ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಜೋಡಿ ಮತ್ತೆ ಹೂವಿನ ಹಾರ ಬದಲಿಸಿಕೊಂಡು ಸಂಸಾರದ ಮತ್ತೂಂದು ಹೆಜ್ಜೆ ಹಾಕಿದರು.

Team Udayavani, Sep 16, 2024, 11:16 AM IST

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

■ ಉದಯವಾಣಿ ಸಮಾಚಾರ
ಕೊಪ್ಪಳ: ಮದುವೆಯಾಗಿ ಕೆಲವೇ ವರ್ಷಗಳಲ್ಲಿ ವೈ ಮನಸ್ಸುಗಳಿಂದ ಜಿಲ್ಲೆಯ ವಿವಿಧ ಕೋರ್ಟ್‌ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 14 ಜೋಡಿಗಳಿಗೆ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ನ್ಯಾಯಾಧೀಶರು ಮನವೊಲಿಕೆ ಮಾಡಿ ಪತಿ-ಪತ್ನಿಗೆ ಬುದ್ದಿ ಹೇಳಿದ್ದಲ್ಲದೇ ಸಂಧಾನ ಮಾಡಿ ಮತ್ತೆ ಕುಟುಂಬದ ಬೆಸುಗೆ ಭಾಗ್ಯ ಕರುಣಿಸಿದರು.

ಹೌದು.. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾ ಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಸಿ ಅವರು ವಿಶೇಷ ಮುತುವರ್ಜಿ ವಹಿಸಿ ಸೆ.14ರಂದು ಆಯೋಜನೆ ಮಾಡಿದ್ದ ರಾಷ್ಟೀಯ ಲೋಕ್‌ ಅದಾಲತ್‌ ಕಾರ್ಯಕ್ರಮವು ಇಂತಹ ವಿಶೇಷತೆಯ ಮೂಲಕ ಹೊಸ ಇತಿಹಾಸ ಬರೆಯಿತು. ರಾಜೀ ಸಂಧಾನದ ಮೂಲಕ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಿದ್ದು ಅದಾಲತ್‌ನ ವಿಶೇಷತೆಯಾಗಿತ್ತು.

ಕೌಟುಂಬಿಕ ಭಿನ್ನಾಭಿಪ್ರಾಯ, ಹಣಕಾಸು ಸಮಸ್ಯೆ, ಕುಡಿತ, ಸೋಮಾರಿತನ, ಅನುಮಾನ ಹೀಗೆ ನಾನಾ ಕಾರಣಕ್ಕೆ ಸಂಸಾರದಲ್ಲಿನ ಸಮಸ್ಯೆಯಿಂದ ವಿಚ್ಛೇದನ ಕೋರಿ ಹದಿನಾಲ್ಕು ಜೋಡಿಗಳು ನ್ಯಾಯಾಲಯದ ಮೆಟ್ಟಿಲು  ಏರಿದ್ದರು. ಅದಾಲತ್‌ನಲ್ಲಿ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು
ಹಾಗೂ ವಕೀಲರು ಆಪ್ತ ಸಮಾಲೋಚನೆ ಮೂಲಕ 14 ಜೋಡಿಗಳ ಸಂಸಾರದ ಅಪಸವ್ಯ ಹೋಗಲಾಡಿಸಿದರು.

ನ್ಯಾಯಾಧೀಶರು ಮತ್ತು ವಕೀಲರು ಆ ಜೋಡಿಗಳಿಗೆ ಅರಿವಿನ ಜ್ಞಾನ ಮೂಡಿಸಿದರು. ಅಜ್ಞಾನದ ದಾರಿ ತಪ್ಪಿಸಿ ಜೀವನದ ಪಯಣದತ್ತ ಸಾಗಲು ತಿಳಿ ಹೇಳಿದರು. ಎಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ವಕೀಲರ ಸಮ್ಮುಖದಲ್ಲಿ ಕೋರ್ಟ್‌ ಆವರಣದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಜೋಡಿ ಮತ್ತೆ ಹೂವಿನ ಹಾರ ಬದಲಿಸಿಕೊಂಡು ಸಂಸಾರದ ಮತ್ತೂಂದು ಹೆಜ್ಜೆ ಹಾಕಿದರು.

3,328 ಪ್ರಕರಣಗಳು ಇತ್ಯರ್ಥ : ವಿಮೆ, ನೀರಿನ ಬಿಲ್‌, ಬ್ಯಾಂಕ್‌ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್‌ ಬೌನ್ಸ್‌ ಪ್ರಕರಣ, ಜನನ ಮರಣ, ಸಿವಿಲ್‌ ಕೇಸ್‌, ಕ್ರಿಮಿನಲ್‌ ಕೇಸ್‌, ಮೋಟಾರ್‌ ವಾಹನ ಅಪಘಾತ, ಎಂಎಂಆರ್‌ಡಿ ಪ್ರಕರಣಗಳು ಹಾಗೂ ಇತ್ಯಾದಿ ಸೇರಿದಂತೆ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ಒಟ್ಟು 4,182
ಪ್ರಕರಣಗಳ ಪೈಕಿ 3,328 ಪ್ರಕರಣ ಇತ್ಯರ್ಥ ಮಾಡಲಾಯಿತು.

ವಿಮೆ, ನೀರಿನ ಬಿಲ್‌, ಮೋಟಾರ್‌ ವಾಹನ ಅಪಘಾತ ಸೇರಿದಂತೆ ವಿವಿಧ ಪ್ರಕರಣ ಇತ್ಯರ್ಥ ಮಾಡಲಾದ ಒಟ್ಟು ಮೌಲ್ಯ 55,38,75,322 ಆಗಿದೆ ಹಾಗೂ ಪೂರ್ವ ದಾವೇ ಪ್ರಕರಣಗಳಿಗೆ ಸಂಬಂಧಿ ಸಿದಂತೆ ಒಟ್ಟು 35,403 ಪ್ರಕರಣಗಳ ಪೈಕಿ 32,393 ಪ್ರಕರಣ ಇತ್ಯರ್ಥಪಡಿಸಲಾಗಿದೆ.

ಇದರ ಒಟ್ಟು ಮೌಲ್ಯ 2,40,85,455 ಇದ್ದು, ಒಟ್ಟು 39,583 ಪ್ರಕರಣಗಳ ಪೈಕಿ 35,721 ಪ್ರಕರಣ ಇತ್ಯರ್ಥಪಡಿಸಲಾಗಿದೆ. ಇತ್ಯರ್ಥಪಡಿಸಿದ ಒಟ್ಟು ಮೌಲ್ಯ 57,79,60,777 ರೂ.ನಷ್ಟಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್‌ ದರಗದ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.