ಅಂಜನಾದ್ರಿ ಪ್ರದೇಶದ ಮೂಲಕ್ಕೆ ಧಕ್ಕೆಯಾಗದಂತೆ ಸಮಗ್ರ ಅಭಿವೃದ್ಧಿ: ಸಚಿವ ಬಿ.ಶ್ರೀರಾಮುಲು
Team Udayavani, Feb 1, 2022, 8:57 AM IST
ಗಂಗಾವತಿ: ಕನಾಟಕ ರಾಜ್ಯಕ್ಕೆ ಕೀರ್ತಿ ತಂದಿರುವ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ರಾಜ್ಯ ಮತ್ತು ಕೇಂದ್ರ ಸರಕಾರ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದು ಇಲ್ಲಿಯ ಚಿತ್ರಣವೇ ಬದಲಾಗಲಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಅವರು ತಾಲೂಕಿನ ಇತಿಹಾಸ ಪ್ರಸಿದ್ಧ ಪಂಪಾಸರೋವರಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಹಂಪಿಯಲ್ಲಿ ನಾಲ್ಕು ಪುರಾತನ ದೇಗುಲ ಜೀರ್ಣೋದ್ಧಾರ ಮಾಡಿದ್ದು ಪಂಪಾಸರೋವರ ಹಾಗೂ ಇಲ್ಲಿಯ ದೇಗುಲವನ್ನು ಮೊದಲಿನ ಸ್ವರೂಪದಲ್ಲೇ ನಿರ್ಮಿಸಲಾಗುತ್ತಿದೆ. ವಿಶ್ವದಲ್ಲಿಯೇ ಖ್ಯಾತ ಸ್ಥಳವಾಗಿರುವ ಕಿಷ್ಕಿಂದಾ ಅಂಜನಾದ್ರಿ, ಪಂಪಾಸರೋವರ, ಋಷಿಮುಖ ಪರ್ವತ ಶ್ರೀಚಂದ್ರಮೌಳೇಶ್ವರ ದೇಗುಲಗಳನ್ನು ಪುರಾತತ್ವ ಕೇಂದ್ರ ಸರ್ವೇಕ್ಷಣಾ ಇಲಾಖೆ ಜೀರ್ಣೋದ್ಧಾರ ಮಾಡುವಂತೆ ಪತ್ರ ಬರೆಯಲಾಗಿದೆ.
ಭಾರತದ ಇತಿಹಾಸದಲ್ಲಿ ಅರಸರು ದೇಗುಲ, ಕೆರೆ, ಕಟ್ಟೆ, ರಸ್ತೆ ಹಾಗೂ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕೆಲಸ ಕಾರ್ಯ ಮಾಡಿದ್ದು ರಾಜ್ಯ ಸರಕಾರ ಈಗಲೂ ಇಂತಹ ಕಾರ್ಯ ಮಾಡಲು ಯೋಜನೆ ರೂಪಿಸಿದೆ. ಕೊರೊನಾ ಕಾರಣಕ್ಕಾಗಿ ಸ್ವಲ್ಪ ಮಟ್ಟಿಗೆ ಅಭಿವೃದ್ಧಿ ಕಾರ್ಯದಲ್ಲಿ ವಿಳಂಭವಾಗಿದ್ದು ಮುಂದೆ ಸಮರೋಪಾದಿಯಲ್ಲಿ ಕೆಲಸಗಳು ನಡೆಯಲಿವೆ ಎಂದರು.
ಇಡೀ ಕಿಷ್ಕಿಂದಾ ಪ್ರದೇಶವನ್ನು ಸುತ್ತಾಡಿದ ಶ್ರೀರಾಮುಲು, ಜನಾರ್ಧನರೆಡ್ಡಿ: ಹಂಪಿಯಲ್ಲಿ ಸೋಮವಾರದ ಪೂಜೆ ಮುಗಿಸಿದ ಸಚಿವ ಬಿ.ಶ್ರೀರಾಮುಲು ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಂಸದೆ ಬಿ. ಶಾಂತ ಹಾಗೂ ಅವರ ಬೆಂಬಲಿಗರು ಕೋದಂಡರಾಮ ದೇಗುಲದ ಮುಂದಿರುವ ತುಂಗಭದ್ರಾ ನದಿಯ ಚಕ್ರತೀರ್ಥದಲ್ಲಿ ಹರಿಗೋಲಿನಲ್ಲಿ (ತೆಪ್ಪ) ಋಷಿಮುಖ ಪರ್ವತದಲ್ಲಿರುವ ಶ್ರೀಚಂದ್ರಮೌಳೇಶ್ವರ ಹಾಗೂ ಸುಗ್ರೀವಾ ದೇಗುಲಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.
ಸಂಪ್ರದಾಯ ಸಂಗೀತ ಕಾರ್ಯಕ್ರಮ: ಸ್ಥಳೀಯ ಕಲಾವಿದ ಗಾಳೇಶ ತಂಡದವರು ಋಷಿಮುಖ ಪರ್ವತದ ತಪ್ಪಲಿನಲ್ಲಿ ಆಯೋಜಿಸಿದ್ದ ಸಂಪ್ರದಾಯಿಕ ವಾದ್ಯಗಳ ಸಂಗೀತ ಕಾರ್ಯಕ್ರಮದಲ್ಲಿ ಪ್ರೇಕ್ಷಕರಾಗಿ ಮರಳಿನ ಮೇಲೆ ಕುಳಿತು ಸಚಿವ ಬಿ.ಶ್ರೀರಾಮುಲು ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಂಸದೆ ಬಿ. ಶಾಂತಮ್ಮ ಕಾರ್ಯಕ್ರಮ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿ.ಪಂ.ಮಾಜಿ ಸದಸ್ಯ ಎಚ್.ಎಂ.ಸಿದ್ದರಾಮಯ್ಯಸ್ವಾಮಿ, ಮುಖಂಡ ಕೆಲೋಜಿ ಸಂತೋಷ ಹಾಗೂ ಬಿಜೆಪಿ ಕಾರ್ಯಕರ್ತರಿದ್ದರು. ವೀಕ್ಷಿಸಿದರು.ವಿಜಯನಗರ ಸಾಮ್ರಾಜ್ಯ ಸ್ಥಾಪನೆಯ ಪ್ರೇರಣೆಯಾಗಿದ್ದ ಕಿಷ್ಕಿಂದಾ ಪಂಪಾಸರೋವರ ಸಮಗ್ರ ಅಭಿವೃದ್ಧಿಗೆ ಸಚಿವ ಬಿ.ಶ್ರೀರಾಮುಲು ಪಣ ತೊಟ್ಟಿದ್ದು ಅವರಿಗೆ ಗುರುಗಳಾದ ವಿದ್ಯಾರಣ್ಯ ಹಕ್ಕಬುಕ್ಕರು ಹಾಗೂ ಶ್ರೀಕೃಷ್ಣದೇವರಾಯರ ಆಶೀರ್ವಾದವಿದೆ. ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಸಚಿವ ಶ್ರೀರಾಮುಲು ಸ್ವಂತ ಹಣ ಖರ್ಚು ಮಾಡಿ ಈಗಾಗಲೇ ಹಂಪಿಯಲ್ಲಿ ಹಲವು ದೇಗುಲ ನಿರ್ಮಿಸಿದ್ದು ಪ್ರಸ್ತುತ ಪಂಪಾಸರೋವರ ಜೀರ್ಣೋದ್ಧಾರ ಮಾಡುತ್ತಿದ್ದು ಪುಣ್ಯದ ಕೆಲಸವಾಗಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಉದಯವಾಣಿ ಗೆ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.