ಸಾಹಿತ್ಯ ಚಟುವಟಿಕೆ ಜೀವಂತವಾಗಿರಿಸಿದೆ ಕಸಾಪ: ಬಿಳಿಎಲೆ

ಸಾಹಿತ್ಯ ಪರಿಷತ್ತಿನ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ­; ಸಂವಿಧಾನ ವ್ಯವಸ್ಥೆಗೆ ಶರಣರ ಚಟುವಟಿಕೆಗಳೇ ಪ್ರೇರಣೆ

Team Udayavani, Jun 2, 2022, 2:16 PM IST

13

ಕೊಪ್ಪಳ: ಕನ್ನಡ ಸಾಹಿತ್ಯ ಪರಿಷತ್‌ ಸಾಹಿತ್ಯದ ಚಟುವಟಿಕೆಗಳನ್ನು ಇಂದಿಗೂ ಜೀವಂತವಾಗಿರಿಸಿದೆ ಎಂದು ಪ್ರೊ| ಶರಣಬಸಪ್ಪ ಬಿಳಿಎಲೆ ಅವರು ಹೇಳಿದರು.

ನಂದೀಶ್ವರ ಶಾಲೆ ನಂದಿ ನಗರದಲ್ಲಿ ನಡೆದ ಕಸಾಪ ಜಿಲ್ಲಾ, ತಾಲೂಕು ಸಾಹಿತ್ಯ ಪರಿಷತ್‌ನಿಂದ ಕಸಾಪ ದತ್ತಿ ಉಪನ್ಯಾಸ, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಸಾಪದಲ್ಲಿ ಶ್ರಮಿಸಿದ ಹಿರಿಯರ ಆಶಯದಂತೆ, ಅವರ ಚಿಂತನೆ ಜೀವ ತುಂಬುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತು ಮುಂದಿದೆ. ದತ್ತಿ ಕಾರ್ಯಕ್ರಮ ಆಯೋಜಿಸುವ ಮೂಲಕ ಸಾಹಿತ್ಯ ಚಟುವಟಿಕೆಗಳನ್ನು ಇಂದಿಗೂ ಜೀವಂತವಾಗಿಸಿದೆ. ಇನ್ನೂ ಹೆಚ್ಚು ಹೆಚ್ಚು ದತ್ತಿ ಸ್ಥಾಪಿಸುವ ಮೂಲಕ ಸಾಹಿತ್ಯ ಪರಿಷತ್ತಿನ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ರಾಜೇಶ ಸಸಿಮಠ ಮಾತನಾಡಿ, ವಚನ ಸಾಹಿತ್ಯ ಅನುಭವ ಜನ್ಯವಾದದ್ದು, ಸರ್ವಕಾಲಿಕವಾಗಿ ಜನ ಬದುಕಿನ ಮಜಲುಗಳಲ್ಲಿ ಹಾಸು ಹೊಕ್ಕಾಗಿದೆ. ಎಲ್ಲ ರೀತಿಯ ಸಾಹಿತ್ಯ ಪ್ರಕಾರಗಳಲ್ಲಿ ತನ್ನ ಛಾಪು ಮೂಡಿಸಿರುವ ಮೂಲಕ ಜನ ಜನಿತವಾಗಿವೆ ಎಂದರು.

ಬಿ.ಪಿ. ಮರಿಗೌಡ ಮಾತನಾಡಿ, ಇಂದಿನ ಸಂವಿಧಾನ ವ್ಯವಸ್ಥೆಗೆ ಅನುಭವ ಮಂಟಪದ ಶರಣರ ಚಟುವಟಿಕೆಗಳೇ ಪ್ರೇರಣೆಯಾಗಿದೆ. ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಬಗೆ ಇಂದಿನ ಸಮಾಜದಲ್ಲಿನ ಮೌಡ್ಯ, ಜಡತೆ ಹೋಗಲಾಡಿಸಲು ಪ್ರೇರಣೆಯಾಗಲಿ ಎಂದರು.

