ಶುಚಿ-ರುಚಿ ಆಹಾರ ನೀಡಲು ಒತ್ತಾಯ
Team Udayavani, Apr 9, 2021, 9:26 PM IST
ಕುಷ್ಟಗಿ : ಹೊರವಲಯದ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯದಲ್ಲಿ ನಿತ್ಯ ಶುಚಿ-ರುಚಿ ಇಲ್ಲದ ಆಹಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಬೆಳಗ್ಗೆ ವಸತಿ ನಿಲಯದಲ್ಲಿ ಅವಲಕ್ಕಿ ವಗ್ಗರಣೆ ಚೆನ್ನಾಗಿ ಮಾಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿ ಹಾಗೂ ವಾರ್ಡನ್ ಜೊತೆ ವಾಗ್ವಾದಕ್ಕಿಳಿದರು. ನಂತರ ಅವಲಕ್ಕಿ ವಗ್ಗರಣೆ ಪಾತ್ರೆಯೊಂದಿಗೆ ಅನ್ನದಾನೇಶ್ವರ ನಗರದ ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿಗಳ ಕಚೇರಿಗೆ ದೌಡಾಯಿಸಿದರು.
ಆ ವೇಳೆ ಅಧಿಕಾರಿ ವೀರಪ್ಪ ಛತ್ರದ ಅವರು ಬಂದಿರಲಿಲ್ಲ. ಆದರೆ ಪಿಎಸ್‌ಐ ತಿಮ್ಮಣ್ಣ ನಾಯಕ್ ಅವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಮನವೊಲಿಸಿ ಪುನಃ ವಸತಿ ನಿಲಯಕ್ಕೆ ತೆರಳಲು ಸೂಚಿಸಿದರು.
ನಂತರ ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿ ವೀರಪ್ಪ ಛತ್ರದ ಸಮ್ಮುಖದಲ್ಲಿ ವಸತಿ ನಿಲಯದ ಅಡುಗೆದಾರರಿಗೆ, ವಾರ್ಡನ್ ಕಾರ್ಯವೈಖರಿ ಸರಿಪಡಿಸಿಕೊಂಡು, ರುಚಿಕಟ್ಟಾದ ಗುಣಮಟ್ಟದ ಅಡುಗೆ ತಯಾರಿಸುವಂತೆ ಸೂಚ್ಯವಾಗಿ ಹೇಳಿದರು. ಇಂತಹ ಪ್ರಕರಣ ಪುನರಾವರ್ತನೆ ಆಗದಂತೆ ಎಚ್ಚರಿಸಿದರು. ಅಡುಗೆದಾರರಿಂದ ಅವಲಕ್ಕಿ ವಗ್ಗರಣೆ ತಯಾರಿಸಿ ವಿದ್ಯಾರ್ಥಿಗಳೊಟ್ಟಿಗೆ ಉಪಹಾರ ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.