ಜಗಜೀವನರಾಮ್ ಭವನ ನಿರುಪಯುಕ್ತ
Team Udayavani, Nov 20, 2019, 2:37 PM IST
ಕುಷ್ಟಗಿ: ಪಟ್ಟಣದ ಹೊರವಲಯದಲ್ಲಿರುವ ಡಾ|ಬಾಬು ಜಗಜೀವನರಾಮ್ ಭವನ ಉದ್ಘಾಟನೆ ಭಾಗ್ಯ ಕಂಡರೂ ನಿರುಪಯುಕ್ತವಾಗಿದ್ದು, ಸ್ಮಾರಕವಾಗಿ ನಿಂತಿದೆ.
ಸಮಾಜ ಕಲ್ಯಾಣ ಇಲಾಖೆಯ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಈ ಬೃಹತ್ ಭವನವನ್ನು ಕಳೆದ ಜುಲೈ 9ರಂದು ಹಿಂದಿನ ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಇ. ತುಕಾರಾಮ್ ಲೋಕಾ ರ್ಪಣೆಗೊಳಿಸಿದ್ದರು. ಭವನ ಮಂಜೂರಿ ಮಾಡಿದ್ದ ಹಿಂದಿನ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಇದಕ್ಕೆ ಸಾಕ್ಷಿಯಾಗಿದ್ದರು. ಸದರಿ ಭವ್ಯ ಭವನಕ್ಕಾಗಿ ಜಮೀನು ಖರೀದಿ, ನಂತರ ಕಟ್ಟಡ ಕಾಮಗಾರಿಗೆ ತೋರಿದಷ್ಟು ಉತ್ಸುಕತೆಯನ್ನು ಕಟ್ಟಡ ಪೂರ್ಣಗೊಂಡ ಬಳಿಕ ಇಲ್ಲವಾಗಿದೆ.
ಭವನದ ಉದ್ಘಾಟನೆ ಸಮಾರಂಭ ಹೊರತು ಪಡಿಸಿದರೆ ಈವರೆಗೂ ಬಳಕೆಯಾಗದೇ ನಿರುಪಯುಕ್ತವಾಗಿದೆ. ಭವನ ಕಟ್ಟಡ ವಿಶಾಲ ವೇದಿಕೆ, ಸಭಾಂಗಣ, ಬಾಲ್ಕನಿ ವ್ಯವಸ್ಥೆ ಪ್ರತ್ಯೇಕ ಕೊಠಡಿ, ಬೆಳಕಿನ ವ್ಯವಸ್ಥೆ, ನೀರಿನ ವ್ಯವಸ್ಥೆ ಎಲ್ಲವೂ ಇದೆ. ತಹಶೀಲ್ದಾರ್ ಕಚೇರಿ ಹಿಂದುಗಡೆ ಇರುವ ಸದರಿ ಭವನ ಪಟ್ಟಣದ ಹೊರವಲಯದಲ್ಲಿದೆ. ಸಮಾಜ ಕಲ್ಯಾಣ ಇಲಾಖೆ ಅನುಮತಿ ನೀಡಿದರೂ ಭವನ ಬಳಕೆ ಮಾಡಲು ಯಾರೂ ಮುಂದೆ ಬಾರದೇ ಇರುವುದು ಅಚ್ಚರಿ ಮೂಡಿಸಿದೆ. ಸ
ತಾಲೂಕಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳೂ ಸಹ ಈ ಭವನದಲ್ಲಿ ಸರ್ಕಾರ ಕಾರ್ಯಕ್ರಮ, ಮಹನೀಯರ ಜಯಂತಿ ಹಾಗೂ ತರಬೇತಿ ಇತ್ಯಾದಿ ಕಾರ್ಯಕ್ರಮಗಳಿಗೆ ಬಳಸಿಕೊಂಡಿಲ್ಲ. ಮದ್ಯ ವ್ಯಸನಿಗಳು ಕುಡಿದು ಬಾಟಲಿ ಬೀಸಾಡಿದ್ದು ಕಟ್ಟಡದ ಮೇಲುಸ್ತುವಾರಿ ಇಲ್ಲದಂತಾಗಿದೆ.
ಸಮಿತಿಗಾಗಿ ಪ್ರಸ್ತಾವನೆ: ಡಾ|ಬಾಬು ಜಗಜೀವನರಾಮ್ ಭವನ ನಿರ್ವಹಣೆಗೆ ತಾಲೂಕು ಮಟ್ಟದ ಸಮಿತಿ ರಚಿಸಲಾಗಿದ್ದು, ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ತಾಪಂ ಇಒ, ಜಿಪಂ ಎಇಇ, ಪುರಸಭೆ ಮುಖ್ಯಾಧಿಕಾರಿ, ಲೋಕೋಪಯೋಗಿ ಇಲಾಖೆಯ ಎಇಇ ಸದಸ್ಯರಾಗಿದ್ದಾರೆ. ಮೂವರನ್ನು ನಾಮನಿರ್ದೇಶಿತ ಸದಸ್ಯರಾಗಿ ನೇಮಿಸುವುದು ವಿಳಂಬವಾಗಿದೆ. ಮಾದಿಗ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಮೇಲಿನಮನಿ, ಕೃಷ್ಣಮೂರ್ತಿ ಟೆಂಗುಂಟಿ, ಹನುಮಂತಪ್ಪ ಇಂಡಿ ಅವರ ಹೆಸರನ್ನು ಕಳೆದ ನ.5ರಂದು ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಿಕೊಟ್ಟಿದೆ. ಈ ಸಮಿತಿ ನಾಮನಿರ್ದೇಶಿತ ಸದಸ್ಯರೆಂದು ಅನುಮೋದನೆ ಬಳಿಕ ಸದರಿ ಸಮಿತಿಗೆ ಡಾ| ಬಾಬು ಜಗಜೀವನರಾಮ್ ಭವನ ಹಸ್ತಾಂತರಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ತಾಲೂಕು ಅಧಿಕಾರಿ ದೇವಲ ನಾಯಕ್ ತಿಳಿಸಿದರು.
-ಮಂಜುನಾಥ ಮಹಾಲಿಂಗಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.