ದಿ. ಮರಿಗೌಡ ಮಲ್ಲನಗೌಡರ ಸ್ಮಾರಕ ದತ್ತಿ ಪ್ರಶಸ್ತಿ ಹಾಗೂ ದಿ. ಅಂದಮ್ಮ ಮಲ್ಲನಗೌಡರ ಸ್ಮಾರಕ ದತ್ತಿ ಪ್ರಶಸ್ತಿಗಳನ್ನು ಈ ವೇಳೆ ಜಿಲ್ಲಾ ಕಸಾಪ ಘಟಕ ಪ್ರಕಟಿಸಿತು. ಮರಿಗೌಡ ಮಲ್ಲನಗೌಡರ ಅವರ ಸ್ಮಾರಕ ಪ್ರಶಸ್ತಿಗೆ 7 ಜನ ಲೇಖಕರು, 9 ಪುಸ್ತಕಗಳನ್ನು ನೋಂದಾಯಿಸಿಕೊಂಡಿದ್ದರು. ಈಶ್ವರ ಹತ್ತಿ ಅವರ ಅನಿಮಲ್‌ ಫಾರ್ಮ್ ಕೃತಿ ಆಯ್ಕೆಗೊಂಡಿದೆ. ದಿ. ಅಂದಮ್ಮ ಮಲ್ಲನಗೌಡರ ಸ್ಮಾರಕ ದತ್ತಿ ಪ್ರಶಸ್ತಿಗೆ 6 ಜನ ಮಹಿಳಾ ಲೇಖಕಿಯರು 7 ಪುಸ್ತಕಗಳನ್ನು ನೋಂದಾಯಿಸಿಕೊಂಡಿದ್ದರು. ಮುಮ್ತಾಜ್‌ ಬೇಗಂ ಅವರ “ಕೊಂದ ಕನಸುಗಳ ಕೇಸು’ ಪುಸ್ತಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.

ಜೊತೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ ಪಾಟೀಲ ಮಾತನಾಡಿ, ಕಸಾಪ ವಿಭಿನ್ನವಾಗಿ ದತ್ತಿ ಉಪನ್ಯಾಸ ಆಯೋಜಿಸಲು ಪ್ರಯತ್ನಿಸುತ್ತಾ ಬಂದಿದೆ. ಆಸಕ್ತರು ಹೆಚ್ಚಿನ ದತ್ತಿಗಳನ್ನು ಸ್ಥಾಪಿಸುವ ಮೂಲಕ ಸಾಹಿತ್ಯ ಚಟುವಟಿಕೆಗಳನ್ನು ನಡೆಸಲು ಸಹಕಾರ ನೀಡಬೇಕು. ಕಾರ್ಯಕ್ರಮದಲ್ಲಿ ನಾಡಗೀತೆಗೆ ಅವಮಾನಿಸಿದವರನ್ನು ಬಂಧಿಸಲು ಆಗ್ರಹಿಸಿದರು.

ಸಮಾರಂಭದಲ್ಲಿ ಚನ್ನಬಸಪ್ಪ ಕಡ್ಡಿಪುಡಿ, ರಮೇಶ ಕುಲಕರ್ಣಿ, ಸಾವಿತ್ರಿ ಮುಜುಂದಾರ, ವೀರಣ್ಣ ಹುರಕಡ್ಲಿ, ಈರಪ್ಪ ಬಿಜಲಿ, ಶಿವಕುಮಾರ ಕುಕನೂರು, ನಂದೀಶ್ವರ ಪ್ರಾಥಮಿಕ ಶಾಲೆಯ ಸುರೇಶ ಉಪಸ್ಥಿತರಿದ್ದರು.

ಈ ವೇಳೆ ಶಂಕ್ರಪ್ಪ ಬಂಗಾರಿ ಅವರು ತಮ್ಮ ಭಾಗದಲ್ಲಿ 880 ಮಹಾಮನೆ ಕಾರ್ಯಕ್ರಮ ಆಯೋಜಿಸಿ ಪ್ರತಿವಾರ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಅವರನ್ನು ಕಸಾಪ ಸನ್ಮಾನಿಸಿತು. ಕೊಪ್ಪಳ ತಾಲೂಕು ಕಸಾಪ ಅಧ್ಯಕ್ಷ ರಾಮಚಂದ್ರಗೌಡ ಗೊಂಡಬಾಳ ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಗಪ್ಪ ಚಕ್ರಸಾಲಿ ನಿರೂಪಿಸಿದರು. ಮಲ್ಲಿಕಾರ್ಜುನ ಹ್ಯಾಟಿ ಅವರು ಸ್ವಾಗತಿಸಿದರು. ಬಸವರಾಜ ಶಿರಗುಪ್ಪಿಶೆಟ್ಟರ್‌ ವಂದಿಸಿದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.