ಕನಕಗಿರಿ ತಾಲೂಕಾದರೂ ಗಂಗಾವತಿಗೆ ತಿರುಗಾಟ ತಪ್ಪಿಲ್ಲ

ಒಂದೂವರೆ ವರ್ಷವಾದರೂ ಸ್ಥಳಾಂತರಗೊಂಡಿಲ್ಲ ಹಲವು ಕಚೇರಿ

Team Udayavani, Jun 3, 2019, 11:22 AM IST

kopala-tdy-1..

ಕನಕಗಿರಿ: ಪಟ್ಟಣದ ಯಾತ್ರಾ ನಿವಾಸದಲ್ಲಿರುವ ತಹಶೀಲ್ದಾರ್‌ ಕಚೇರಿ.

ಕನಕಗಿರಿ: ಹಿಂದಿನ ಕಾಂಗ್ರೆಸ್‌ ಸರ್ಕಾರ ಸಾಮಾನ್ಯ ಜನರ ಮನೆಯ ಬಾಗಿಲಿಗೆ ಆಡಳಿತದ ಅನುಕೂಲ ಸಿಗಲು ಹೊಸ ತಾಲೂಕುಗಳನ್ನು ಜಾರಿಗೊಳಿಸಿತು. ಆದರೆ ತಾಲೂಕು ಕಚೇರಿ ಆರಂಭವಾಗಿ ಒಂದೂವರೆ ವರ್ಷ ಗತಿಸಿದರೂ ಇದುವರೆಗೂ ತಾಲೂಕಿಗೆ ಸಂಬಂಧಿಸಿದ ದಾಖಲೆಗಳನ್ನು ಗಂಗಾವತಿ ತಹಶೀಲ್ದಾರ್‌ ಕಚೇರಿಯಿಂದ ಕನಕಗಿರಿ ತಹಶೀಲ್ದಾರ್‌ ಕಚೇರಿಗೆ ರವಾನಿಸಿಲ್ಲ. ಇದರಿಂದ ಹಳೆ ದಾಖಲೆಗಳಿಗಾಗಿ ತಾಲೂಕಿನ ಜನತೆ ಗಂಗಾವತಿಗೆ ತೆರಳುವುದು ಇನ್ನೂ ತಪ್ಪಿಲ್ಲ.

ಕನಕಗಿರಿ, ನವಲಿ, ಹುಲಿಹೈದರ್‌, ಹೋಬಳಿ ವ್ಯಾಪ್ತಿಯ ಸುಮಾರು 66 ಹಳ್ಳಿಯ ಜನರು ತಮ್ಮ ದಾಖಲೆಗಳಿಗಾಗಿ ಗಂಗಾವತಿಯ ತಹಶೀಲ್ದಾರ್‌ ಹಾಗೂ ತಾಲೂಕು ಕಚೇರಿಗಳಿಗೆ ಅಲೆದಾಡುವುದು ತಪ್ಪಿಲ್ಲ. ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಭೂಮಿ ಕೇಂದ್ರ, ಆಹಾರ ಇಲಾಖೆ, ಉಪನೋಂದಣಿ, ಸರ್ವೇ ಇಲಾಖೆಗಳನ್ನು ಕನಕಗಿರಿ ತಾಲೂಕಿಗೆ ವರ್ಗಾಯಿಸದ ಕಾರಣ ಜನಸಾಮಾನ್ಯರು ತಮ್ಮ ಕೆಲಸಕ್ಕಾಗಿ ಮತ್ತು ದಾಖಲೆಗಳನ್ನು ಪಡೆಯಲು 400 ರೂ. ಖರ್ಚು ಮಾಡಿಕೊಂಡು ನಿತ್ಯ ಗಂಗಾವತಿಗೆ ತಿರುಗಾಡುತ್ತಿದ್ದಾರೆೆ. ಒಂದು ವೇಳೆ ಹೋದ ಕೆಲಸ ಆಗದೇ ಇದ್ದಾಗ ಬಂದ ದಾರಿಗೆ ಸುಂಕವಿಲ್ಲ ಎನ್ನುವಂತೆ ತಮ್ಮ ಗ್ರಾಮಗಳಿಗೆ ಮರಳುವಂತಹ ಪರಿಸ್ಥಿತಿ ನಿರ್ಮಾವಾಗಿದೆ.

ನೂತನ ತಾಲೂಕಿಗೆ ತಹಶೀಲ್ದಾರ್‌ ಆಗಿ ರವಿ ಅಂಗಡಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯಾಲಯದಲ್ಲಿ ಕೆಲಸ ಮಾಡಲು ಬೆರಳೆಣಿಕೆ ಸಿಬ್ಬಂದಿ ಮಾತ್ರ ಇದ್ದಾರೆ. ಸಿಬ್ಬಂದಿ ಕೊರತೆ ಇದ್ದು, ಸಾರ್ವಜನಿಕರು ಅನುಕೂಲಕ್ಕಾಗಿ ಕೊಡಲೇ ಸಿಬ್ಬಂದಿಯನ್ನು ನೇಮಕ ಮಾಡಬೇಕಾಗಿದೆ.

ಕಾರ್ಯಾರಂಭ ಮಾಡದ ಇಲಾಖೆ: ಕನಕಗಿರಿ ತಾಲೂಕು ಆದರೂ ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ಕ್ಷೇತ್ರ ಶಿಕ್ಷಣಾಧಿಕಾರಿ, ಕೋರ್ಟ್‌, ಅರಣ್ಯ ಇಲಾಖೆ, ತಾಲೂಕಾ ಆಸ್ಪತ್ರೆ, ಪಶು ಇಲಾಖೆ, ತಾಲೂಕಾ ಕ್ರೀಡಾಂಗಣಾ, ಅಗ್ನಿ ಶಾಮಕ, ಗ್ರಂಥಾಲಯ ಸೇರಿದಂತೆ ವಿವಿಧ ತಾಲೂಕು ಆಡಳಿತಕ್ಕೆ ಒಳಪಡುವ ಇಲಾಖೆಗಳು ಕಾರ್ಯಾರಂಭ ಮಾಡದೇ ಇರುವುದರಿಂದ ಜನತೆ ಗಂಗಾವತಿಗೆ ಹೋಗಿ ಸೌಲಭ್ಯ ಪಡೆಯಬೇಕಾಗಿದೆ.

•ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.