ಜಿಂದಾಲ್ ಉದ್ಯೋಗಿಗೆ ಸೋಂಕು
Team Udayavani, Jun 22, 2020, 2:55 PM IST
ಕೊಪ್ಪಳ: ಜಿಲ್ಲೆಯಲ್ಲಿ ಜಿಂದಾಲ್ ಕಾರ್ಖಾನೆಯ ಉದ್ಯೋಗಿಗೆ ಭಾನುವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆಯು 29ಕ್ಕೆ ಏರಿಕೆಯಾದಂತಾಗಿದೆ.
ಇನ್ನೂ ಜಿಂದಾಲ್ ನಂಜು ಜಿಲ್ಲೆಯಲ್ಲಿ ಸದ್ದಿಲ್ಲದೇ ವ್ಯಾಪಿಸಲಾರಂಭಿಸಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದ 32 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಈತನು ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದಾನೆ. ಈತನಿಗೆ ಸೋಂಕಿನ ಲಕ್ಷಣವಿಲ್ಲದಿದ್ರೂ ಸೋಂಕು ದೃಢಪಟ್ಟಿದೆ. ಇನ್ನೂ ಈ ವ್ಯಕ್ತಿಯನ್ನು ಜೂ.14ರಂದು ಗಂಗಾವತಿ ತಾಲೂಕಿನ ಹೊಸಳ್ಳಿಯ ದೇವರಾಜ ಅರಸು ವಸತಿ ನಿಲಯದಲ್ಲಿ ಕ್ವಾರೆಂಟೈನ್ ಮಾಡಲಾಗಿತ್ತು. ಜೂ.18 ರಂದು ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನಿಸಿತ್ತು. ಭಾನುವಾರ ಸೋಂಕು ದೃಢಪಟ್ಟಿದೆ. ಇನ್ನೂ ಈತನ ಟ್ರಾವೆಲ್ ಹಿಸ್ಟರಿ ನೋಡಿದಾಗ ಪ್ರತಿ ನಿತ್ಯ ಮರಳಿ ಗ್ರಾಮದಿಂದ ಜಿಂದಾಲ್ ಕಾರ್ಖಾನೆಗೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದನು. ಜೂ.8 ರಂದು ಕೊನೆಯದಾಗಿ ಈತನು ಜಿಂದಾಲ್ ಕಾರ್ಖಾನೆಗೆ ತೆರಳಿದ್ದನು. ಆ ಬಳಿಕ ಈತನನ್ನು ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಮಾಡುವಂತೆ ಸೂಚಿಸಲಾಗಿತ್ತು. ಬಳಿಕ ವಸತಿ ನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಸೋಂಕಿತನಿಗೆ ಮನೆಯಲ್ಲಿ ನಾಲ್ಕು ಜನ ಈತನಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದು, 4 ಜನ ದ್ವಿತೀಯ ಸಂಪರ್ಕಕ್ಕೆ ಬಂದಿದ್ದಾರೆ.
ಈತನನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಜಿಲ್ಲೆಯಲ್ಲಿ ಶನಿವಾರದ ಅಂತ್ಯಕ್ಕೆ 28 ಜನರು ಕೋವಿಡ್ ಸೋಂಕಿತರಿದ್ದರು. ಭಾನುವಾರಕ್ಕೆ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಈ ವರೆಗೂ ಕೋವಿಡ್ ಆಸ್ಪತ್ರೆಯಿಂದ 12 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಇನ್ನೂಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.
ಜಿಂದಾಲ್ ನಂಜು ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಈಚೆಗಷ್ಟೆ ಮರಳಿ ಗ್ರಾಮದಲ್ಲಿ ಜಿಂದಾಲ್ ದಂಪತಿಗೆ ಸೋಂಕು ತಗುಲಿತ್ತು. ಇದರಲ್ಲಿ ಮಹಿಳೆ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಳು. ಜಿಂದಾಲ್ ಜಾಲವು ಜಿಲ್ಲೆಯ ಕೆಲವು ಭಾಗದಲ್ಲಿ ಕಾಣಿಸಿಕೊಂಡು ಜನರನ್ನು ತಲ್ಲಣಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.