ತರು, ಹಿಂದೂಗಳ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಶೀಘ್ರವೇ ರಾಮರಾಜ್ಯ ಸ್ಥಾಪನೆಯಾಗಲಿದೆ. –ವೆಂಕಾರೆಡ್ಡಿ ವಗರನಾಳ ಹೇರೂರಿನ ರಾಮಭಕ್ತ.
-ಕೆ.ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.