2ನೇ ಬೆಳೆಗೆ ನೀರು ಹರಿಸಲು ಒತ್ತಾಯ
•ಟಿಬಿ ಬೋರ್ಡ್‌ಗೆ ರಾಜ್ಯದ ಅಧಿಕಾರಿ ನೇಮಿಸಿ•ವಾಟಾಳ್ ಬಂಧನ-ಬಿಡುಗಡೆ
Team Udayavani, Aug 27, 2019, 1:13 PM IST
ಕೊಪ್ಪಳ: ಎರಡನೇ ಬೆಳೆಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಾಟಾಳ್ ನಾಗರಾಜ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟಗಾರ ವಾಟಾಳ್ ನಾಗರಾಜ ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಡ್ಯಾಂ ನೀರನ್ನು ಅವಲಂಬಿಸಿ ಕೆಲ ವರ್ಷಗಳಿಂದ ಕೇವಲ ಒಂದೇ ಬೆಳೆಯಲು ಸಾಧ್ಯವಾಗಿದೆ. ಈ ಬಾರಿ ಟಿಬಿ ಡ್ಯಾಂ ಭರ್ತಿಯಾಗಿದ್ದು, 2ನೇ ಬೆಳೆಗೆ ನೀರು ಹರಿಸಬೇಕು. ಇದಕ್ಕೂ ಮೊದಲು ಜಲಾಶಯದಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳ ವಿರುದ್ಧ ನೀರಾವರಿ ಇಲಾಖೆ ಅಧಿಕಾರಿಗಳು ಶಿಸ್ತು ಕ್ರಮಕೈಗೊಳ್ಳಬೇಕು. ಟಿಬಿ ಬೋರ್ಡ್‌ಗೆ ಹೊರ ರಾಜ್ಯದ ಅಧಿಕಾರಿಗಳನ್ನು ನೇಮಿಸಿರುವುದರಿಂದ ಇಲ್ಲಿನ ಸ್ಥಳೀಯ ಜನರ ಕಷ್ಟ ಅವರಿಗೆ ಅರ್ಥವಾಗುತ್ತಿಲ್ಲ. ಶೀಘ್ರವೇ ಹೊರ ರಾಜ್ಯದ ಅಧಿಕಾರಿಗಳನ್ನು ಹುದ್ದೆಯಿಂದ ತೆಗೆದು, ಕನ್ನಡದ ಅಧಿಕಾರಿಗಳನ್ನು ನೇಮಿಸಬೇಕು. ಸ್ಥಳೀಯ ಕಾರ್ಖಾನೆಗಳಲ್ಲಿ ಹೊರ ರಾಜ್ಯದವರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇಲ್ಲಿನ ಜನರನ್ನು ಕಡೆಗಾಣಿಸಲಾಗುತ್ತಿದೆ. ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎನ್ನುವುದು ಸೇರಿ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಪ್ರತಿಭಟನೆಯ ವೇಳೆ ವಾಟಾಳ್ ನಾಗರಾಜ ಅವರು ಸೇರಿದಂತೆ ವಿವಿಧ ಮುಖಂಡರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಯಿತು.
ಪ್ರತಿಭಟನೆಯ ವೇಳೆ ಕನ್ನಡ ಸಂಘಟನೆಗಳ ಪದಾಧಿಕಾರಿಗಳಾದ ಆರ್. ವಿಜಯಕುಮಾರ್, ದಯಾನಂದ ಸ್ವಾಮಿ, ಟಿ. ದುರುಗೇಶ, ದುರುಗಪ್ಪ ನಡುವಲಮನಿ, ಯಂಕಪ್ಪನಾಯಕ್, ವಿರೂಪಾಕ್ಷಿಗೌಡ ನಾಯಕ್, ದೇವೇಂದ್ರಪ್ಪ ನಾಡದಾಳ, ಬಸವನಗೌಡ ಪೊಪಾ, ವಿಶ್ವನಾಥ ನಾಯಕ್, ಹನುಮೇಶ ಬೆಣಕಲ್ ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.