ಜ್ಞಾನ ವಿಕಾಸ ಕಾರ್ಯಕ್ರಮ
Team Udayavani, Jul 12, 2019, 3:05 PM IST
ಕುಷ್ಟಗಿ: ಟಕ್ಕಳಕಿ ಗ್ರಾಮದಲ್ಲಿ ನಡೆದ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಿರೇಮಠ ಮಾತನಾಡಿದರು.
ಕುಷ್ಟಗಿ: ಸಂಸ್ಕೃತಿ, ಸಂಸ್ಕಾರ, ಜೀವನ ವಿಧಾನಗಳ ಬಗ್ಗೆ ಕೇವಲ ಭಾಷಣ, ಬೋಧನೆ ಬದಲಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಅರಿವು ಮೂಡಿಸುವುದು ಅಗತ್ಯ ಎಂದು ಕಂದಕೂರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹಿರೇಮಠ ಹೇಳಿದರು.
ತಾಲೂಕಿನ ಟಕ್ಕಳಕಿ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ನಡೆದ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಸಂಸ್ಕೃತಿ ಸಂಸ್ಕಾರ ವಿಷಯ ಕುರಿತು ಮಾತನಾಡಿದರು. ಸಂಸ್ಕೃತಿ, ಸಂಸ್ಕಾರವನ್ನು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪಂಡಿತ ಪಂಚಾಕ್ಷರಿ ಕವಿ ಗವಾಯಿಗಳು, ಡಾ. ಪುಟ್ಟರಾಜ ಗವಾಯಿಗಳು ಸಂಸ್ಕೃತಿ, ಸಂಸ್ಕಾರಕ್ಕೆ ಪ್ರೇರಣೆಯಾಗಿದ್ದಾರೆ. ಅವರು ನೀಡಿದ ಸಂಗೀತ ಸಂಸ್ಕಾರ ಅಂಧರಿಗೆ ಜ್ಞಾನದ ಬೆಳಕು ನೀಡಿದೆ. ರಮಣ ಮಹರ್ಷಿಗಳ ಸಂಸ್ಕೃತಿ, ಸಂಸ್ಕಾರದ ಕುರಿತು ಮಾಹಿತಿ ನೀಡಿದರು. ಧರ್ಮಸ್ಥಳ ಇಲ್ಲಿಂದ 400 ಕಿ.ಮೀ. ದೂರವಿದೆ. ಆ ಹೆಸರಿನ ಸಂಸ್ಥೆ ಟಕ್ಕಳಕಿ ಗ್ರಾಮದೇವತೆ ಗುಡಿಯಲ್ಲಿ ಜ್ಞಾನ ವಿಕಾಸದಂತಹ ಕಾರ್ಯಕ್ರಮ ಆಯೋಜಿಸಿರುವುದು ಮಾನವ ಅಭಿವೃದ್ಧಿಯ ಸಂಸ್ಕಾರವಾಗಿದೆ ಎಂದರು. ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಚ್. ಹಿರೇಮಠ ಮಾತನಾಡಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ವಿನಾಯಕ ನಾಯಕ್, ಚನ್ನಬಸಪ್ಪ, ವಿಜಯಲಕ್ಷ್ಮೀ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.