ಮೂಲಸೌಲಭ್ಯ ವಂಚಿತ ಕಾರಟಗಿ

Team Udayavani, Mar 9, 2020, 5:11 PM IST

kopala-tdy-3

ಕಾರಟಗಿ: ನೂತನ ತಾಲೂಕು ಕೇಂದ್ರ ಕಾರಟಗಿ ಪಟ್ಟಣ ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಕೆಲ ವಾರ್ಡ್‌ಗಳ ಜನ ಮೂಲಸೌಲಭ್ಯಗಳಿಂದ ವಂಚಿತಗೊಂಡಿದ್ದಾರೆ. ತಂತಿ ಮೇಲಿನ ನಡಿಗೆ ಎಂಬಂತೆ ನಿತ್ಯ ಸರ್ಕಸ್‌ ಮಾಡುತ್ತ ಓಡಾಡುವ ಪರಿಸ್ಥಿತಿ ಎದುರಾಗಿದೆ.

ಪಟ್ಟಣದ 21ನೇ ವಾರ್ಡ್‌ನಲ್ಲಿ 20 ವರ್ಷಗಳಿಂದ ಚರಂಡಿಯಿಲ್ಲದೇ ಕೊಳಚೆ ನೀರು ಹರಿಬಿಡಲಾಗುತ್ತಿತ್ತು. ಆದರೆ ಎರಡು ವರ್ಷಗಳ ಹಿಂದೆ ಪಿಡಬ್ಲ್ಯೂಡಿ ಅನುದಾನದಲ್ಲಿ ಚರಂಡಿ ಕಾಮಗಾರಿ ಕೈಗೆತ್ತಿಕೊಂಡ ಪುರಸಭೆ ಅರೆಬರೆ ಕಾಮಗಾರಿ ನಡೆಸಿದೆ. ಅನುದಾನ ಮುಗಿದಿದೆ ಎಂಬ ಕಾರಣ ನೀಡಿ ಚರಂಡಿ ಕಾಮಗಾರಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಿದೆ. ಇದರಿಂದಾಗಿ ವಾರ್ಡ್‌ ನಿವಾಸಿಗಳು ಚರಂಡಿ ದಾಟಬೇಕಾದರೆ ನಿತ್ಯ ಹರಸಾಹಸ ಮಾಡಬೇಕು. ಬೈಕ್‌ ಸವಾರರು ಎಷ್ಟೋ ಬಾರಿ ಚರಂಡಿಯಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾದರೆ ಪಾಲಕರು ಜತೆಗೆ ಬಂದು ಚರಂಡಿ ದಾಟಿಸಬೇಕು. ವಾರ್ಡ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಿಸದೇ ನಿರ್ಲಕ್ಷ್ಯ ವಹಿಸಿರುವ ಪುರಸಭೆ ಆಡಳಿತಕ್ಕೆ ಪಟ್ಟಣದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ.

ಚರಂಡಿ ದಾಟಲು ಎರಡು ಬಂಡೆಗಳನ್ನು ಜೋಡಿಸಲಾಗಿದೆ. ಈ ಬಂಡೆಗಳ ಮೇಲೆ ನಡೆಯುವಾಗ ಸ್ವಲವೂ ಆಯತಪ್ಪಿದರೆ ಚರಂಡಿಯಲ್ಲಿ ಬೀಳುವ ಸಂಭವವಿದೆ. ಈ ಕುರಿತು ಹಲವಾರು ಬಾರಿ ಪುರಸಭೆಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಬೀದಿ ದೀಪಗಳ ನಿರ್ವಹಣೆ ಕೂಡ ಸಮರ್ಪಕವಾಗಿಲ್ಲ. ಬೀದಿ ದೀಪಗಳ ನಿರ್ವಹಣೆ ಮಾಡುವವರಿಗೆ ಬೀದಿ ದೀಪ ಹಾಕಲು ಹೇಳಿದರೆ ಹಿರಿಯ ಅಧಿಕಾರಿಗಳಿಗೆ ಕೇಳಿ ಎನ್ನುತ್ತಾರೆ. ಹೀಗಾದರೆ ಇನ್ಯಾರಿಗೆ ನಾವು ಕೇಳಬೇಕು ಎಂದು ವಾರ್ಡ್‌ ನಿವಾಸಿ ಮಂಜುಳಾ ಸಮಸ್ಯೆ ಹೇಳಿಕೊಂಡರು.

ಅನುದಾನ ಕೊರತೆಯಿಂದ ಚರಂಡಿ ಕಾಮಗಾರಿ ನಿಲ್ಲಿಸಿದ್ದೇವೆ. ಹೆಚ್ಚಿನ ಬಜೆಟ್‌ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಚರಂಡಿ ಕಾಮಗಾರಿ ಪೂರ್ಣಗೊಳಿಸಿ ನಜೀರ್‌ಸಾಬ್‌ ಕಾಲೋನಿಯಲ್ಲಿ ಕಾಂಕ್ರಿಟ್‌ ರಸ್ತೆ ಕೂಡ ನಿರ್ಮಿಸಲಾಗುವುದು.  –ಅನ್ನಪೂರ್ಣಮ್ಮ ಗಿರಿಯಪ್ಪ ಬೂದಿ, ವಾರ್ಡ್‌ ಸದಸ್ಯೆ

ಪಿಡಬ್ಲೂಡಿ ಗ್ರ್ಯಾಂನಲ್ಲಿ ಚರಂಡಿ ಕಾಮಗಾರಿ ನಡೆಸಲಾಗಿತ್ತು. ಬಜೆಟ್‌ ಕೊರತೆಯಿಂದ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಹೊಸ ಕ್ರಿಯಾ ಯೋಜನೆ ತಯಾರಿಸಿದ್ದು, ಶೀಘ್ರದಲ್ಲೇ 21ನೇ ವಾರ್ಡ್ ನಲ್ಲಿ ಚರಂಡಿ ಕಾಮಗಾರಿ ಸೇರಿದಂತೆ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಬಾಕಿಯಿರುವ ಕಾಮಗಾರಿ ಪೂರ್ಣಗೊಳಿಸಲಾಗುವುದು. – ಎನ್‌. ಶಿವಲಿಂಗಪ್ಪ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.